HDK Health: ಎಚ್ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು, ದಿಡೀರ್ ಆಸ್ಪತ್ರೆಗೆ ದಾಖಲಾದ HDK.

ಹೆಚ್. ಡಿ ಕುಮಾರಸ್ವಾಮಿ ಅವರ ಆರೋಗ್ಯದ ಸ್ಥಿತಿ ಬಗ್ಗೆ ಮೂಲಗಳಿಂದ ಮಾಹಿತಿ ಲಭಿಸಿದೆ.

H.D Kumaraswamy Health Condition: ಜೆಡಿಎಸ್ ನಾಯಕ ಹೆಚ್. ಡಿ ಕುಮಾರಸ್ವಾಮಿ (H.D Kumaraswamy) ಅವರು ಇದೀಗ ತಮ್ಮ ಆರೋಗ್ಯದ ವಿಚಾರವಾಗಿ ಸುದ್ದಿಯಾಗಿದ್ದರೆ. 2006 ರಲ್ಲಿ ಕರ್ನಾಟಕದ 12 ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಹೆಚ್. ಡಿ ಕುಮಾರಸ್ವಾಮಿ ಅವರ ಅಧಿಕಾರ ಅವಧಿಯಲ್ಲಿ ರಾಜ್ಯದಲ್ಲಿ ಸಾಕಷ್ಟು ಸೌಲಭ್ಯವನ್ನು ಒದಗಿಸಿದ್ದರು.

ಜನಸಾಮಾನ್ಯರಿಗೆ ಆರ್ಥಿಕವಾಗಿ ನೆರವಾಗುವ ಮೂಲಕ ಅನೇಕ ಜನರ ಪ್ರೀತಿ ಸಂಪಾದಿಸಿದ್ದಾರೆ. ಈಗಲೂ ಕೂಡ ಜನತಾದಳ ಪಕ್ಷದಲ್ಲಿ ಯಶಸ್ವಿ ರಾಜಕಾರಣಿಯಾಗಿದ್ದಾರೆ. ಆದರೆ ಇದೀಗ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರ ಆರೋಗ್ಯದ ಸ್ಥಿತಿ ಹದಗೆಟ್ಟಿದೆ. ಹೆಚ್. ಡಿ ಕುಮಾರಸ್ವಾಮಿ ಅವರ ಆರೋಗ್ಯದ ಸ್ಥಿತಿ ಬಗ್ಗೆ ಮೂಲಗಳಿಂದ ಮಾಹಿತಿ ಲಭಿಸಿದೆ.

H.D Kumaraswamy Health Condition
Image Credit: Udayavani

ಎಚ್ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು
ಇದೀಗ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಎಚ್ ಡಿ ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಬೆಳಿಗ್ಗೆ ಎಚ್ ಡಿ ಕುಮಾರಸ್ವಾಮಿ ಅವರಿಗೆ ಜ್ವರ ಕಾಣಿಸಿಕೊಂಡಿದೆ.

ಇವರ ಆರೋಗ್ಯ ಸಮಸ್ಯೆ ಕುಟುಂಬದವರನ್ನು ಚಿಂತೆಗೀಡು ಮಾಡಿದೆ. ತೀವ್ರ ಜ್ವರದ ಹಿನ್ನಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

H.D Kumaraswamy Health Condition
Image Credit: Timesofindia

ಕುಮಾರಸ್ವಾಮಿ ಅವರ ಕುಟುಂಬದವರು ಆಸ್ಪತ್ರೆಗೆ ಧಾವಿಸಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಕುಮಾರಸ್ವಾಮಿ ಅವರು ತಕ್ಷಣ ಚೇತರಿಸಿಕೊಳ್ಳಲಿ ಎಂದು ಹಿತೈಷಿಗಳು, ಕುಟುಂಬದವರು ಆಶಿಸುತ್ತಿದ್ದಾರೆ. ಇನ್ನು ಇದೊಂದು ಸಾಮಾನ್ಯ ಜ್ವರ ಆಗಿದ್ದು ಯಾರು ಭಯಪಡುವ ಅಗತ್ಯ ಇಲ್ಲ ಎಂದು ಚಿಕಿತ್ಸೆ ನೀಡಿದ ವೈದ್ಯರು ಕುಮಾರವಾಮಿ ಅವರ ಆರೋಗ್ಯದ ಬಗ್ಗೆ ಮಾಹಿತಿಯನ್ನ ನೀಡಿದ್ದಾರೆ.

Join Nadunudi News WhatsApp Group

Join Nadunudi News WhatsApp Group