Gruhalakshmi Co-operative Society Launch Karnataka: ಇತ್ತೀಚಿಗೆ ಕರ್ನಾಟಕ ರಾಜ್ಯ ಸರ್ಕಾರ ಮಹಿಳೆಯರ ಪ್ರಗತಿಗಾಗಿ ಅನೇಕ ಹೊಸ ಯೋಜನೆಯನ್ನು ರಾಜ್ಯದಲ್ಲಿ ತಂದಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮಹಿಳೆಯರ ಖಾತೆಗೆ 2000 ರೂಪಾಯಿ ಹಣವನ್ನು ಜಮಾ ಮಾಡುವ ಕೆಲಸ ಮಾಡುತ್ತಿದೆ. ಈ ನಡುವೆ ಕರ್ನಾಟಕ ರಾಜ್ಯ ಸರ್ಕಾರ ಮಹಿಳೆಯರ ಪ್ರಗತಿಯ ಉದ್ದೇಶದಿಂದ ಇನ್ನೊಂದು ಹೊಸ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತಂದಿದೆ. ಮಹಿಳೆಯರಿಗೆ ಆರ್ಥಿಕವಾಗಿ ಸಹಾಯ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ರಾಜ್ಯಾದ್ಯಂತ ಜಾರಿಗೆ ತಂದಿದೆ. ಹಾಗಾದರೆ ಮಹಿಳೆಯರ ಪ್ರಗತಿಗಾಗಿ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಇನ್ನೊಂದು ಯೋಜನೆ ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಮಹಿಳಾ ಸಬಲೀಕರಣಕ್ಕಾಗಿ ಇನ್ನೊಂದು ಹೆಜ್ಜೆ
ಈಗಾಗಲೇ ಕರ್ನಾಟಕ ಸರ್ಕಾರ ಮಹಿಳೆಯರ ಸಬಲೀಕರಣ ಉದ್ದೇಶದಿಂದ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಈಗ ಮತ್ತೆ ಮಹಿಳೆಯರ ಸಬಲೀಕರಣದ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರ ಇನ್ನೊಂದು ದೊಡ್ಡ ಹೆಜ್ಜೆ ಇಟ್ಟಿದೆ. ನವೆಂಬರ್ 19 ರಂದು ಕರ್ನಾಟಕ ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಗೃಹಲಕ್ಷ್ಮಿ ಸಹಕಾರ ಸಂಘಕ್ಕೆ ಚಾಲನೆ ನೀಡುತ್ತಿದೆ. ಈ ಗೃಹಲಕ್ಷ್ಮಿ ಸಹಕಾರ ಸಂಘದ ಮೂಲಕ ಮೂಲಕ ಮಹಿಳೆಯರು ಅತೀ ಕಡಿಮೆ ಬಡ್ಡಿದರದಲ್ಲಿ ಸಾಲ ಪಡೆದುಕೊಳ್ಳಬಹುದು.
ಗೃಹಲಕ್ಷ್ಮಿ ಸಹಕಾರ ಸಂಘಕ್ಕೆ ಚಾಲನೆ
ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಈ ಹೊಸ ಯೋಜನೆ ಆರಂಭವಾಗುತ್ತಿದೆ. ಸರ್ಕಾರದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ಸುಮಾರು 1.2 ಕೋಟಿ ಮಹಿಳೆಯರು ಈಗಾಗಲೇ ಜಾರಿಯಲ್ಲಿರುವ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆದುಕೊಳ್ಳುತ್ತಾರೆ ಮತ್ತು ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಯೋಜನೆಗಾಗಿ ₹52,000 ಕೋಟಿಗೂ ಹೆಚ್ಚು ಹಣವನ್ನು ಖರ್ಚು ಮಾಡಿದೆ. ಗೃಹಲಕ್ಷ್ಮಿ ಸಹಕಾರ ಸಂಘದ ಮೂಲಕ ಖಾಸಗಿ ಬ್ಯಾಂಕುಗಳಿಂದ ಅತೀ ಕಡಿಮೆ ಬಡ್ಡಿದರದಲ್ಲಿ ಮಹಿಳೆಯರು ಸಾಲ ಪಡೆದುಕೊಳ್ಳಬಹುದು.
ಮಹಿಳೆಯರು ಎಷ್ಟು ಸಾಲ ಪಡೆದುಕೊಳ್ಳಬಹುದು
ಮಹಿಳೆಯರು ಗೃಹಲಕ್ಷ್ಮಿ ಸಹಕಾರ ಸಂಘದಿಂದ ಸುಮಾರು 3 ಲಕ್ಷ ರೂಪಾಯಿಯ ತನಕ ಅತೀ ಕಡಿಮೆ ಬಡ್ಡಿದರದಲ್ಲಿ ಸಾಲ ಪಡೆದುಕೊಳ್ಳಬಹುದು. ಮಹಿಳೆಯರು ಈ ಸಾಲವನ್ನು ವ್ಯಾಪಾರ, ಚಿಕ್ಕ ಉದ್ಯಮ, ತರಕಾರಿ ಅಂಗಡಿ, ಜಾನುವಾರು ಸಾಕಾಣಿಕೆ ಅಥವಾ ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳಬಹುದು. ಮಹಿಳೆಯರು ಕೆಲವು ಕನಿಷ್ಠ ದಾಖಲೆ ಕೊಡುವುದರ ಮೂಲಕ ಸಾಲ ಪಡೆದುಕೊಳ್ಳಬಹುದು. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು 2000 ರೂ ಪಡೆದುಕೊಳ್ಳುವ ಮಹಿಳೆಯರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
ಸಾಲಕ್ಕೆ ಅರ್ಜಿ ಸಲ್ಲಿಸುವ ವಿಧಾನ
ಸಾಲಕ್ಕೆ ಅರ್ಜಿ ಸಲ್ಲಿಸುವ ಮಹಿಳೆಯರು ಮೊದಲನೆಯದಾಗಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಸಹಕಾರ ಸಂಘದ ಸದಸ್ಯರಾಗಿ ನೋಂದಾಯಿಸಬಹುದು. ರೇಷನ್ ಕಾರ್ಡ್, ಆಧಾರ್ ಕಾರ್ಡ್, ಮಾಡುವ ಉದ್ಯಮದ ವಿವರ, ಬ್ಯಾಂಕ್ ಪಾಸ್ ಬುಕ್ ಸೇರಿದಂತೆ ಇತರೆ ಅಗತ್ಯ ದಾಖಲೆ ಕೊಡುವುದು ಕೂಡ ಕಡ್ಡಾಯವಾಗಿದೆ. ನವೆಂಬರ್ 19 ನೇ ತಾರೀಕಿನಂದು ಕರ್ನಾಟಕದ ಕೆಲವು ಈ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ಬರಲಿದೆ.
Disclaimer: This information is provided for awareness purposes only. For personalised legal advice, consult a qualified professional and refer to official government notifications.

