Hardik Pandya: ಹಾರ್ದಿಕ್ ಪಾಂಡ್ಯ ಅಭಿಮಾನಿಗಳಿಗೆ ಬೇಸರದ ಸುದ್ದಿ, IPL ನಿಂದ ಹೊರಬಂದ ಹಾರ್ದಿಕ್ ಪಾಂಡ್ಯ

2024 ರ IPL ನಲ್ಲಿ ಆಟವಾಡದ ಹಾರ್ದಿಕ್ ಪಾಂಡ್ಯ, ಅಭಿಮಾನಿಗಳ ಬೇಸರಕ್ಕೆ ಕಾರಣವಾದ ಪಾಂಡ್ಯ

Hardik Pandya Out Of IPL 2024: ಐಪಿಎಲ್ 2024 ರ ಪ್ರಾರಂಭಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದು, ಈಗಾಗಲೇ ಕ್ರಿಕೆಟ್ ಆಟಗಾರರ ಪಟ್ಟಿಗಳು ಸಿದ್ದವಾಗಿದ್ದು, ಇನ್ನೇನು ಎಲ್ಲಾ ಸಿದ್ಧತೆ ಆಗುತ್ತಿದೆ ಎನ್ನುವಷ್ಟರಲ್ಲಿ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಬೇಸರದ ಸುದ್ದಿ ಹೊರಬಿದ್ದಿದೆ ಎಂದು ಹೇಳಬಹುದು.

ಮುಂಬೈ ಇಂಡಿಯನ್ಸ್ (Mumbai Indians) ತಂಡದ ಹೊಸ ನಾಯಕನಾಗಿ ಹಾರ್ದಿಕ್ ಪಾಂಡ್ಯ (Hardik Pandya) ಹೆಸರು ಕೇಳಿಬರುತ್ತಿದ್ದು, ಮುಂಬೈ ಇಂಡಿಯನ್ಸ್ ಐಪಿಎಲ್ 2024 ರಲ್ಲಿ ನಾಯಕತ್ವದ ಜವಾಬ್ದಾರಿ ಹಾರ್ದಿಕ್ ಪಾಂಡ್ಯ ಕೈಯಲ್ಲಿರಲಿದೆ ಎನ್ನಲಾಗಿದ್ದು, ಇದಕ್ಕೆ ಹಲವು ಕಡೆ ಪ್ರಶಂಸೆ ವ್ಯಕ್ತವಾಗಿದ್ದು, ಇನ್ನು ಹಲವು ಕಡೆ ಟೀಕೆ ವ್ಯಕ್ತ ಆಗಿದೆ. ಇದೀಗ ಹಾರ್ದಿಕ್ ಪಾಂಡ್ಯ ಐಪಿಎಲ್ 2024 ರಿಂದ ಹೊರಗುಳಿಯಬಹುದು ಎಂಬ ಸುದ್ದಿ ಬರುತ್ತಿದೆ.

hardik pandya out from ipl 2024
Image Credit: Original Source

ಮುಂಬೈ ಇಂಡಿಯನ್ಸ್‌ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ

2022 ರಲ್ಲಿ ತಮ್ಮ ಚೊಚ್ಚಲ ಋತುವಿನಲ್ಲಿ ಹಾರ್ದಿಕ್ ಪಾಂಡ್ಯ ಕಳೆದ ವರ್ಷ ಗುಜರಾತ್ ಟೈಟಾನ್ಸ್‌ಗಾಗಿ ಪ್ರಶಸ್ತಿಯನ್ನು ಗೆದ್ದಿದ್ದರು. ಅಷ್ಟೇ ಅಲ್ಲ, 2023 ರಲ್ಲಿ ಹಾರ್ದಿಕ್ ನಾಯಕತ್ವದಲ್ಲಿ ಗುಜರಾತ್ ತಂಡ ಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ನಿಂದ ಸೋಲನ್ನು ಎದುರಿಸಬೇಕಾಯಿತು. ಮುಂಬೈ ಇಂಡಿಯನ್ಸ್‌ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರಿಗೆ ನಾಯಕತ್ವ ನೀಡಿದೆ. ಮುಂಬೈ ಇಂಡಿಯನ್ಸ್‌ ಹಾರ್ದಿಕ್ ಪಾಂಡ್ಯ ಅವರಿಗೆ ನಾಯಕತ್ವ ನೀಡಿದ್ದು ಆಟಗಾರರಲ್ಲಿ ಅಸಮಾಧಾನ ಮೂಡುವಂತೆ ಮಾಡಿದೆ.

