Indian Post Office Job: SSLC ಪಾಸ್ ಆದವರಿಗೆ ಗುಡ್ ನ್ಯೂಸ್, ಅಂಚೆ ಇಲಾಖೆಯಲ್ಲಿ 44 ಸಾವಿರ ಹುದ್ದೆಗೆ ಅರ್ಜಿ ಆಹ್ವಾನ.

ಅಂಚೆ ಇಲಾಖೆಯಲ್ಲಿ 44 ಸಾವಿರ ಹುದ್ದೆಗೆ ಅರ್ಜಿ ಆಹ್ವಾನ

Indian Post Office Job Recruitment 2024: ಭಾರತೀಯ ಅಂಚೆ ಇಲಾಖೆಯು ನಿರುದ್ಯೋಗಿಗಳಿಗೆ ಉದ್ಯೋಗವನ್ನು ಕಂಡುಕೊಳ್ಳಲು ಆಗಾಗ ಅವಕಾಶವನ್ನು ನೀಡುತ್ತಿರುತ್ತದೆ. ಅಂಚೆ ಇಲಾಖೆಯು ಉದ್ಯೋಗಕ್ಕೆ ಅರ್ಜಿ ಆಹ್ವಾನ ಮಾಡುತ್ತಿರುವುದಕ್ಕೆ ಸಾಕಷ್ಟು ವಿದ್ಯಾವಂತರು ಕಾಯುತ್ತಿರುತ್ತಾರೆ. ಸದ್ಯ ಅಂತವರಿಗಾಗಿ ಮಹತ್ವದ ಮಾಹಿತಿ ಹೊರಬಿದಿದೆ.

ಈ ಬಾರಿ Indian Post Office SSLC ಪಾಸ್ ಆದವರಿಗೆ ಉತ್ತಮ ಹುದ್ದೆಯ ಅವಕಾಶವನ್ನು ನೀಡಿದೆ. SSLC ಪಾಸ್ ಆದವರು ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು. ಅಂಚೆ ಇಲಾಖೆಯ ಹುದ್ದೆಯ ಅರ್ಜಿ ಸಲ್ಲಿಕೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

India Post Office Recruitment 2024
Image Credit: Adda247

ಅಂಚೆ ಇಲಾಖೆಯಲ್ಲಿ 44 ಸಾವಿರ ಹುದ್ದೆಗೆ ಅರ್ಜಿ ಆಹ್ವಾನ
ಸದ್ಯ ಭಾರತೀಯ ಅಂಚೆ ಇಲಾಖೆಯು ಖಾಲಿ ಇರುವ ಹುದ್ದೆಯನ್ನು ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತದಾದ್ಯಂತ ಸುಮಾರು 44,228 ಹುದ್ದೆಗಳು ಖಾಲಿ ಇವೆ. ಕರ್ನಾಟಕ ರಾಜ್ಯದಲ್ಲಿ 1,940 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಅಂಚೆ ಇಲಾಖೆ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ಮಾಡಲು ಬಯಸುವವರಿಗೆ ಇದು ಸರಿಯಾದ ಸಮಯ.

ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳು ಖಾಲಿಯಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆಫ್‌ ಲೈನ್/ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳು ಈ ಅವಕಾಶದ ಪ್ರಯೋಜನವನ್ನು ಪಡೆದುಕೊಳ್ಳಬಹುದು. ನಿರುದ್ಯೋಗಿಗಳಿಗೆ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉದ್ಯೋಗವನ್ನು ಪಡೆದುಕೊಳ್ಳಬಹುದು.

Post Office Job
Image Credit: Saamtv

ಅಂಚೆ ಇಲಾಖೆಯ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು…?
•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

Join Nadunudi News WhatsApp Group

•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು 18 -40 ವರ್ಷದೊಳಗಿರಬೇಕು. ಮೀಸಲಾತಿಗೆ ಒಳಪಟ್ಟಿರುವ ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆಯನ್ನು ನೀಡಲಾಗುತ್ತದೆ.

•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ 10000 ದಿಂದ 12000 ವೇತನ ನೀಡಲಾಗುತ್ತದೆ.

•ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು https://indiapostgdsonline.gov.in/ ವೆಬ್‌ ಸೈಟ್ ನೀಡಲಾಗಿದೆ. ಇಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿಕೊಂಡು, ಲಾಗಿನ್ ಮಾಡಿ ಮತ್ತು ವಿವರಗಳನ್ನು ನಮೂದಿಸಿ ಮತ್ತು ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.

Indian Post Office Job Recruitment 2024
Image Credit: Wbhrb

Join Nadunudi News WhatsApp Group