Postal Recruitment: 10 ನೇ ತರಗತಿ ಪಾಸ್ ಆದವರಿಗೆ ಪೋಸ್ಟ್ ಆಫೀಸ್ ಉದ್ಯೋಗ ಖಾಲಿ ಖಾಲಿ, ಇಂದೇ ಅರ್ಜಿ ಸಲ್ಲಿಸಿ

SSLC ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಉದ್ಯೋಗ

Indian Post Office Recruitment 2024: ಈಗಾಗಲೇ 2023 -24 ರ ಶೈಕ್ಷಣಿಕ ಸಾಲಿನ 10 ನೇ ತರಗತಿ ಹಾಗೂ ದ್ವಿತೀಯ PUC ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ಮುಂದೇನು ಎನ್ನುವ ಯೋಚನೆಯಲ್ಲಿದ್ದಾರೆ. ಇನ್ನು ಹಲವು ಕಡೆ 10 ನೇ ತರಗತಿಯಲ್ಲಿ ಉತ್ತಮ ಅಂಕವನ್ನು ಗಳಿಸಿದರೆ ಸರ್ಕಾರೀ ಉದ್ಯೋಗ ಪಡೆಯುವ ಅವಕಾಶ ಇರುತ್ತದೆ.

ಅದರಲ್ಲೂ Indian Post Office SSLC ಪೂರ್ಣಗೊಂಡವರಿಗಾಗಿ ಆಗಾಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡುತ್ತಿರುತ್ತದೆ. ಹುದ್ದೆಯ ವಿಧ…? ಅರ್ಜಿ ಸಲ್ಲಿಕೆಯ ವಿವರ..? ಸೇರಿದಂತೆ ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

India Post Recruitment
Image Credit: Tnauonline

SSLC ಪಾಸ್ ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಉದ್ಯೋಗ
ಸದ್ಯ ಭಾರತೀಯ ಅಂಚೆ ಇಲಾಖೆಯು ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 19 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿಯಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮೇ 31, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಆಫ್‌ ಲೈನ್/ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗಾಕಾಂಕ್ಷಿಗಳು ಈ ಅವಕಾಶದ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಈ ಷರತ್ತುಗಳು ಅನ್ವಯ
•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು 31 ನೇ ಮೇ 2024 ಕ್ಕೆ ಗರಿಷ್ಠ 56 ವರ್ಷಗಳನ್ನು ಮೀರಬಾರದು. ಮೀಸಲಾತಿಗೆ ಒಳಪಟ್ಟಿರುವ ಅಭ್ಯರ್ಥಿಗಳಿಗೆ ವಯಸ್ಸಿನ ಸಡಿಲಿಕೆಯನ್ನು ನೀಡಲಾಗುತ್ತದೆ.

Join Nadunudi News WhatsApp Group

Indian Post Office Recruitment 2024
Image Credit: Timesbull

•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಯಾವುದೇ ನಿಗದಿತ ವೇತನವಿಲ್ಲ. ಸಂಬಳವು ಅನುಭವ ಮತ್ತು ಕಾರ್ಯಕ್ಷಮತೆಯನ್ನು ಆಧರಿಸಿದೆ.

•ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳನ್ನು ಬಿಹಾರದ ಪಾಟ್ನಾದಲ್ಲಿ ಪೋಸ್ಟ್ ಮಾಡಲಾಗುತ್ತದೆ.

•ಅರ್ಜಿ ಸಲ್ಲಿಕೆ ಆರಂಭ ದಿನಾಂಕ 16/04/2024 ಆಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 31, 2024 ಆಗಿದೆ.

•ನಿಮ್ಮ ಅರ್ಜಿಯನ್ನು ಈ ವಿಳಾಸಕ್ಕೆ ಪೋಸ್ಟ್ ಮಾಡಬಹುದು
ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ
ಬಿಹಾರ ಸರ್ಕಲ್
ಪಾಟ್ನಾ-800001

Post Office Recruitment Details
Image Credit: Bhopalupdate

Join Nadunudi News WhatsApp Group