Post Office: SSLC ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ನೇಮಕಾತಿ, 63000 ರೂ. ಸಂಬಳ.

SSLC ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ನೇಮಕಾತಿ

Indian Post Office Job Recruitment: ಭಾರತೀಯ ಅಂಚೆ ಇಲಾಖೆಯು ಆಗಾಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡುತ್ತಲೇ ಇರುತ್ತದೆ. ನಿರುದ್ಯೋಗಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಹುದ್ದೆಯನ್ನು ಪಡೆದುಕೊಳ್ಳಬಹುದು.

ಈ ಬಾರಿ Indian Post Office SSLC ಪಾಸ್ ಆದವರಿಗೆ ಉತ್ತಮ ಹುದ್ದೆಯ ಅವಕಾಶವನ್ನು ನೀಡಿದೆ. SSLC ಪಾಸ್ ಆದವರು ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು. ಪೋಸ್ಟ್ ಆಫೀಸ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿರುವ ಖಾಲಿ ಹುದ್ದೆಗಳ ವಿವರ, ಹುದ್ದೆಗೆ ವೇತನ, ಅರ್ಜಿ ಸಲ್ಲಿಕೆಯ ವಿವರದ ಬಗ್ಗೆ ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ.

India Post Office Job Vacancy
Image Credit: Jobcaam

SSLC ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ನೇಮಕಾತಿ
ಸದ್ಯ ಭಾರತೀಯ ಅಂಚೆ ಇಲಾಖೆಯು ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿಯಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 23 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಆಫ್‌ ಲೈನ್/ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳು ಈ ಅವಕಾಶದ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಕೆಗೆ ಇರಬೇಕಾದ ಅರ್ಹತೆಗಳೇನು…?
•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 23 2024 ಕ್ಕೆ ಗರಿಷ್ಠ 56 ವರ್ಷಗಳನ್ನು ಮೀರಬಾರದು. ಮೀಸಲಾತಿಗೆ ಒಳಪಟ್ಟಿರುವ ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆಯನ್ನು ನೀಡಲಾಗುತ್ತದೆ.

Join Nadunudi News WhatsApp Group

•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ 19,900-63,200 ವೇತನವನ್ನು ನೀಡಲಾಗುತ್ತದೆ.

India Post Office Job Vacancy 2024
Image Credit: Indian Express

•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳನ್ನು ನವದೆಹಲಿಯಲ್ಲಿ ಪೋಸ್ಟ್ ಮಾಡಲಾಗುತ್ತದೆ.

•ಅರ್ಜಿ ಸಲ್ಲಿಕೆ ಆರಂಭ ದಿನಾಂಕ 03/06/2024 ಆಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 23, 2024 ಆಗಿದೆ.

•ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು.
ವಿನಾಯಕ ಮಿಶ್ರಾ
ಸಹಾಯಕ ಮಹಾನಿರ್ದೇಶಕರು (ಆಡಳಿತ)
ದಕ್ ಭವನ
ಸಂಸದ್ ಮಾರ್ಗ
ನವದೆಹಲಿ-110001

Post Office Recruitment
Image Credit: Zeebiz

Join Nadunudi News WhatsApp Group