Honda Activa: 100Km ಮೈಲೇಜ್ ಕೊಡೋ ಹೊಸ ಎಲೆಕ್ಟ್ರಿಕ್ ಸ್ಕೂಟರ್, ಅಗ್ಗದ ಬೆಲೆಗೆ ಕೊಳ್ಳಲು ಮುಂದಾದ ಜನ
ಹೋಂಡಾದ ಆಕ್ಟಿವ್ ಸ್ಕೂಟರ್ ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಯಾಗಲಿದೆ.
Honda Activa Electric Scooter: ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ(Electric Scooter) ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮಾಡುವವರಿಗೆ ಮಾರುಕಟ್ಟೆಯಲ್ಲಿ ವಿವಿಧ ಆಯ್ಕೆಯಲ್ಲಿ ಲಭ್ಯವಿದೆ. ಎಲೆಕ್ಟ್ರಿಕ್ ಸ್ಕೂಟರ್ ಗಳು ಇತ್ತೀಚಿಗೆ ಹೆಚ್ಚು ಹೆಚ್ಚು ಸೇಲ್ ಕಾಣುತ್ತಿದೆ.
ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಗಳ ಬೆಲೆ ಏರಿಕೆಯಿಂದಾಗಿ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿ ಮಾಡುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳು ಹೆಚ್ಚು ಜನಪ್ರಿಯತೆ ಪಡೆದುಕೊಳ್ಳುತ್ತಿವೆ. ಇದರಿಂದ ಅನೇಕ ಕಂಪನಿಗಳು ಎಲೆಕ್ಟ್ರಿಕ್ ವಾಹನವನ್ನು ತಯಾರಿಸಿ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುತ್ತಿದೆ.
ಹೋಂಡಾ ಕಂಪನಿ
ಹೋಂಡಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ವಾಹನಗಳನ್ನು ಬಿಡುಗಡೆ ಮಾಡಿದೆ. ಇದೀಗ ಹೋಂಡಾ ಕಂಪನಿ ತನ್ನ ಎಲೆಕ್ಟ್ರಿಕ್ ವಾಹನವನ್ನು ಬಿಡುಗಡೆ ಮಾಡಲು ರೆಡಿಯಾಗುತ್ತಿದೆ. ಹೋಂಡಾ ಕಂಪನಿ ತನ್ನ ಪ್ರಸಿದ್ಧ ಸ್ಕೂಟರ್ ಆದ ಆಕ್ಟಿವಾ ಅನ್ನು ಎಲೆಕ್ಟ್ರಿಕ್ ಸ್ಕೂಟರನ್ನಾಗಿ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ.
ಹೋಂಡಾ ಎಲೆಕ್ಟ್ರಿಕ್ ಸ್ಕೂಟರ್
ಇದೀಗ ಪ್ರತಿಷ್ಠಿತ ವಾಹನ ತಯಾರಕ ಕಂಪನಿಯಾದ ಹೋಂಡಾ ಮಾರುಕಟ್ಟೆಯಲ್ಲಿ ತನ್ನ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ. ಹೋಂಡಾದ ಆಕ್ಟಿವ್ ಸ್ಕೂಟರ್ ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಯಾಗಲಿದೆ. ಇದರ ಬಗ್ಗೆ ಕಂಪನಿಯಿಂದ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ಇನ್ನು ಈ ಸ್ಕೂಟರ್ ನ ಬೆಲೆ 1 ಲಕ್ಷಕ್ಕಿಂತ ಹೆಚ್ಚಾಗಿರುತ್ತದೆ. ಇನ್ನು ಈ ಎಲೆಕ್ಟ್ರಿಕ್ ಸ್ಕೂಟರ್ 100 ಕಿಮೀವರೆಗೆ ಮೈಲೇಜ್ ನೀಡುತ್ತದೆ ಎನ್ನಲಾಗಿದೆ.
ಇನ್ನು ಈ ಸ್ಕೂಟರ್ ಸ್ವಾಪ್ ಮಾಡಬಹುದಾದ ಬ್ಯಾಟರಿಯೊಂದಿಗೆ ಉತ್ತಮ ಕಾರ್ಯಕ್ಷಮತೆಯೊಂದಿಗೆ ಕಾರ್ಯ ನಿರ್ವಹಿಸಲಿರುವ ಪ್ರೀಮಿಯಂ ಸ್ಕೂಟರ್ ಆಗಿರಲಿದೆ. ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಥಿರ ಬ್ಯಾಟರಿ ಪ್ಯಾಕ್‌ನೊಂದಿಗೆ ಬರಲಿದೆ ಮತ್ತು ಗಂಟೆಗೆ 50 ಕಿಮೀ ವೇಗವನ್ನು ನೀಡುತ್ತದೆ ಎಂದು ದ್ವಿಚಕ್ರ ವಾಹನ ತಯಾರಕರು ಖಚಿತಪಡಿಸಿದ್ದಾರೆ.
ಹೊಂಡಾ ಆಕ್ಟಿವಾ ICE ಆವೃತ್ತಿಯಲ್ಲಿ ಸ್ಕೂಟರ್ ವಿಭಾಗದಲ್ಲಿ ತನ್ನದೇ ಪ್ರಾಬಲ್ಯ ಹೊಂದಿದೆ. ಇದೀಗ HMSI ತನ್ನ ಆಕ್ಟಿವಾದ ಎಲೆಕ್ಟ್ರಿಕ್ ಆವೃತ್ತಿಯನ್ನು ತರಲು ತಯಾರಿ ನಡೆಸುತ್ತಿದೆ. ಮುಂದಿನ ವರ್ಷ ಅಂದರೆ 2024 ರ ಜನವರಿ ತಿಂಗಳಲ್ಲಿ ಹೋಂಡಾ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಎನ್ನಲಾಗುತ್ತಿದೆ.