Ads By Google

Gruha lakshmi Rules: ಕುಟುಂಬದ ಯಜಮಾನಿ ಮರಣ ಹೊಂದಿದರೆ ಗೃಹಲಕ್ಷ್ಮಿ ಹಣ ಯಾರಿಗೆ…? ಸ್ಪಷ್ಟನೆ ನೀಡಿದ ಸರ್ಕಾರ.

You can apply for gruha lakshmi Yojana if you receive an SMS

Image Credit: oneindia

Ads By Google

Gruha lakshmi Scheme Rules And Regulations: ಗೃಹ ಲಕ್ಷ್ಮಿ ಯೋಜನೆಯ (Gruha Lakshmi Scheme) ಕುರಿತಾಗಿ ಸುದ್ದಿಗಳು ವೈರಲ್ ಆಗುತ್ತಿವೆ. ಜುಲೈ 20 ರಿಂದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಪ್ರಾರಂಭವಾಗಿದೆ. ಇನ್ನು ಈಗಾಗಲೇ ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನದ ಕುರಿತು ಸಾಕಷ್ಟು ಸುದ್ದಿಗಳು ಹೊರ ಬಿದ್ದಿದ್ದವು.

ಕೊನೆಗೂ ಅರ್ಜಿ ಸಲ್ಲಿಕೆಯ ಬಗ್ಗೆ ರಾಜ್ಯ ಸರ್ಕಾರ(State Government) ಮಾಹಿತಿ ನೀಡಿದೆ. ಇನ್ನು ಗೃಹ ಲಕ್ಷ್ಮಿ ಯೋಜನೆಯ ಹಣ ಪಡೆಯಲು ಕೆಲವು ನಿಯಮಗಳನ್ನು ಅಳವಡಿಸಲಾಗಿದೆ. ರಾಜ್ಯ ಸರ್ಕಾರದ ನಿಯಮದ ಪ್ರಕಾರ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕು.

Image Credit: Mahayojanaa

ಮನೆಯ ಯಜಮಾನಿ ಮರಣ ಹೊಂದಿದರೆ ಏನು ಮಾಡಬೇಕು
ಮನೆ ಒಡತಿಯರು ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ತೊಂದರೆ ಆಗಬಾರದೆಂದು ಕೆಲವು ಪ್ರಮುಖ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಮನೆ ಯಜಮಾನಿಗೆ ಗೃಹ ಲಕ್ಷ್ಮಿ ಯೋಜನೆಯ ಲಾಭ ನೀಡಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.

ಇನ್ನು ಪಡಿತರ ಚೀಟಿಯ ಮುಖ್ಯಸ್ಥೆ ಅಂದರೆ ಮನೆಯ ಯಜಮಾನಿ ಮರಣ ಹೊಂದಿದರೆ ಕುಟುಂಬದವರು ತಕ್ಷಣ ಬೇರೆ ಸದಸ್ಯರ ಹೆಸರನ್ನು ನೊಂದಾಯಿಸಬೇಕಾಗುತ್ತದೆ, ಇಲ್ಲದಿದ್ದರೆ ಗೃಹಲಕ್ಷ್ಮಿ ಯೋಜನೆಯ ಲಾಭ ಸಿಗುವುದಿಲ್ಲ.

ಎಸ್ ಎಂ ಎಸ್ ಬಂದರೆ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯ
ಇನ್ನು ಗೃಹಲಕ್ಷ್ಮಿ ಯೋಜನೆಗೆ ಎಸ್ ಎಂ ಎಸ್ ಬಂದರೆ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳು 8147500500 ಸಂಖ್ಯೆಗೆ ಆಧಾರ್ ಕಾರ್ಡ್ ನಲ್ಲಿ ಲಿಂಕ್ ಆಗಿರುವ ಮೊಬೈಲ್ ನಿಂದ ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು SMS ನ ಮೂಲಕ ಕಳುಹಿಸಬೇಕು.

Image Credit: Hindustantimes

ನಿಮ್ಮ ಸಂದೇಶ ತಲುಪಿದ ಕೆಲವೇ ಕ್ಷಣದಲ್ಲಿ ನಿಮಗೆ VM-SEVSIN ಕರ್ನಾಟಕ ಸರ್ಕಾರದ ವತಿಯಿಂದ ನೀವು ಯಾವ ದಿನಾಂಕದಲ್ಲಿ ಯಾವ ಸಮಯಕ್ಕೆ ಯಾವ ಸ್ಥಳದಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಎನ್ನುವ ಮೆಸೇಜ್ ನಿಮಗೆ ತಲುಪುತ್ತದೆ. ಈ ಮೆಸ್ಸೇಜ್ ನಿಮಗೆ ತಲುಪಿದ ಬಳಿಕ ನೀವು ನಿಮಗೆ ನಿಗದಿಪಡಿಸಿರುವ ಸ್ಥಳ, ದಿನಾಂಕ ಹಾಗೂ ಸ್ಥಳಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದು.

ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮನೆಯ ಯಜಮಾನಿ ಇದರ ಲಾಭ ಪಡೆಯಲು ಅರ್ಜಿ ಸಲ್ಲಿಸುತ್ತಿದ್ದಾರೆ. ಈಗಾಗಲೇ ಕುಟುಂಬದ ಯಜಮಾನಿ ತಮ್ಮ ತಮ್ಮ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಿದ್ದಾರೆ.

Ads By Google
Sujatha Poojari: Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in