HSRP Rule: ವಾಹನ ಇದ್ದವರಿಗೆ ಕೊನೆಯ ಎಚ್ಚರಿಕೆ, ಫೆ. 17 ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ವಾಹನ ಸೀಜ್

ಫೆಬ್ರವರಿ 17 ರೊಳಗೆ ಈ ಕೆಲಸ ಮಾಡದಿದ್ದರೆ ದಂಡ ಖಚಿತ.

HSRP Latest Update: ಕಳೆದ ಹಲವು ತಿಂಗಳಿಂದ HSRP Number Plate ಅಳವಡಿಕೆಯ ಬಗ್ಗೆ ಸುದ್ದಿ ಸಾಕಷ್ಟು ವೈರಲ್ ಆಗಿದೆ. ಸಾರಿಗೆ ಇಲಾಖೆ ವಾಹನ ಮಾಲೀಕರಿಗೆ HSRP Number Plate ಅಳವಡಿಕೆ ಕಡ್ಡಾಯಗೊಳಿಸಿದೆ.

ಈ ಹಿಂದೆ HSRP ಅಳವಡಿಕೆಗೆ ನವೆಂಬರ್ 17 ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಸಾರಿಗೆ ಇಲಾಖೆ ಈ ದಿನಾಂಕವನ್ನು ವಿಸ್ತರಿಸಿದ್ದು, ಮತ್ತೆ ಮೂರು ತಿಂಗಳುಗಳ ಕಾಲ ಸಮಯಾವಕಾಶವನ್ನು ನೀಡಿದೆ. ಸದ್ಯ HSRP ಅಳವಡಿಕೆಯ ಗಡುವು ಹತ್ತಿರವಾಗುತ್ತಿರುವ ಹಿನ್ನಲೆ ಸರ್ಕಾರ ವಾಹನ ಸವಾರರಿಗೆ ಸೂಚನೆ ನೀಡುತ್ತಿದೆ. ಕೊನೆಯ ದಿನಾಂಕದೊಳಗೆ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದೆ.

HSRP Number Plate Latest Update
Image Credit: Asianetnews

ನಂಬರ್ ಪ್ಲೇಟ್ ಅಳವಡಿಸಲು ಫೆ. 17 ಕೊನೆಯ ದಿನಾಂಕ
ಸದ್ಯ 2019 ಏಪ್ರಿಲ್ 1 ರ ಮೊದಲು ನೋಂದಣಿಯಾಗಿರುವ ವಾಹನಗಳ ಮಾಲೀಕರಿಗೆ ಸಾರಿಗೆ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಇನ್ನು 2019 ಏಪ್ರಿಲ್ 1 ರ ನಂತರ ನೋಂದಣಿಯಾಗಿರುವ ವಾಹನಗಳಲ್ಲಿ ಈಗಾಗಲೇ ಅತಿ ಸುರಕ್ಷತೆಯ ನೋಂದಣಿ ಫಲಕವನ್ನು ಅಳವಡಿಸಲಾಗಿದೆ.

ಹೀಗಾಗಿ 2019 ರ ಏಪ್ರಿಲ್ 1 ಕ್ಕಿಂತ ಮೊದಲು ನೋಂದಣಿಯಾದ ವಾಹನಗಳು ಫೆಬ್ರವರಿ 17 ರೊಳಗೆ High Security Registration Plate (HSRP) ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2019 ರ ಏಪ್ರಿಲ್ 1 ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳಿಗೆ ಹೆಚ್ಎಸ್ಆರ್ ಪಿ ಅಳವಡಿಕೆ ಕಡ್ಡಾಯವಾಗಿದೆ. HSRP ಅಳವಡಿಸದಿದ್ದರೆ ಅಂತಹ ವಾಹನದ ಮಾಲೀಕರಿಗೆ 500 ರಿಂದ 1000 ದಂಡ ವಿಧಿಸಲಾಗುತ್ತದೆ. ಈ ಬಗ್ಗೆ ಸಾರಿಗೆ ಇಲಾಖೆ ವಾಹನ ಮಾಲೀಕರಿಗೆ ಎಚ್ಚರಿಕೆ ನೀಡಿದೆ.

HSRP Mandatory For Vehicles
Image Credit: RTO

HSRP Number Plate ನ ವೈಶಿಷ್ಟ್ಯಗಳೇನು..?
ಎಚ್‌ಎಸ್‌ಆರ್‌ಪಿ ನೋಂದಣಿ ಫಲಕಗಳು ಹೆಚ್ಚು ಸುರಕ್ಷಿತವಾಗಿರುತ್ತವೆ ಮತ್ತು ಅವುಗಳನ್ನು ಬದಲಾಯಿಸಲು ಅಥವಾ ತಿದ್ದಲು ಸಾಧ್ಯವಿಲ್ಲ. ನಂಬರ್ ಪ್ಲೇಟ್‌ನ ಒಂದು ಬದಿಯು ನೀಲಿ ಚಕ್ರವನ್ನು ಹೋಲುವ ಹೋಲೋಗ್ರಾಮ್ ಹೊಂದಿದೆ. ಇದರ ಕೆಳಗೆ 10-ಅಂಕಿಯ ವಿಶಿಷ್ಟ ಗುರುತಿನ ಸಂಖ್ಯೆ ಇರಲಿದೆ. HSRP ಅಲ್ಯೂಮಿನಿಯಂ ಲೋಹದಿಂದ ಮಾಡಲ್ಪಟ್ಟಿದೆ ಮತ್ತು ವಾಹನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒದಗಿಸಲು ಸ್ಕ್ಯಾನ್ ಮಾಡಬಹುದಾದ ಲೇಸರ್ ಕೋಡ್ ಅನ್ನು ಹೊಂದಿದೆ.

Join Nadunudi News WhatsApp Group

ಈ ರೀತಿಯಾಗಿ ನಿಮ್ಮ ವಾಹನಗಳಿಗೆ HSRP ಅಳವಡಿಸಿಕೊಳ್ಳಿ
*https:transport.karnataka.gov.in ಅಥವಾ www.siam.in ಗೆ ಭೇಟಿ ನೀಡಿ ಬುಕ್ HSRP ಕ್ಲಿಕ್ ಮಾಡಿ.

*ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.

*ವಾಹನದ ಮೂಲ ವಿವರವನ್ನು ಭರ್ತಿ ಮಾಡಬೇಕು.

*ನಿಮಗೆ ಅನುಕೂಲವಾಗುವ ಡೀಲರ್ಸ್ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಿ.

HSRP Latest Update
Image Credit: Jagran

*ಶುಲ್ಕ ವನ್ನು ಆನ್ಲೈನ್ ಮೂಲಕ ಪಾವತಿಸಬೇಕು.

*ನಂತರ ಮಾಲೀಕರ ಮೊಬೈಲ್ ಸಂಖ್ಯೆಗೆ OTP ಬರುತ್ತದೆ.

*ನಿಮಗೆ ಬೇಕಾದ ದಿನಾಂಕ, ಸ್ಥಳ, ಸಮಯವನ್ನು ಆಯ್ಕೆ ಮಾಡಿಕೊಳ್ಳಬೇಕು.

*ಮಾಲೀಕರು HSRP ಯನ್ನು ಅಂಟಿಸಲು ವಾಹನ ತಯಾರಕರು ಅಥವಾ ಡೀಲರ್ ಗೆ ಭೇಟಿ ನೀಡಬೇಕು.

Join Nadunudi News WhatsApp Group