Gruha Lakshmi: ನಿಮ್ಮ ಗೃಹಲಕ್ಷ್ಮಿ ಅರ್ಜಿ ಅಪ್ರೋವ್ ಆಗಿದ್ಯೋ… ಇಲ್ವೋ ಹೀಗೆ ಚೆಕ್ ಮಾಡಿ, ಇಂತಹ ಅರ್ಜಿ ತಿರಸ್ಕಾರ ಮಾಡಲಾಗಿದೆ.
ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಯಶಸ್ವಿ ಆಗಿದೆಯೇ ಇಲ್ಲವೇ ಎಂದು ಈ ರೀತಿಯಾಗಿ ಪರಿಶೀಲಿಸಿಕೊಳ್ಳಿ.
Gruha Lakshmi Yojana Application Status: ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (Congress Government)ಘೋಷಣೆ ಮಾಡಿದ ಕೆಲವು ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿದೆ. ಸಿದ್ದರಾಮಯ್ಯ (Siddaramaiah)ಸರ್ಕಾರ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಸಾವಿರಾರು ಮಂದಿ ಈ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಇನ್ನಷ್ಟು ಸುಲಭಗೊಂಡಿದೆ. ಈಗ ನೀವು ನೇರವಾಗಿ ಗೃಹ ಲಕ್ಷ್ಮಿ (Gruha Lakshmi)ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದೀಗ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರ ಗಳಿಗೆ ತೆರಳಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ನಿಮ್ಮ ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಆಗಿದೆಯೇ ಇಲ್ಲವೇ ಎಂಬುದನ್ನು ಈ ರೀತಿಯಾಗಿ ಪರೀಕ್ಷಿಸಿಕೊಳ್ಳಬಹುದಾಗಿದೆ.
ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ
ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯಿಂದ 8147500500 ಸಂಖ್ಯೆಗೆ SMS ಮಾಡುವ ಮೂಲಕ ನಿಮ್ಮ ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದು. ನಿಮ್ಮ ಅರ್ಜಿ ಸಲ್ಲಿಕೆ ಆಗಿದ್ದರೆ, ಅರ್ಜಿ ಸಲ್ಲಿಕೆ ಯಶಸ್ವಿ ಆಗಿದೆ ಎಂದು SMS ಬರುತ್ತದೆ. ಇಲ್ಲವಾದರೆ ಮತ್ತೆ ಹೋಗಿ ಗೃಹ ಲಕ್ಷ್ಮಿ ನೊಂದಣಿಯನ್ನು ಮಾಡಬೇಕು.
ಗೃಹ ಲಕ್ಷ್ಮಿ ಯೋಜನೆಯ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬರುದರಿಂದ ನಿಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು. ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗದಿದ್ದರೆ ಗೃಹ ಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ. ಹಾಗಾಗಿ ತಪ್ಪದೆ ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು.
ನಿಮ್ಮ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು NPCI ಮ್ಯಾಪಿಂಗ್ ಮಾಡಿಸಬೇಕು. ಹಾಗೆ ಆಧಾರ್ ಕಾರ್ಡ್ ಲಿಂಕ್ ಆಗಿರುವ ಖಾತೆಗೆ ಈಗಾಗಲೇ ಅನ್ನ ಭಾಗ್ಯ ಯೋಜನೆಯ ಹಣ ಬಂದಿದೆ. ಅದೇ ರೀತಿಯಲ್ಲಿ ಗೃಹ ಲಕ್ಷ್ಮಿ ಯೋಜನೆಯ ಹಣ ಕೂಡ ಬರಲಿದೆ ಎಂದು ಹೇಳಲಾಗುತ್ತಿದೆ.
ಈ ರೀತಿಯಾಗಿ ಪರಿಶೀಲಿಸಿಕೊಳ್ಳಿ ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ
ನೀವು ಮೊದಲು https://ahara.kar.nic.in/Home/EServices ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಂತರ ಎಡಭಾಗದಲ್ಲಿ ಮೂರೂ ಗೆರೆಗಳು ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದ ನಂತರ ಕೆಳಗೆ e -Ration card ಮೇಲೆ ಕ್ಲಿಕ್ ಮಾಡಿ ಅದಾದ ನಂತರ ನಿಮಗೆ show village list ಎಂಬ ಆಯ್ಕೆ ಸಿಗುತ್ತದೆ ಅದರ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ, ಪಂಚಾಯಿತಿಯನ್ನ ಸೆಲೆಕ್ಟ್ ಮಾಡಿ ಗೋ ಮೇಲೆ ಕ್ಲಿಕ್ ಮಾಡಿದ್ರೆ ನಿಮ್ಮ ಗ್ರಾಮದ ಪ್ರತಿಯೊಬ್ಬರ ರೇಷನ್ ಕಾರ್ಡ್ ನ ಯಜಮಾನಿಯರ ಸಂಪೂರ್ಣ ಮಾಹಿತಿ ಸಿಗುತ್ತದೆ.
ಆ ಪಟ್ಟಿಯಲ್ಲಿರುವ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಗೆ ಅರ್ಹರಿರುತ್ತಾರೆ. ಅವರಿಗೆ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯ 2000 ಹಣ ನೀಡುತ್ತದೆ. ಇನ್ನು ಗೃಹ ಲಕ್ಷ್ಮಿ ಯೋಜನೆಗೆ ನೊಂದಾಯಿಸಲು SMS ಗಾಗಿ ಕಾಯುವ ಅವಶ್ಯಕತೆ ಇಲ್ಲ ನೇರವಾಗಿ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಸೇವಾಸಿಂಧು ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದು.