Minor Driving Rule: 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿರುವ ಎಲ್ಲಾ ಪೋಷಕರಿಗೆ ಹೊಸ ನಿಯಮ, ಹೈಕೋರ್ಟ್ ಆದೇಶ.

ಅಪ್ರಾಪ್ತ ಮಕ್ಕಳಿಗೆ ವಾಹನ ನೀಡುವ ಮುನ್ನ ಹೈಕೋರ್ಟ್ ಆದೇಶ ತಿಳಿಯಿರಿ

High Court Verdict On Minor Driving: ದೇಶದಲ್ಲಿ ಈಗಾಗಲೇ ಸಾಕಷ್ಟು ಸಂಚಾರ ನಿಯಮಗಳು ಜಾರಿಯಾಗಿದೆ. ವಾಹನ ಸವಾರರ ಸುರಕ್ಷೆತೆಗಾಗಿ ಹಾಗೂ ರಸ್ತೆಗಳಲ್ಲಿ ಉಂಟಾಗುವ ಅಪಾಯವನ್ನು ತಡೆಯುವ ಉದ್ದೇಶದಿಂದ ಸರ್ಕಾರ ಸಂಚಾರ ನಿಯಮವನ್ನು ಕಠಿಣಗೊಳಿಸುತ್ತದೆ. ರಸ್ತೆಗಳಲ್ಲಿ ವಾಹನ ಚಲಾಯಿಸುವ ಪ್ರತಿಯೊಬ್ಬರೂ ಕೂಡ ಸಂಚಾರ ನಿಯಮಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳುವುದು ಅಗತ್ಯವಾಗಿದೆ.

ಸಾಮಾನ್ಯವಾಗಿ 18 ವರ್ಷ ಮೇಲ್ಪಟ್ಟವರಿಗೆ ವಾಹನ ಪವಾರವಾನಗಿಯನ್ನು ನೀಡಲಾಗುತ್ತದೆ. 18 ವರ್ಷ ಮೇಲ್ಪಟ್ಟವರು ವಾಹನವನ್ನು ಚಲಾಯಿಸಲು ಅರ್ಹರಾಗಿರುತ್ತಾರೆ. ಸದ್ಯ ಕರ್ನಾಟಕಾ ಹೈಕೋರ್ಟ್ ಅಪ್ರಾಪ್ತ ಮಕ್ಕಳ ವಾಹನ ಚಲನೆಗೆ ಸಂಬಂಧಿಸಿದಂತೆ ಮಹತ್ವದ ನಿಯಮವನ್ನು ಜಾರಿಗೆ ತಂದಿದೆ.

High Court Verdict On Minor Driving
Image Credit: Thehansindia

ಅಪ್ರಾಪ್ತ ಮಕ್ಕಳಿಗೆ ವಾಹನ ನೀಡುವ ಮುನ್ನ ಹೈಕೋರ್ಟ್ ಆದೇಶ ತಿಳಿಯಿರಿ
ಇನ್ನು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ವಾಹನವನ್ನು ಚಲಾಯಿಸುವುದು ಕಾನೂನು ಬಾಹಿರವಾಗಿದೆ. ಈ ಕಾನೂನಿನ ನಿಯಮವನ್ನು ಉಲ್ಲಂಘಿಸಿ ಕೆಲ ಪೋಷಕರು ತಮ್ಮ ಮಕ್ಕಳಿಗೆ ವಾಹನವನ್ನು ಚಲಾಯಿಸಲು ಕೊಡುತ್ತಾರೆ. ಇದನ್ನು ಗಮನಿಸಿದ ಸಂಚಾರ ಇಲಾಖೆ ಸಾಕಷ್ಯು ಹೊಸ ನಿಯಮವನ್ನು ಜಾರಿಗೊಳಿಸಿದೆ. ಇಸ್ದರ ಬೆನ್ನಲ್ಲೇ ಇದೀಗ ಅಪ್ರಾಪ್ತ ಮಕ್ಕಳು ವಾಹನ ಚಲಿಸಿದಾಗ ಕೈಗೊಳ್ಳಬೇಕಾದ ನಿಯಮದ ಬಗ್ಗೆ ಮಹತ್ವದ ಆದೇಶವನ್ನು ಹೊರಡಿಸಿದೆ.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿರುವ ಎಲ್ಲಾ ಪೋಷಕರಿಗೆ ಹೊಸ ನಿಯಮ
ವಾಹನ ಚಲಾಯಿಸಲು ನಿಗದಿತ ವಯೋಮಿತಿಯನ್ನು ಇರಿಸಲಾಗಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ವಾಹನ ಚಲಾಯಿಸುವುದು ಅಪರಾಧವಾಗಿದೆ. ಇನ್ನು ದ್ವಿಚಕ್ರವಾಹನದಲ್ಲಿ ಅಪ್ರಾಪ್ತರು ವಾಹನ ಚಲಾಯಿಸಿದರೆ ಹೆಚ್ಚಿನ ದಂಡ ವಿಧಿಸಲಾಗುತ್ತದೆ. ಪೋಷಕರು ಅಪ್ರಾಪ್ತ ಮಕ್ಕಳಿಗೆ ವಾಹನ ಚಲಾಯಿಸಲು ಅವಕಾಶ ನೀಡುವ ಮುನ್ನ ಈ ಬಗ್ಗೆ ಮಾಹಿತಿ ತಿಳಿದುಕೊಳ್ಳಿ. ವಾಹನ ಅಪಘಾತ ಉಂಟು ಮಾಡಿದರೆ ವಾಹನದ ಮಾಲೀಕರು ಸಂಬಂಧಪಟ್ಟವರಿಗೆ ಪರಿಹಾರ ನೀಡಬೇಕೇ ಹೊರತು ವಿಮಾ ಕಂಪನಿಯಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

High Court Verdict
Image Credit: pix4free

ವಿಮಾ ಕಂಪನಿಯನ್ನು ಹೊಣೆಗಾರರನ್ನಾಗಿಸಿದ್ದ ಮೋಟಾರು ವಾಹನ ಅಪಘಾತ ನ್ಯಾಯಮಂಡಳಿ ತೀರ್ಪನ್ನು ರದ್ದುಗೊಳಿಸಿ ನ್ಯಾಯಮೂರ್ತಿ ಹಂಚಾಟೆ ಸಂಜೀವಕುಮಾರ್ ಈ ತೀರ್ಪು ನೀಡಿದ್ದಾರೆ. ಅದರಂತೆ, ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ನ ಮೇಲ್ಮನವಿಯನ್ನು ಅನುಮತಿಸಲಾಗಿದೆ. ಇನ್ನುಮುಂದೆ ಯಾವುದೇ ರಸ್ತೆ ಅಪಘಾತದಲ್ಲಿ ಅದರಲ್ಲೂ ಮುಖ್ಯವಾಗಿ ಅಪ್ರಾಪ್ತರು ವಾಹನವನ್ನು ಓಡಿಸುತ್ತಿರುವ ವಾಹನಕ್ಕೆ ತೊಂದರೆಯಾದರೆ ಅದರ ಹೊಣೆ ವಾಹನದ ಮಾಲೀಕರದ್ದಾಗಿರುತ್ತದೆ. ಸಂಬಂಧಪಟ್ಟವರಿಗೆ ವಾಹನ ಮಾಲೀಕರೇ ಪರಿಹಾರ ನೀಡಬೇಕೆ ಹೊರತು ಇದರ ಜವಾಬ್ದಾರಿ ವಿಮ ಕಂಪನಿಯದ್ದಲ್ಲ ಎಂದು ಕೋರ್ಟ್ ಆದೇಶ ನೀಡಿದೆ.

Join Nadunudi News WhatsApp Group

Minor Driving Rules Update
Image Credit: Kalingatv

Join Nadunudi News WhatsApp Group