Tax Exemption: ದೇಶಾದ್ಯಂತ ಟ್ಯಾಕ್ಸ್ ಕಟ್ಟುವ ನಿಯಮದಲ್ಲಿ ಹೊಸ ಚೇಂಜಸ್.

ಇಂತಹ ಆದಾಯಗಳಿಗೆ ತೆರಿಗೆ ಕಟ್ಟುವ ಅಗತ್ಯ ಇಲ್ಲ, ತೆರಿಗೆ ಮುಕ್ತವಾಗಿರುವ ಆದಾಯಗಳ ಬಗ್ಗೆ ತಿಳಿಯಿರಿ.

Income Tax News: ಹೊಸ ಹಣಕಾಸು ವರ್ಷದಿಂದ ಐಟಿ ರಿಟರ್ನ್ (ITR) ಸಲ್ಲಿಕೆಯಲ್ಲಿ ಕೂಡ ಅನೇಕ ನಿಯಮಗಳು ಬದಲಾಗಿವೆ. ಆದಾಯ ತೆರಿಗೆ ಇಲಾಖೆ ಐಟಿ ರಿಟರ್ನ್ ಸಲ್ಲಿಕೆಯನ್ನು ಕಡ್ಡಾಯಗೊಳಿಸಿದೆ. ಹಣಕಾಸು ವರ್ಷ 2022 -23 ರ ಐಟಿ ರಿಟರ್ನ್ ಸಲ್ಲಿಕೆಗೆ ಕೊನೆಯ ದಿನಾಂಕ ನಿಗದಿಯಾಗಿದೆ. ಒಂದು ವರ್ಷದಲ್ಲಿ ತೆರಿಗೆ ಅನ್ವಯ ಆಗುವಂತಹ 50 ಲಕ್ಷ ಆದಾಯ ಇರುವ ಭಾರತೀಯ ಪ್ರಜೆಗಳು ಐಟಿಆರ್ 1 ಅನ್ನು ಸಲ್ಲಿಸಬೇಕು.

ಇಂತಹ ಆದಾಯಗಳಿಗೆ ತೆರಿಗೆ ವಿನಾಯಿತಿ ಲಭ್ಯ
ಜುಲೈ 31 ರ ವರೆಗೆ ಐಟಿ ರಿಟರ್ನ್ ಸಲ್ಲಿಕೆಯ ಸಮಯಾವಕಾಶವನ್ನು ನೀಡಲಾಗುತ್ತಿದೆ. ಇ ಫೈಲಿಂಗ್ ಪೋರ್ಟಲ್ ಮೂಲಕ ಐಟಿ ರಿಟರ್ನ್ ಅನ್ನು ಸಲ್ಲಿಸಬಹುದು. ವೈಯಕ್ತಿಕ ಆದಾಯ ತೆರಿಗೆ ಪಾವತಿದಾರರ ವ್ಯವಹಾರಗಳು ಮತ್ತು ಕಂಪನಿಗಳಿಗೆ ಏಳು ರೀತಿಯ ಐಟಿಆರ್ ಫಾರ್ಮ್ ಗಳಿರುತ್ತದೆ.

 Tax exemption available up to 7 lakh Rs.
Image Credit: Outlookmoney

ಹಳೆ ತೆರಿಗೆ ಪದ್ಧತಿ ಹಾಗೂ ಹೊಸ ತೆರಿಗೆ ಪದ್ದತಿಯ ಅಡಿಯಲ್ಲಿ ಐಟಿಆರ್ ಅನ್ನು ಸಲ್ಲಿಸಬಹುದಾಗಿದೆ. ಇನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ತೆರಿಗೆ ಪಾವತಿಯಲ್ಲಿ ಹೆಚ್ಚಿನ ವಿನಾಯಿತಿಯನ್ನು ನೀಡಿದ್ದಾರೆ.

ಇಂತಹ ಆದಾಯಗಳಿಗೆ ತೆರಿಗೆ ವಿನಾಯಿತಿ ಲಭ್ಯವಿರುತ್ತದೆ. ನೀವು ತೆರಿಗೆ ಪಾವತಿದಾರರಾಗಿದ್ದರೆ ಯಾವ ಯಾವ ಆದಾಯಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ ಎನ್ನುವ ಬಗ್ಗೆ ಒಂದಿಷ್ಟು ವಿವರಗಳನ್ನು ತಿಳಿಯೋಣ.

