HSRP Fine: ಮೂರೂ ತಿಂಗಳಲ್ಲಿ HSRP ನಂಬರ್ ಹಾಕಿಸದಿದ್ದರೆ ಎಷ್ಟು ದಂಡ ಕಟ್ಟಬೇಕು, ಇಲ್ಲಿದೆ ದಂಡದ ಪಟ್ಟಿ.

HSRP ಅಳವಡಿಸದಿದ್ದರೆ ಎಷ್ಟು ದಂಡ ಪಾವತಿಸಬೇಕಾಗುತ್ತದೆ...? ಇಲ್ಲಿದೆ ಡೀಟೇಲ್ಸ್

HSRP Fine Information: ಸದ್ಯ 2019 ಏಪ್ರಿಲ್ 1 ರ ಮೊದಲು ನೋಂದಣಿಯಾಗಿರುವ ವಾಹನ ಮಾಲೀಕರು HSRP ಅಳವಡಿಕೆಯಲ್ಲಿ ಬ್ಯುಸಿ ಆಗಿದ್ದಾರೆ. 2019 ರ ಏಪ್ರಿಲ್ 1 ಕ್ಕಿಂತ ಮೊದಲು ನೋಂದಣಿಯಾದ ವಾಹನಗಳು ನಿಗದಿಪಡಿಸಿದ ಸಮಯದೊಳಗೆ High Security Registration Plate (HSRP) ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. Online Portal ನ ಮೂಲಕ HSRP Booking ಮಾಡಲಾಗುತ್ತದೆ.

HSRP ನೋಂದಣಿ ಫಲಕಗಳು ಹೆಚ್ಚು ಸುರಕ್ಷಿತವಾಗಿರುತ್ತವೆ ಮತ್ತು ಅವುಗಳನ್ನು ಬದಲಾಯಿಸಲು ಅಥವಾ ತಿದ್ದಲು ಸಾಧ್ಯವಾಗದ ಕಾರಣ ವಾಹನ ಮಾಲೀಕರು ತಮ್ಮ ವಾಹನಗಳಿಗೆ HSRP ಅಳವಡಿಸಿದರೆ ಹೆಚ್ಚು ಅನುಕೂಲವಾಗಲಿದೆ. ಸದ್ಯ HSRP ಅಳವಡಿಕೆಯ ದಿನಾಂಕವನ್ನು ವಿಸ್ತರಿಸಿರುವ ಸರ್ಕಾರ HSRP ಅಳವಡಿಸದಿದ್ದರೆ ಎಷ್ಟು ದಂಡ ಪಾವತಿಸಬೇಕಾಗುತ್ತದೆ ಎನ್ನುವ ಬಗ್ಗೆ ಎಚ್ಚರಿಕೆ ನೀಡಿದೆ.

HSRP fine Karnataka
Image Credit: Easemywatch

ವಾಹನ ಮಾಲೀಕರಿಗೆ ಸಾರಿಗೆ ಇಲಾಖೆಯಿಂದ ಎಚ್ಚರಿಕೆ
ದೇಶದಲ್ಲಿ 2019 ರ ಹಿಂದಿನ ವರ್ಷದಿಂದ 1.70 ಕೋಟಿ ವಾಹನಗಳು ನೋಂದಣಿಯಾಗಿವೆ. ಇಷ್ಟು ವಾಹನಗಳು ಇನ್ನು ಕೂಡ HSRP ಅಳವಡಿಕೆ ಮಾಡಿಕೊಂಡಿಲ್ಲ. ಈ ನಿಟ್ಟಿನಲ್ಲಿ ಸಾರಿಗೆ ಇಲಾಖೆಯು ಫೆಬ್ರವರಿಯಿಂದ ಮತ್ತೆ ಮೂರು ತಿಂಗಳುಗಳು HSRP ಅಳವಡಿಕೆಗೆ ಸಮಯಾವಕಾಶವನ್ನು ನೀಡಿದೆ. ಆದರೂ ವಾಹನ ಮಾಲೀಕರು ಇದರ ಬಗ್ಗೆ ಅಸಡ್ಡೆ ತೋರುತ್ತಿದ್ದಾರೆ. ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಸಾರಿಗೆ ಇಲಾಖೆ HSRP Number Plate ಇಲ್ಲದ ವಾಹನಗಳಿಗೆ ಬಾರಿ ದಂಡ ವಿಧಿಸಲು ತೀರ್ಮಾನಿಸಿದೆ. ದಂಡದ ಬಗ್ಗೆ ಸಾರಿಗೆ ಇಲಾಖೆ ವಾಹನ ಮಾಲೀಕರಿಗೆ ಎಚ್ಚರಿಕೆಯನ್ನು ನೀಡಿದೆ.

HSRP Fine Information
Image Credit: Hindustantimes

ಮೂರೂ ತಿಂಗಳಲ್ಲಿ HSRP ನಂಬರ್ ಹಾಕಿಸದಿದ್ದರೆ ಎಷ್ಟು ದಂಡ ಕಟ್ಟಬೇಕು
HSRP Number Plate ಇಲ್ಲದ ವಾಹನ ಮೊದಲ ಬಾರಿಗೆ ರಸ್ತೆಗಿಳಿದರೆ 1000 ರೂ ಹಾಗೂ ಎರಡನೇ ಬಾರಿ ರಸ್ತೆಗಿಳಿದರೆ 2000 ರೂ ಹಾಗೂ ಪದೇ ಪದೇ ಇದೆ ತಪ್ಪಾದರೆ ಇನ್ನು ಹೆಚ್ಚಿನ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ನೀವು Online ನಲ್ಲಿ HSRP Number Plate ಅನ್ನು Order ಮಾಡಿಕೊಳ್ಳಬಹುದಾಗಿದೆ. https:transport.karnataka.gov.in ಅಥವಾ www.siam.in ಗೆ ಭೇಟಿ ನೀಡುವ ಮೂಲಕ HSRP Number Plate ಅನ್ನು ಬುಕ್ ಮಾಡಿಕೊಳ್ಳಬಹುದು. HSRP Number ಇಲ್ಲದೆ ನಿಮ್ಮ ವಾಹನವನ್ನು ರಸ್ತೆಗಿಳಿಸುವ ಮುನ್ನ ದಂಡದ ಬಗ್ಗೆ ಯೋಚಿಸುವುದು ಉತ್ತಮ.

Join Nadunudi News WhatsApp Group

Join Nadunudi News WhatsApp Group