High Court: ಸರ್ಕಾರೀ ನೌಕರರ ವಿಷಯವಾಗಿ ಐತಿಹಾಸಿಕ ತೀರ್ಪು ನೀಡಿದ ಹೈಕೋರ್ಟ್, ಎಲ್ಲಾ ನೌಕರರಿಗೆ ಗುಡ್ ನ್ಯೂಸ್

ಕ್ರಿಮಿನಲ್ ಪ್ರಕರಣ ದಾಖಲಾದ ಮಾತ್ರಕ್ಕೆ ನೌಕರರನ್ನು ವಜಾಗೊಳಿಸುವಂತಿಲ್ಲ, ಹೈಕೋರ್ಟ್ ಮಹತ್ವದ ಆದೇಶ.

High Court Judgment On Government Employees Job: ಭಾರತೀಯ ಕಾನೂನಿನಲ್ಲಿ ದಿನನಿತ್ಯ ಹಲವಾರು ಪ್ರಕರಣಗಳು ದಾಖಲಾಗುತ್ತದೆ. ನ್ಯಾಯಾಲಯವು ಪ್ರಕರಣದ ತನಿಖೆ ನಡೆಸಿ ನ್ಯಾಯಪರ ಆದೇಶವನ್ನು ಹೊರಡಿಸುತ್ತಿದೆ. ಹೊಸ ಹೊಸ ಪ್ರಕರಣದ ತನಿಖೆ ನಡೆಯುತ್ತಿದ್ದಂತೆ ಹೊಸ ಹೊಸ ನಿಯಮಗಳು ರೂಪುಗೊಳ್ಳುತ್ತದೆ. ಸದ್ಯ ಸರ್ಕಾರೀ ನೌಕ್ರಾರನ್ನು ಕೆಲಸದಿಂದ ವಜಾಗೊಳಿಸಿರುವ ಬಗ್ಗೆ ಪ್ರಕರಣವೊಂದು ನ್ಯಾಯಾಲಯದ ಮೆಟ್ಟಿಲೇರಿದೆ. ಈ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯ ಮಹತ್ವದ ಆದೇಶವನ್ನು ಹೊರಡಿಸಿದೆ.

High Court Judgment
Image Credit: Oneindia

ಕ್ರಿಮಿನಲ್ ಪ್ರಕರಣ ದಾಖಲಾದ ಮಾತ್ರಕ್ಕೆ ನೌಕರರನ್ನು ವಜಾಗೊಳಿಸುವಂತಿಲ್ಲ
ಪೊಕ್ಕೊಕಾಯ್ದೆಯಡಿ ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ಗಣೇಶ್ ಅವರನ್ನು ಬಿಲ್ ಕಲೆಕ್ಟರ್ ಹುದ್ದೆಯಿಂದ ವಜಾಗೊಳಿಸಿ ತೆಗೆದುಕೊಂಡಿದ್ದ ತೀರ್ಪನ್ನು ರದ್ದುಗೊಳಿಸಿದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲೆಯ ಅತ್ತಿಕರಿಬೆಟ್ಟು ಗ್ರಾಮ ಪಂಚಾಯಿತಿ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ವರಲೇ ಮತ್ತು ಕೃಷ್ಣಾ ದೀಕ್ಷಿತ್ ವಿಭಾಗೀಯ ಪೀಠ ಆದೇಶ ಹೊರಡಿಸಿದೆ.

ಸಾಮಾನ್ಯವಾಗಿ ಅಪರಾಧ ಪ್ರಕರಣಗಳಲ್ಲಿ ದೋಷಿಯಾಗಿ ತೀರ್ಮಾನಿಸಲ್ಪಟ್ಟು ಶಿಕ್ಷೆಗೆ ಒಳಗಾದ ಸಂದರ್ಭದಲ್ಲಿ ಉದ್ಯೋಗಿಯನ್ನು ಉದ್ಯೋಗದಾತರು, ಸೇವೆಯಿಂದ ವಜಾಗೊ ಇಸುತ್ತಾರೆ. ಆದರೆ, ದಾಖಲಾಗಿರುವ ಕ್ರಿಮಿ ನಲ್ ಪ್ರಕರಣ ವಿಚಾರಣೆಗೆ ಬಾಕಿಯಿದೆ ಎಂಬ ಕಾರಣಕ್ಕೆ ಉದ್ಯೋಗಿಯನ್ನು ವಜಾಗೊಳಿಸಲಾಗದು.

Employees Latest News
Image Credit: Thenationalnews

ಹೈಕೋರ್ಟ್ ಮಹತ್ವದ ಆದೇಶ
ಹಾಗಾಗಿ ಅತ್ತಿಕರಿಬೆಟ್ಟು ಗ್ರಾ.ಪಂ. ನೌಕರ ಗಣೇಶ್ ಅವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ತನಿಖೆಯ ಹಂತದಲ್ಲಿರುವ ಕಾರಣ ಆತನನ್ನು ಸೇವೆಯಿಂದ ವಜಾಗೊಳಿಸಿರುವುದು ದೋಷಪೂರಿತವಾಗಿದೆ ಎಂದು ನ್ಯಾಯಾಲಯ ಆದೇಶ ಹೊರಡಿಸಿದೆ. ಕ್ರಿಮಿನಲ್ ಪ್ರಕರಣ ದಾಖಲಾಗಿದೆ ಎನ್ನುವ ಕಾರಣಕ್ಕೆ ಸರ್ಕಾರದ ಕಾಯಂ ಉದ್ಯೋಗಾಗಿಗಳನ್ನು ಸೇವೆಯಿಂದ ವಜಾಗೊಳಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

Join Nadunudi News WhatsApp Group

Join Nadunudi News WhatsApp Group