7 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ ಲಭ್ಯ
ಇನ್ನು ಬಜೆಟ್ 2023 ರಲ್ಲಿ ಹೊಸ ತೆರಿಗೆ ನಿಯಮವನ್ನು ಜಾರಿಗೊಳಿಸಲಾಗಿದೆ. ತೆರಿಗೆ ಸ್ಲಾಬ್ ಗಳಲ್ಲಿ ಸಾಕಷ್ಟು ಬದಲಾವಣೆಯನ್ನು ತರಲಾಗಿದೆ. ಇದೀಗ 7 ಲಕ್ಷ ರೂ.ವರೆಗಿನ ಆದಾಯದ ಮೇಲೆ ಯಾವುದೇ ತೆರಿಗೆಯನ್ನು ವಿಧಿಸಲಾಗುವುದಿಲ್ಲ.

Join Nadunudi News WhatsApp Group

 Tax exemption available up to 7 lakh Rs.
Image Credit: Businesstoday

ಕೇಂದ್ರ ಸರ್ಕಾರ ಕೆಲವು ಆದಾಯಗಳ ಮೇಲೆ ತೆರಿಗೆ ವಿನಾಯಿತಿಯನ್ನು ನೀಡಿದೆ. ಕೆಲವು ಮೂಲದ ಆದಾಯವು ತೆರಿಗೆ ಮುಕ್ತವಾಗಿರುತ್ತದೆ. ತೆರಿಗೆ ಮುಕ್ತ ಆದಾಯದ ಬಗ್ಗೆ ಮಾಹಿತಿ ತಿಳಿಯೋಣ.

ಇಂತಹ ಆದಾಯಗಳು ತೆರಿಗೆ ಮುಕ್ತವಾಗಿವೆ
*ಕೇಂದ್ರ ಸರ್ಕಾರ 1961 RA ಆದಾಯ ತೆರಿಗೆ ಕಾಯ್ದೆ ಅಡಿಯಲ್ಲಿ ಕೃಷಿಯೇತರ ಆದಾಯಗಳಿಗೆ ತೆರಿಗೆ ವಿಧಿಸಿಲ್ಲ. ದೇಶದ ರೈತರು ಕೃಷಿಯಿಂದ ಗಳಿಸಿದ ಆದಾಯಗಳು ತೆರಿಗೆ ಮುಕ್ತವಾಗಿರುತ್ತದೆ.
*ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 10 (2 ) ಅಡಿಯಲ್ಲಿ, ಹಿಂದೂ ಅವಿಭಜಿತ ಕುಟುಂಬದಿಂದ ಪಿತ್ರಾರ್ಜಿತ ರೂಪದಲ್ಲಿ ಪಡೆದ ಆದಾಯವು ತೆರಿಗೆ ಮುಕ್ತ ಆಗಿರುತ್ತದೆ.

 Tax exemption available up to 7 lakh Rs.
Image Credit: Economictimes

*ಇನ್ನು ಉಳಿತಾಯ ಖಾತೆಯ ಹೂಡಿಕೆಯ ಬಡ್ಡಿಯಿಂದ ಗಳಿಸಿದ ಹಣಕ್ಕೆ ಯಾವುದೇ ರೀತಿಯ ತೆರಿಗೆ ಕಟ್ಟಬೇಕಿಲ್ಲ.
*ಕೇಂದ್ರ ಮತ್ತು ರಾಜ್ಯ ಸರ್ಕಾರೀ ನೌಕರರು ಪಡೆಯುವ ಗ್ರಾಚ್ಯುವಿಟಿ ಮೊತ್ತಕ್ಕೆ ತೆರಿಗೆ ವಿನಾಯಿತಿ ಲಭ್ಯವಿದೆ.
*ಇನ್ನು 5 ಲಕ್ಷಕ್ಕಿಂತ ಹೆಚ್ಚಿನ VRS ನಲ್ಲಿ ಪಡೆದ ಮೊತ್ತದ ಮೇಲೆ ತೆರಿಗೆ ವಿನಾಯಿತಿ ಲಭ್ಯವಿದೆ.
*ಇನ್ನು ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನದ ಮೊತ್ತ ಅಥವಾ ಪ್ರಶಸ್ತಿಯ ಮೊತ್ತಕ್ಕೆ ತೆರಿಗೆವಿನಾಯಿತಿ ಲಭ್ಯವಿದೆ.

Join Nadunudi News WhatsApp Group