Gruha Lakshmi App: ಗ್ರಹಲಕ್ಷ್ಮೀ ಯೋಜನೆ ಬಗ್ಗೆ ಕೊನೆಗೂ ಸಿಗ್ತು ಸಿಹಿಸುದ್ದಿ

ಶೀಘ್ರದಲ್ಲಿ ಗೃಹ ಲಕ್ಷ್ಮಿ ಯೋಜನೆ ಜಾರಿಯಾಗುದರ ಕುರಿತು ಮಾಹಿತಿ ನೀಡಿದ ಸರಕಾರ.

Gruha Lakshmi Scheme Update: ರಾಜ್ಯದ ಜನತೆ ಇದೀಗ ಕಾಂಗ್ರೆಸ್ ಐದು ಭರವಸೆಗಳ ಲಾಭ ಪಡೆಯಲು ಕುತೂಹಲರಾಗಿದ್ದಾರೆ. ಇನ್ನು ಕಾಂಗ್ರೆಸ್ ನ ಐದು ಗ್ಯಾರಂಟಿಗಳಲ್ಲಿ ಮಹಿಳೆಯರ ಶಕ್ತಿ ಯೋಜನೆ ಜಾರಿಯಾಗಿದೆ. ರಾಜ್ಯದಲ್ಲಿ ಲಕ್ಷಾಂತರ ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ.

ಇನ್ನು ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆ ಜಾರಿ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ.ಇದೀಗ ರಾಜ್ಯ ಸರ್ಕಾರದಿಂದ ಗೃಹ ಲಕ್ಷ್ಮಿ ಯೋಜನೆಯ ಕುರಿತಾಗಿ ಮಹತ್ವದ ಮಾಹಿತಿ ಹೊರಬಿದ್ದಿದೆ.

ಶೀಘ್ರವೇ ಜಾರಿಯಾಗಲಿದೆ ಗೃಹ ಲಕ್ಷ್ಮಿ ಯೋಜನೆ
ಗೃಹ ಲಕ್ಷ್ಮಿ ಯೋಜನೆ ಜಾರಿಯಾಗುವ ಮುನ್ನ ಸರ್ಕಾರ ಸಾಕಷ್ಟು ಷರತ್ತುಗಳನ್ನು ವಿಧಿಸಿದೆ. ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಪ್ರತಿ ಮನೆ ಒಡತಿಗೆ ಮಾಸಿಕ 2000 ರೂ. ಗೃಹ ಲಕ್ಷ್ಮಿ ಯೋಜನೆ ಅಡಿಯಲ್ಲಿ ನೀಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಣೆ ಹೊರಡಿಸಿತ್ತು.

Gruha Lakshmi Yojana will be implemented soon
Image Credit: Oneindia

ಒಮ್ಮೆ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಪ್ರಾರಂಭವಾಗಿ ಸೈಬರ್ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಕೆ ಸ್ಥಗಿತಗೊಂಡಿದೆ. ಶೀಘ್ರದಲ್ಲಿ ಗೃಹ ಲಕ್ಷ್ಮಿ ಯೋಜನೆ ಜಾರಿಯಾಗುದರ ಕುರಿತು ಸರಕಾರ ಮಾಹಿತಿ ನೀಡಿದೆ.

ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್
ರಾಜ್ಯ ಸಚಿವ ಸಂಪುಟದಲ್ಲಿ ಇಂದು ಸಭೆ ನಡೆಯಲಿದ್ದು ಸದ್ಯದಲ್ಲೇ ಮಹಿಳೆಯರಿಗೆ ಸಿಹಿ ಸುದ್ದಿ ಸಿಗಲಿದೆ. ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳಾದ ಗೃಹ ಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ, ಉಚಿತ ವಿದ್ಯುತ್ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಗೃಹ ಲಕ್ಷ್ಮಿ ಅರ್ಜಿ ಸಲ್ಲಿಕೆಯ ವಿಚಾರವಾಗಿ ಇಂದು ಮಹತ್ವದ ಆದೇಶ ಹೊರಬೀಳಲಿದೆ.

Join Nadunudi News WhatsApp Group

ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಪ್ರತ್ಯೇಕ ಆಪ್ ರೆಡಿ
ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಜೂನ್ 15 ರಿಂದಲೇ ಆರಂಭವಾಗಬೇಕಿತ್ತು. ಆದರೆ ಸರ್ವರ್ ಡೌನ್ ನ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಕೆ ಇನ್ನು ಕೂಡ ಆರಂಭಗೊಂಡಿಲ್ಲ.

Gruha Lakshmi Yojana will be implemented soon
Image Credit: Thesouthfirst

ಈ ಸಮಸ್ಯೆಯನ್ನು ನಿವಾರಿಸಲು ರಾಜ್ಯ ಸರ್ಕಾರ ಇದೀಗ ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಪ್ರತ್ಯೇಕ ಆಪ್ ಬಿಡುಗಡೆ ಮಾಡಲಿದೆ. ರಾಜ್ಯ ಸಚಿವ ಸಂಪುಟ ಸಭೆ ನಡೆದ ಬಳಿಕ ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಬಳಸಲಾಗುವ ಆಪ್ಲಿಕೇಷನ್ ಅನ್ನು ಬಿಡುಗಡೆಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Join Nadunudi News WhatsApp Group