Gruha Lakshmi: ಗೃಹಲಕ್ಷ್ಮಿ ಹಣ ಖಾತೆಗೆ ಬಾರದೆ ಇರುವವರು ತಕ್ಷಣ ಈ ಕೆಲಸ ಮಾಡಬೇಕು, ಸರ್ಕಾರದ ಸೂಚನೆ.

ಗೃಹಲಕ್ಷ್ಮಿ ಹಣ ಖಾತೆಗೆ ಬಾರದೆ ಇರುವವರು ತಕ್ಷಣ ಈ ಕೆಲಸ ಮಾಡಬೇಕು

Gruha Lakshmi New Update: ರಾಜ್ಯ ಸರ್ಕಾರದ ಮಹತ್ವಾಕಾಂಶೆಯ ಯೋಜನೆಯಾದ Gruha Lakshmi ಯೋಜನೆ ಈಗಲೂ ಕೂಡ ಹೊಸ ಹೊಸ ಅಪ್ಡೇಟ್ ನೊಂದಿಗೆ ದಿನೇ ದಿನೇ ಸುದ್ದಿಯಲ್ಲಿದೆ. ಗೃಹ ಲಕ್ಷ್ಮಿ ಫಲಾನುಭವಿಗಳು ಮಾಸಿಕವಾಗಿ 2000 ಹಣವನ್ನು ಪಡೆಯುತ್ತಿದ್ದಾರೆ.

ಇನ್ನು ಗೃಹ ಲಕ್ಷ್ಮಿ ಯೋಜನೆಯಡಿ ಈವರೆಗೆ 8 ಕಂತುಗಳ ಹಣ ಬಿಡುಗಡೆಯಾಗಿದ್ದು, ಅರ್ಹ ಮಹಿಳೆಯರು ಯೋಜನೆಯ ಹಣವನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇನ್ನು ಗೃಹ ಲಕ್ಷ್ಮಿ ಯೋಜನೆಯು ತಾಂತ್ರಿಕ ದೋಷದ ಕಾರಣ ಸಂಪೂರ್ಣ ಅರ್ಹರಿಗೆ ತಲುಪುತ್ತಿಲ್ಲ. ಇದಕ್ಕಾಗಿ ಸರ್ಕಾರ ಅನೇಕ ಕ್ರಮ ಕೈಗೊಳ್ಳುತ್ತಿದೆ. ಸದ್ಯ ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ.

Gruha Lakshmi New Update
Image Credit: Oneindia

ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್
ಗೃಹ ಯೋಜನೆಯಡಿ ಸದ್ಯ ರಾಜ್ಯ ಸರ್ಕಾರ 8ನೇ ಕಂತಿನ ಹಣ ಬಿಡುಗಡೆಗೆ ದಿನಾಂಕವನ್ನು ನಿಗದಿ ಮಾಡಿದೆ. ಮೇ ಮೊದಲ ವಾರದಲ್ಲಿ ಫಲಾನುಬಾಹಿಗಳು 8 ನೇ ಕಂತಿನ ಹಣ ಜಮಾ ಆಗಲಿದೆ. ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರು ಇಲ್ಲಿಯವರೆಗೆ 16,000 ಹಣವನ್ನು ಪಡೆದಿದ್ದಾರೆ. ಇನ್ನು ಯಾರು ಹಣವನ್ನು ಪಡೆದಿಲ್ಲವೋ ಅಂತವರು ಆದಷ್ಟು ಬೇಗ ತಮ್ಮ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಇನ್ನು 8 ನೇ ಕಂತಿನ ಬಳಿಕ ಮೇ ತಿಂಗಳಿನಲ್ಲಿ 9 ನೇ ಕಂತಿನ ಹಣ ಕೂಡ ಬಿಡುಗಡೆಯಾಗಲಿದೆ. ಯೋಜನೆಯ ಫಲಾನುಭವಿಗಳು 8 ನೇ ಕಂತಿನ ಹಣ ಪಡೆಯಲು ತಕ್ಷಣ ಈ ಕೆಲಸ ಮಾಡಬೇಕಾಗಿದೆ.

Congress Gruha Lakshmi
Image Credit: Kannada News

ಗೃಹಲಕ್ಷ್ಮಿ ಹಣ ಖಾತೆಗೆ ಬಾರದೆ ಇರುವವರು ತಕ್ಷಣ ಈ ಕೆಲಸ ಮಾಡಬೇಕು
•ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಫಲಾನುಭವಿಗಳಿಗೆ KYC ಅಪ್ಡೇಟ್ ಅನ್ನು ಕಡ್ಡಾಯಗಳಿಸಿದೆ. KYC ನವೀಕರಣ ಆಗದ ಮಹಿಳೆಯರ ಖಾತೆಗೆ ಯಾವುದೇ ಕಾರಣಕ್ಕೂ ಗೃಹ ಲಕ್ಷ್ಮಿ ಯೋಜನೆಯ ಹಣ ಜಮಾ ಆಗುವುದಿಲ್ಲ. ನೀಡಿರುವ ಬ್ಯಾಂಕ್ ಖಾತೆಗೆ ನೀವು ಮತ್ತೆ KYC ಮಾಡಬೇಕು. ಅಂದರೆ ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಆಧಾರ್ ಸೀಡಿಂಗ್ ಮಾಡಿ ನಂತರ ಹಣ ಜಮೆಯಾಗುತ್ತದೆ.

•ಇನ್ನು KYC Update ನ ಜೊತೆಗೆ NPCI Link ಕೂಡ ಅಗತ್ಯವಾಗಿದೆ. ಫಲಾನುಭವಿಗಳು ತಕ್ಷಣ NPCI ಲಿಂಕ್ ಮಾಡಬೇಕಿದೆ. ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ನೀವು ಈ ಕೆಲಸವನ್ನು ಪೂರ್ಣಗೊಳಿಸಿಕೊಳ್ಳಬಹುದು.

Join Nadunudi News WhatsApp Group

•ಇನ್ನು ನಿಮ್ಮ ಮೊಬೈಲ್ ನಂಬರ್ ಗೆ ಬ್ಯಾಂಕ್ ಅಕೌಂಟ್ ಹಗೂ ಆಧಾರ್ ಲಿಂಕ್ ಆಗುವುದು ಕೂಡ ಮುಖ್ಯವಾಗಿದೆ. ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಆಗದೆ ಇದ್ದರೆ ನಿಮ್ಮ ಖಾತೆಗೆ ಯೋಜನೆಯ ಹಣ ಜಮಾ ಆಗಿದೆಯಾ ಅಥವಾ ಇಲ್ಲವ ಎನ್ನುವ ಬಗ್ಗೆ ನಿಮಗೆ ಸಂದೇಶ ರವಾನೆ ಆಗುವುದಿಲ್ಲ.

•ಇನ್ನು ಅರ್ಜಿ ಸಲ್ಲಿಕೆಯ ವೇಳೆ ನೀವು ನೀಡಿದ ಬ್ಯಾಂಕ್ ಅಕೌಂಟ್ ಸರಿಯಾಗಿದೆಯೇ ಎನ್ನುವುದನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ನಿಮ್ಮ ಖಾತೆ ಕ್ಲೋಸ್ ಆಗಿದ್ದರೆ ಹಣ ಜಮಾ ಆಗುವುದು ಕಷ್ಟ.

Gruha Lakshmi Status Check
Image Credit: ETV Bharat

Join Nadunudi News WhatsApp Group