H.D Kumaraswamy: ಈ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಪತನ ಆಗಲಿದೆ, ಸ್ಪೋಟಕ ಹೇಳಿಕೆ ನೀಡಿದ ಕುಮಾರಸ್ವಾಮಿ

ಕಾಂಗ್ರೆಸ್ ಸರ್ಕಾರದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ H.D Kumaraswamy.

H.D Kumaraswamy About Congress Govt: ಸದ್ಯ ರಾಜ್ಯದಲ್ಲಿ 2023 ರ ಮೇ ತಿಂಗಳಿನಿಂದ Congress Govt ಅಧಿಕಾರವನ್ನು ಪಡೆದುಕೊಂಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರವನ್ನು ಪಡೆದುಕೊಳ್ಳಲು ಐದು ಗ್ಯಾರಂಟಿ ಯೋಜನೆಗಳನ್ನು ಅಸ್ತ್ರವನ್ನಾಗಿ ಬಳಸಿದೆ.

ಜನರು ಉಚಿತ ಗ್ಯಾರಂಟಿ ಯೋಜನೆಗಳಿಗಾಗಿ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡಿದ್ದರು. ರಾಜ್ಯ ಸರ್ಕಾರ ಒಂದೊಂದೇ ಉಚಿತ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತ ನಾಲ್ಕು ಗ್ಯಾರಂಟಿ ಯೋಜನಗಳನ್ನು ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದೆ.

H.D Kumaraswamy Latest News
Image Credit: Vartha Bharati

ಕಾಂಗ್ರೆಸ್ ಸರ್ಕಾರದ ಪತನದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಕುಮಾರಸ್ವಾಮಿ
ಇನ್ನೇನು ಒಂದು ಯೋಜನೆ ಮಾತ್ರ ಬಾಕಿ ಇದೆ. ಇನ್ನು ಉಚಿತ ಗ್ಯಾರಂಟಿ ಯೋಜನೆಗಳು ಸರ್ಕಾರದ ಬೊಕ್ಕಸಕ್ಕೆ ಹೆಚ್ಚಿನ ನಷ್ಟವನ್ನು ಉಂಟುಮಾಡಿದೆ. ಉಚಿತ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಈಗಾಗಲೇ ಸಾವಿರ ಕೋಟಿ ಹಣವನ್ನು ವ್ಯಯಿಸುತ್ತಿದೆ. ವಿರೋಧ ಪಕ್ಷಗಳು ಸರ್ಕಾರ ಗ್ಯಾರಂಟಿ ಯೋಜನೆಗಳ ಜಾರಿಗೆ ವಿರೋಧ ವ್ಯಕ್ತಪಡಿಸುತ್ತಲೇ ಇದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ H.D Kumaraswamy ಅವರು ಕಾಂಗ್ರೆಸ್ ಸರ್ಕಾರದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಯಾವಾಗ ಪತನವಾಗುತ್ತದೆ ಎನ್ನುವ ಬಗ್ಗೆ ನೇರ ಉತ್ತರ ನೀಡಿದ್ದಾರೆ.

ಈ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಪತನ ಆಗಲಿದೆ
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಬೆಳತೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಪತನದ ಬಗ್ಗೆ ಹೇಳಿಕೆ ನೀಡಿದ್ದಾರೆ. “5 ವರ್ಷ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರಲ್ಲ. ಮೇ ತಿಂಗಳ ನಂತರ ಸರ್ಕಾರ ಉರುಳುತ್ತದೆ, ಯಾವುದೇ ಕಾರಣಕ್ಕೂ ಸರ್ಕಾರ ಉಳಿಯುವುದಿಲ್ಲ.

H.D Kumaraswamy About Congress Govt
Image Credit: New Indian Express

ಅದೇ ರೀತಿ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ. ಈ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು. ಪ್ರಭಾವಿ ಸಚಿವರೊಬ್ಬರು ತಮ್ಮ ಮೇಲಿನ ಪ್ರಕರಣಗಳಿಂದ ಪಾರಾಗಲು ಹರಸಾಹಸ ಪಡುತ್ತಿದ್ದಾರೆ. ಯಾವ ಕ್ಷಣದಲ್ಲಾದರೂ “ಮಹಾರಾಷ್ಟ್ರದಲ್ಲಾದಂತೆ ಇಲ್ಲಿ ಸಹ ಬಂಡಾಯ ನಾಯಕರಾಗಿ ಯಾರು ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ. ಸದ್ಯದ ರಾಜಕೀಯ ವಾತಾವರಣ ನೋಡಿದರೆ ಏನು ಬೇಕಾದರೂ ಆಗಬಹುದು. ಸರ್ಕಾರ ಯಾವಾಗ ಬಿದ್ದುಹೋಗುತ್ತೋ ಗೊತ್ತಿಲ್ಲ” ಎಂದು ಕುಮಾರಸ್ವಾಮಿ ಸ್ಪೋಟಕ ಹೇಳಿದರು.

Join Nadunudi News WhatsApp Group

Join Nadunudi News WhatsApp Group