HSRP Update: ವಾಹನ ಸವಾರರಿಗೆ ಕೇಂದ್ರದಿಂದ ಇನ್ನೊಂದು ಗುಡ್ ನ್ಯೂಸ್, ಮತ್ತೊಂದು ಅವಕಾಶ ನೀಡಿದ ಕೇಂದ್ರ.
HSRP ನಂಬರ್ ಪ್ಲೇಟ್ ವಿಷಯವಾಗಿ ಇನ್ನೊಂದು ಘೋಷಣೆ ಮಾಡಿದ ಕೇಂದ್ರ ಸರ್ಕಾರ.
HSRP Number Plate Deadline Extended: ಸದ್ಯ ದೇಶದಲ್ಲಿ ವಾಹನಗಳಿಗೆ ಸಂಬಂಧಿಸಿದಂತೆ ಅನೇಕ ಹೊಸ ಹೊಸ ನಿಯಮಗಳು ಜಾರಿಯಾಗುತ್ತಿದೆ. ದೇಶದಲ್ಲಿನ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈಗಾಗಲೇ ಕೇಂದ್ರ ಸಾಕಷ್ಟು ನಿಯಮಾವಳಿಗಳನ್ನು ಜಾರಿ ಮಾಡಿದೆ.
ಇನ್ನು ಕಳೆದ ಒಂದೆರಡು ತಿಂಗಳಿಂದ HSRP Number Plate ಅಳವಡಿಕೆಯ ಬಗ್ಗೆ ಸುದ್ದಿ ಸಾಕಷ್ಟು ವೈರಲ್ ಆಗಿದೆ. ಸಾರಿಗೆ ಇಲಾಖೆ ವಾಹನ ಮಾಲೀಕರಿಗೆ HSRP Number Plate ಅಳವಡಿಕೆ ಕಡ್ಡಾಯಗೊಳಿಸಿದೆ. ಸದ್ಯ ಸರ್ಕಾರ HSRP ಅಳವಡಿಕೆಗೆ ನಿಗದಿಪಡಿಸಿದ್ದ ಅವಧಿ ಮುಕ್ತಾಯಗೊಂಡಿದ್ದು ಇದೀಗ ಕೇಂದ್ರ ಸರಕಾರ ಗಡುವಿನ ವಿಸ್ತರಣೆಯ ಬಗ್ಗೆ ಘೋಷಿಸಿದೆ. ಇನ್ನು HSRP ಅಳವಡಿಕೆ ಮಾಡದಿದ್ದವರಿಗೆ ಇನ್ನಷ್ಟು ಸಮಯಾವಕಾಶವನ್ನು ನೀಡಿದೆ.
HSRP ಅಳವಡಿಕೆಯಾ ಕುರಿತು ಬಿಗ್ ಅಪ್ಡೇಟ್
ಸದ್ಯ 2019 ಏಪ್ರಿಲ್ 1 ರ ಮೊದಲು ನೋಂದಣಿಯಾಗಿರುವ ವಾಹನಗಳ ಮಾಲೀಕರಿಗೆ ಸಾರಿಗೆ ಇಲಾಖೆ ನವೆಂಬರ್ 17 ರೊಳಗೆ High Security Registration Plate (HSRP) ಅಳವಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2019 ರ ಏಪ್ರಿಲ್ 1 ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳಿಗೆ ಹೆಚ್ಎಸ್ಆರ್ ಪಿ ಅಳವಡಿಕೆ ಕಡ್ಡಾಯವಾಗಿದೆ. ಸದ್ಯ ಸರ್ಕಾರ ನೀಡಿರುವ ಗಡುವು ವಿಸ್ತರಣೆಯಾಗಿದ್ದು ವಾಹನ ಮಾಲೀಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.
ವಾಹನ ಮಾಲೀಕರಿಗೆ ಗುಡ್ ನ್ಯೂಸ್, HSRP ಅಳವಡಿಕೆಗೆ ಗಡುವು ವಿಸ್ತರಣೆ
ಈ ಹಿಂದೆ ಕೇಂದ್ರ ಸರಕಾರ ನಿಗದಿಪಡಿಸಿದ್ದ November 17 2024 ರ ದಿನಾಂಕವನ್ನು ಇದೀಗ ಕೇಂದ್ರ February 17 2024 ರ ತನಕ ವಿಸ್ತರಿಸಿದೆ. ಇನ್ನು ಮೂರು ತಿಂಗಳುಗಳ ಕಾಲ ವಾಹನ ಮಾಲೀಕರು ತಮ್ಮ ವಾಹನಗಳಿಗೆ HSRP ಅಳವಡಿಸಿಕೊಳ್ಳಲು ಅವಕಾಶವಿದೆ. HSRP ಅಳವಡಿಸದಿದ್ದರೆ ಅಂತಹ ವಾಹನದ ಮಾಲೀಕರಿಗೆ 500 ರಿಂದ 1,000 ದಂಡ ವಿಧಿಸಲಾಗುತ್ತದೆ. ಈ ಬಗ್ಗೆ ಸಾರಿಗೆ ಇಲಾಖೆ ವಾಹನ ಮಾಲೀಕರಿಗೆ ಎಚ್ಚರಿಕೆ ನೀಡಿದೆ. ಹೀಗಾಗಿ ಸರ್ಕಾರ ನೀಡಿದ ಇನ್ನಷ್ಟು ಸಮಯಾವಕಾಶವನ್ನು ವಾಹನ ಮಾಲೀಕರು ಸದುಪಯೋಗಪಡಿಸಿಕೊಂಡು ತಕ್ಷಣ HSRP ಅಳವಡಿಸುವುದು ಉತ್ತಮ.
ಈ ರೀತಿಯಾಗಿ ನಿಮ್ಮ ವಾಹನಗಳಿಗೆ HSRP ಅಳವಡಿಸಿ
*https:transport.karnataka.gov.in ಅಥವಾ www.siam.in ಗೆ ಭೇಟಿ ನೀಡಿ ಬುಕ್ HSRP ಕ್ಲಿಕ್ ಮಾಡಿ.
*ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.
*ವಾಹನದ ಮೂಲ ವಿವರವನ್ನು ಭರ್ತಿ ಮಾಡಬೇಕು.
*ನಿಮಗೆ ಅನುಕೂಲವಾಗುವ ಡೀಲರ್ಸ್ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಿ.
*ಶುಲ್ಕ ವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
*ನಂತರ ಮಾಲೀಕ ಮೊಬೈಲ್ ಸಂಖ್ಯೆಗೆ OTP ಬರುತ್ತದೆ.
*ನಿಮಗೆ ಬೇಕಾದ ದಿನಾಂಕ, ಸ್ಥಳ, ಸಮಯವನ್ನು ಆಯ್ಕೆ ಮಾಡಿಕೊಳ್ಳಬೇಕು.
*ಮಾಲೀಕರು HSRP ಯನ್ನು ಅಂಟಿಸಲು ವಾಹನ ತಯಾರಕರು ಅಥವಾ ಡೀಲರ್ ಗೆ ಭೇಟಿ ನೀಡಬೇಕು.