ಮುಂಬೈ ತಂಡದ ಆಟಗಾರರ ಪಟ್ಟಿ

Join Nadunudi News WhatsApp Group

ಮುಂಬೈ ತಂಡದಲ್ಲಿ ರೊಮಾರಿಯೋ ಶೆಫರ್ಡ್ (ನಾಯಕ), ಆಕಾಶ್ ಮಧ್ವಲ್, ಅರ್ಜುನ್ ತೆಂಡೂಲ್ಕರ್, ಕ್ಯಾಮರೂನ್ ಗ್ರೀನ್, ಡೆವಾಲ್ಡ್ ಬ್ರೂವಿಸ್, ಇಶಾನ್ ಕಿಶನ್, ಜೇಸನ್ ಬೆಹ್ರೆಂಡಾರ್ಫ್, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ ಸಿಂಗ್, ತಿಲಕ್ ವರ್ಮಾ, ನೆಹಲ್ ವಧೇರಾ, ಪಿಯೂಷ್ ಚಾವ್ಲಾ, ರೋಹಿತ್ ಶರ್ಮಾ, ಶಮ್ಸ್ ಮುಲಾನಿ, ಸೂರ್ಯ ಕುಮಾರ್ ಯಾದವ್, ಸೂರ್ಯ ಕುಮಾರ್ ಯಾದವ್ ಟಿಮ್ ಡೇವಿಡ್, ವಿಷ್ಣು ವಿನೋದ್, ಜೆರಾಲ್ಡ್ ಕೋಟ್ಜಿ, ದಿಲ್ಶನ್ ಮಧುಶಂಕ, ಶ್ರೇಯಸ್ ಗೋಪಾಲ್, ನಮನ್ ಧೀರ್, ಅನ್ಶುಲ್ ಕಾಂಬೋಜ್, ನುವಾನ್ ತುಷಾರ, ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ.ಹಾರ್ದಿಕ್ ಪಾಂಡ್ಯ (ವ್ಯಾಪಾರದ ಮೂಲಕ ಆಗಮಿಸಿದ್ದಾರೆ).

hardik pandya ipl 2024
Image Credit: Original Source

ಹಾರ್ದಿಕ್ ಕ್ರಿಕೆಟ್‌ಗೆ ಮರಳುವ ಕುರಿತು  ಮಾಹಿತಿ ಇಲ್ಲ”

ಮುಂಬೈ ಇಂಡಿಯನ್ಸ್ ಇತ್ತೀಚೆಗೆ ಹಾರ್ದಿಕ್ ಪಾಂಡ್ಯ ಅವರನ್ನು ಐಪಿಎಲ್ 2024 ಸೀಸನ್‌ಗೆ ನಾಯಕನಾಗಿ ಘೋಷಿಸಿದೆ. ಈ ಮೂಲಕ ರೋಹಿತ್ ಶರ್ಮಾ ಅವರ 10 ವರ್ಷಗಳ ಸುದೀರ್ಘ ಅಧಿಕಾರಾವಧಿ ಕೊನೆಗೊಂಡಿದೆ. ಅವರ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್‌ಗಾಗಿ 5 ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಬಿಸಿಸಿಐ ಮೂಲಗಳ ಪ್ರಕಾರ “ಹಾರ್ದಿಕ್ ಕ್ರಿಕೆಟ್‌ಗೆ ಮರಳುವ ಕುರಿತು ಯಾವುದೇ ಮಾಹಿತಿ ಇಲ್ಲ. ಇಂಡಿಯನ್ ಪ್ರೀಮಿಯರ್ ಲೀಗ್‌ ನಲ್ಲೂ ಅವರ ಲಭ್ಯತೆಯ ಬಗ್ಗೆ ದೊಡ್ಡ ಪ್ರಶ್ನಾರ್ಥಕ ಚಿಹ್ನೆ ಆಗಿದೆ ಎನ್ನಲಾಗಿದೆ.

Join Nadunudi News WhatsApp Group