Creta Facelift: 2024 ರ ಹುಂಡೈ ಕ್ರೆಟಾ ಕಾರಿನ ಮೈಲೇಜ್ ಕಂಡು ಗ್ರಾಹಕರು ಫುಲ್ ಫಿದಾ, ಬೆಲೆ ಕೂಡ ಕಡಿಮೆ

ಕಡಿಮೆ ಬೆಲೆಗೆ ಭರ್ಜರಿ ಮೈಲೇಜ್ ಕೊಡುವ ಕ್ರೆಟಾ ಕಾರಿಗೆ ಜನರು ಫಿದಾ ಆಗಿದ್ದಾರೆ

Hyundai Creta Facelift 2024: ಕೆಲವು ದಿನಗಳ ಹಿಂದೆ ದೇಶೀಯ ಮಾರುಕಟ್ಟೆಯಲ್ಲಿ ಹ್ಯುಂಡೈ (Hyundai) ಮೋಟಾರ್ ಇಂಡಿಯಾ ಲಿಮಿಟೆಡ್ ಹೊಸ ಕ್ರೆಟಾ ಫೇಸ್‌ಲಿಫ್ಟ್ (Creta Facelift) ಕಾರನ್ನು ಬಿಡುಗಡೆಗೊಳಿಸಿತ್ತು. ಅಷ್ಟೇ ವೇಗದಲ್ಲಿ ವಿತರಣೆಯನ್ನು ಶುರು ಮಾಡಿದ್ದು, ಈಗಾಗಲೇ ಮೊದಲ ಎಸ್‌ಯುವಿಯನ್ನು ಗ್ರಾಹಕನಿಗೆ ತಲುಪಿಸಲಾಗಿದೆ.

ರಾಜಸ್ಥಾನದ ಚಿತ್ತೋರ್‌ಗಢದಲ್ಲಿರುವ ಹ್ಯುಂಡೈ ಡೀಲರ್‌ಶಿಪ್‌ನಿಂದ ನೂತನ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿ ಹೊರಬರುತ್ತಿದ್ದು, ಶೋರೂಂ ಸಿಬ್ಬಂದಿಗಳು ಖರೀದಿದಾರನ ಸಂತೋಷವನ್ನು ಮತ್ತಷ್ಟು ಹಿಮ್ಮಡಿಗೊಳಿಸಲು ಪೈರೋ ಗನ್‌ಗಳನ್ನು ಬಳಕೆ ಮಾಡುತ್ತಿರುವುದನ್ನು ನೋಡಬಹುದು.

Hyundai Creta Facelift Price In India
Image Credit: Gaadiwaadi

ಕ್ರೆಟಾ ಫೇಸ್‌ಲಿಫ್ಟ್ ಕಾರಿನ ವೈಶಿಷ್ಟತೆಗಳು
ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಮುಂಭಾಗ ಎಲ್ ಆಕಾರದ ಎಲ್‌ಇಡಿ ಡಿಆರ್‌ಎಲ್‌, ನವೀನವಾದ ಎಲ್‌ಇಡಿ ಹೆಡ್‌ಲೈಟ್‌, ಹೊಸದಾದ ಪ್ಯಾರಾಮೆಟ್ರಿಕ್ ಫ್ರಂಟ್ ಗ್ರಿಲ್ ಅನ್ನು ಪಡೆದಿದೆ. ಹಿಂಭಾಗದ ವಿನ್ಯಾಸವು ಕೂಡ ಆಕರ್ಷಕವಾಗಿದ್ದು, ವಿಶೇಷವಾಗಿ 17-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್ಸ್ ಒಳಗೊಂಡಿದೆ.

ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ (Hyundai Creta Facelift) ಎಸ್‌ಯುವಿಯಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಈ ಕಾರು ಇ, ಇಎಕ್ಸ್, ಎಸ್, ಎಸ್(ಒ), ಎಸ್‌ಎಕ್ಸ್ ಟೆಕ್, ಎಸ್‌ಎಕ್ಸ್(ಒ) ರೂಪಾಂತರಗಳು (Variants), ರೇಂಜರ್ ಖಾಕಿ, ಅಬಿಸ್ ಬ್ಲಾಕ್, ಅಟ್ಲಾಸ್ ವೈಟ್, ಟೈಟಾನ್ ಗ್ರೇ ಸೇರಿದಂತೆ 6-ಮೊನೊಟೋನ್, 1-ಡುಯಲ್ ಟೋನ್ ಬಣ್ಣಗಳ ಆಯ್ಕೆಯನ್ನು ಸಿಗುತ್ತದೆ. ಫೇಸ್‌ಲಿಫ್ಟ್ ಸುರಕ್ಷತೆಯ ದೃಷ್ಟಿಯಿಂದ 6 – ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹೊಂದಿದೆ.

ಕ್ರೆಟಾ ಫೇಸ್‌ಲಿಫ್ಟ್ ಕಾರಿನ ಎಂಜಿನ್ ಹಾಗು ಮೈಲೇಜ್

Join Nadunudi News WhatsApp Group

ಕ್ರೆಟಾ ಫೇಸ್‌ಲಿಫ್ಟ್ ಇದು ಪೆಟ್ರೋಲ್ ಹಾಗೂ ಡಿಸೇಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 115 PS ಪವರ್ ಹಾಗೂ 144 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ವೀಡ್ ಮ್ಯಾನುವಲ್/ ಸಿವಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. ಮತ್ತೊಂದು 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 160 PS ಗರಿಷ್ಠ ಪವರ್, 253 Nm ಪೀಕ್ ಟಾರ್ಕ್ ಹೊರಹಾಕುತ್ತದೆ.

7-ಸ್ವೀಡ್ ಡಿಸಿಟಿ ಗೇರ್ ಬಾಕ್ಸ್ ಒಳಗೊಂಡಿದೆ. 1.5-ಲೀಟರ್ ಡಿಸೇಲ್ ಎಂಜಿನ್ 116 PS ಪವರ್, 250 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. 6-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಸಿಗುತ್ತದೆ. ಕ್ರೆಟಾ ಫೇಸ್‌ಲಿಫ್ಟ್ ಪೆಟ್ರೋಲ್ ರೂಪಾಂತರಗಳು 17.4 kmpl-18.4 kmpl, ಡೀಸೆಲ್ ರೂಪಾಂತರಗಳು 19.1 kmpl-21.8 kmpl ಇಂಧನ ದಕ್ಷತೆಯನ್ನು ಹೊಂದಿವೆ ಎಂದು ವರದಿಯಾಗಿದೆ.

Hyundai Creta Facelift 2024
Image Credit: Original Source

ಕ್ರೆಟಾ ಫೇಸ್‌ಲಿಫ್ಟ್ ಕಾರಿನ ಬೆಲೆ

ಒಂದೆರಡು ದಿನಗಳಲ್ಲಿ ದೇಶಾದ್ಯಂತವಿರುವ ಎಲ್ಲಾ ಹ್ಯುಂಡೈ ಡೀಲರ್‌ಶಿಪ್‌ಗಳಲ್ಲಿ ಕ್ರೆಟಾ ವಿತರಣೆ ಆರಂಭವಾಗಬಹುದು. ಈ ಕಾರು ರೂ.11 ಲಕ್ಷದಿಂದ ರೂ.20.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ ಎಂದು ಕಂಪನಿ ಹೇಳಿದೆ.

Join Nadunudi News WhatsApp Group