H.D Kumaraswamy: ಅನಾರೋಗ್ಯದಿಂದ ಆಸ್ಪತ್ರೆ ಸೇರಿಕೊಂಡ ಕುಮಾರಸ್ವಾಮಿ, ಆರೋಗ್ಯ ವಿಚಾರಿಸಿದ ಆದಿಚುಂಚನಗಿರಿ ಶ್ರೀಗಳು.
ನಿರಂತರ ಪ್ರಚಾರ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿಯವರು ತೊಡಗಿಸಿಕೊಂಡ ಕಾರಣ ಅವರಿಗೆ ಜ್ವರ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
H.D Kumaraswamy Hospitalized: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ರಾಜಕಾರಣಿಗಳ ಪ್ರಚಾರ ಹೆಚ್ಚಾಗಿದೆ. ಬೇರೆ ಬೇರೆ ಪಕ್ಷದ ನಾಯಕರು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಎಲೆಕ್ಷನ್ ಪ್ರಚಾರದ ಹಿನ್ನಲೆಯಲ್ಲಿ ಕುಮಾರಸ್ವಾಮಿ (H.D Kumaraswamy) ಅವರಿಗೆ ಜ್ವರ ಕಾಣಿಸಿಕೊಂಡಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅನಾರೋಗ್ಯದಿಂದ ಆಸ್ಪತ್ರೆ ಸೇರಿಕೊಂಡ ಕುಮಾರಸ್ವಾಮಿ
ಮಾಜಿ ಸಿಎಂ ಕುಮಾರಸ್ವಾಮಿ ಅವರು ಅನಾರೋಗ್ಯದಿಂದ ಆಸ್ಪತ್ರೆ ಸೇರಿಕೊಂಡಿದ್ದಾರೆ. ನಿರಂತರವಾದ ಪ್ರಚಾರದ ಹಿನ್ನಲೆಯಲ್ಲಿ ಬಿಡುವಿಲ್ಲದೆ ತೊಡಗಿಕೊಂಡಿದ್ದ ಪರಿಣಾಮ ಕುಮಾರಸ್ವಾಮಿಯವರಿಗೆ ಜ್ವರ ಕಾಣಿಸಿಕೊಂಡಿತಂತೆ. ಅವರಿಗೆ ವಿಶ್ರಾಂತಿ ಅಗತ್ಯ ಹೆಚ್ಚು ಇದೆ ಎಂದು ವೈದ್ಯರು ಸಲಹೆ ನೀಡಿದ್ದರಿಂದ ಅವರು ಶನಿವಾರ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಅವರು ಚಿಕಿಸ್ತೆ ಪಾಡೆಯುತ್ತಿದ್ದಾರೆ.
ಕುಮಾರಸ್ವಾಮಿ ಅವರನ್ನು ನೋಡಲು ಬಂದ ಆದಿಚುಂಚನಗಿರಿ ಶ್ರೀಗಳು
ಕುಮಾರಸ್ವಾಮಿ ಅವರು ಅನಾರೋಗ್ಯದಿಂದ ಆಸ್ಪತ್ರೆ ಸೇರಿಕೊಂಡಿದ್ದು ಅವರನ್ನು ನೋಡಲು ಆದಿಚುಂಚನಗಿರಿಯಿಂದ ಶ್ರೀಗಳು ಬಂದಿದ್ದಾರೆ. ಶನಿವಾರ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರ ಇವರನ್ನು ನೋಡಲು ಆದಿಚುಂಚನಗಿರಿ ಶ್ರೀಗಳು ಬಂದಿದ್ದಾರೆ. ಶ್ರೀಗಳು ಬಂದು ಅವರ ಅರೋಗ್ಯ ವಿಚಾರಿಸಿ, ನೀವು ಬೇಗ ಗುಣಮುಖರಾಗಿ ಬನ್ನಿ ಎಂದು ಶ್ರೀಗಳು ಹಾರೈಸಿದ್ದಾರೆ.
ಮತ್ತೆ ಪ್ರಚಾರದಲ್ಲಿ ಭಾಗಿಯಾಗಲಿರುವ ಕುಮಾರಸ್ವಾಮಿ
ವಿಶ್ರಾಂತಿ ಪಡೆದ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ. ಆರೋಗ್ಯ ಸುಧಾರಿಸಿದ ನಂತರ ಕುಮಾರಸ್ವಾಮಿಯವರು ಮತ್ತೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ.