Gruha Lakshmi: ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುತ್ತಿರುವ ಮಹಿಳೆಯರಿಗೆ ಗುಡ್ ನ್ಯೂಸ್, ಇನ್ನೊಂದು ಘೋಷಣೆ.

ಗೃಹಲಕ್ಷ್ಮಿ ಯೋಜನೆಯ ಕುರಿತಂತೆ ಇನ್ನೊಂದು ಆದೇಶ ಹೊರಡಿಸಿದ ಕರ್ನಾಟಕ ರಾಜ್ಯ ಸರ್ಕಾರ

Gruha Lakshmi Latest Update: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ Gruha Lakshmi ಯೋಜನೆಯು ಈಗಾಗಲೇ ರಾಜ್ಯದಲ್ಲಿ ಅನುಷ್ಠಾನಗೊಂಡು ಮಹಿಳೆಯರಿಗೆ ಸಾಕಷ್ಟು ಅನುಕೂಲವನ್ನು ಮಾಡಿಕೊಟ್ಟಿದೆ. ಮಹಿಳೆಯರು ಈಗಾಗಲೇ ಈ ಯೋಜನೆಯಡಿ ಮಾಸಿಕ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ.

ಆದರೆ ಗೃಹ ಲಕ್ಷ್ಮಿ ಯೋಜನೆಯ ಇನ್ನು ಕೂಡ ಒಂದೂ ಕಂತಿನ ಹಣವನ್ನು ಪಡೆಯದ ಅದೆಷ್ಟೋ ಮಹಿಳೆಯರಿದ್ದಾರೆ. ಮಹಿಳೆಯರು ಈ ಬಗ್ಗೆ ದೂರುತ್ತಲೇ ಇದ್ದಾರೆ ಹಾಗೆ ಸರ್ಕಾರವು ಸಮಸ್ಯೆಗಳನ್ನು ಸರಿಪಡಿಸಲು ಹಲವು ಕ್ರಮ ಕೈಗೊಳ್ಳುತ್ತಿದೆ. ಸದ್ಯ ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಬಿಗ್ ಅಪ್ಡೇಟ್ ಹೊರಬಿದ್ದಿದೆ.

gruha lakshmi yojana latest update
Image Credit: Original Source

ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುತ್ತಿರುವ ಮಹಿಳೆಯರಿಗೆ ಗುಡ್ ನ್ಯೂಸ್
ಗೃಹಲಕ್ಷ್ಮಿ ಯೋಜನೆಯಡಿ ಗೃಹಿಣಿಯರು ಪ್ರತಿ ತಿಂಗಳು 2000 ರೂಪಾಯಿಗಳನ್ನು ತಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಿಕೊಳ್ಳುತ್ತಿದ್ದಾರೆ. ಆದರೆ ಲಕ್ಷಾಂತರ ಜನರಿಗೆ ಇನ್ನೂ ಗೃಹಲಕ್ಷ್ಮಿ ಯೋಜನೆ ಹಣ ಸಿಕ್ಕಿಲ್ಲ. ಅಂತವರಿಗೆ ಈಗ ಸರ್ಕಾರದಿಂದ ಒಳ್ಳೆಯ ಸುದ್ದಿ ಸಿಕ್ಕಿದೆ. ಕಾಂಗ್ರೆಸ್ ಖಾತರಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ 16,000 ರೂಪಾಯಿಗಳನ್ನು ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗಿದೆ. ಗೃಹಿಣಿಯರು ಕಳೆದ ಎಂಟು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಈಗ ಸರ್ಕಾರ ಹೆಚ್ಚುವರಿ ಹಣ ಬಿಡುಗಡೆ ಮಾಡಿದೆ.

ಗೃಹಲಕ್ಷ್ಮಿ ಯೋಜನೆಗಾಗಿ ಹೆಚ್ಚುವರಿ ಹಣ ಬಿಡುಗಡೆ ಮಾಡಿದ ಸರ್ಕಾರ
ಇಕೆವೈಸಿ ಇಲ್ಲದಿರುವವರು, ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್, ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಲಿಂಕ್ ಆಗದೆ ಇರುವುದು, ಆಧಾರ್ ಸೀಡಿಂಗ್ ಮಾಡದವರ ಖಾತೆಗಳಿಗೆ ಇನ್ನೂ ಜಮಾ ಆಗಿಲ್ಲ. ಈ ಕಾರಣಕ್ಕಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕೆ ಈಗಾಗಲೇ ಹಲವು ಯೋಜನೆಗಳನ್ನು ರೂಪಿಸಿದೆ. ತಾಂತ್ರಿಕ ಸಮಸ್ಯೆ ಬಾಕಿ ಇದ್ದು, ಉಳಿದವರ ಖಾತೆಗೆ ಹಣ ಜಮಾ ಆಗುವ ಬಗ್ಗೆ ಖಚಿತತೆ ಇಲ್ಲ. ಆದರೆ 6, 7 ಮತ್ತು 8 ನೇ ಕಂತುಗಳ ಉಳಿದ ಖಾತೆಗಳಿಗೆ ಗೃಹಲಕ್ಷ್ಮಿ ಹಣವನ್ನು ವರ್ಗಾಯಿಸಲಾಗುತ್ತದೆ.

gruha lakshmi yojana karnataka
Image Credit: Original Source

ಇದಲ್ಲದೇ ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಹೊಸ ಖಾತೆ ಮಾಡಿ ಗೃಹಲಕ್ಷ್ಮಿ ಯೋಜನೆಗೆ ಲಿಂಕ್ ಮಾಡಿದವರಿಗೂ ಹಣ ಸಿಗಲಿದೆ ಎನ್ನಲಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಿದೆ. ಗೃಹಲಕ್ಷ್ಮಿ ಹಣ ವರ್ಗಾವಣೆ ಮಾಡಲು ಸಾಧ್ಯವಾಗದವರೂ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕರ ಸಹಾಯ ಪಡೆದು ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಏಪ್ರಿಲ್ 20 ರೊಳಗೆ ಗೃಹಲಕ್ಷ್ಮಿ ಯೋಜನೆಯ ಗೃಹಿಣಿಯರಿಗೆ ಎಲ್ಲಾ ಬಾಕಿ ಹಣವನ್ನು ವರ್ಗಾಯಿಸಲಾಗುವುದು. ಹಾಗೆಯೆ ಈ ತಿಂಗಳೊಳಗೆ ಗೃಹ ಲಕ್ಷ್ಮಿ ಯೋಜನೆಯ 8 ನೇ ಕಂತಿನ ಹಣ ಕೂಡ ಜಮಾ ಆಗಲಿದೆ.

Join Nadunudi News WhatsApp Group

karnataka congress government schemes
Image Credit: Original Source

Join Nadunudi News WhatsApp Group