No Interest Loan: ರಾಜ್ಯದ ಮಹಿಳೆಯರಿಗೆ ಭರ್ಜರಿ ದಸರಾ ಗಿಫ್ಟ್ ಕೊಟ್ಟ ಸರ್ಕಾರ, ಬಡ್ಡಿ ಇಲ್ಲದೆ ಸಿಗಲಿದೆ 2 ಲಕ್ಷ ರೂ ಸಾಲ.

ನವರಾತ್ರಿ ವಿಶೇಷಕ್ಕೆ ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್, 2 ಲಕ್ಷ ರೂ. ಬಡ್ಡಿರಹಿತ ಸಾಲ ಘೋಷಣೆ.

Interest free loan For Women’s: ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಹೆಚ್ಚಿನ ಕ್ರಮ ವಹಿಸುತ್ತಿದೆ. ಸದ್ಯ ದೇಶದಲ್ಲಿ ಮಹಿಳೆಯರಿಂಗಿ ವಿವಿದ ಯೋಜನೆನ್ನು ರೂಪಿಸುವ ಮೂಲಕ ಮಹಿಳೆಯರಿಗೆ ಆರ್ಥಿಕ ಸ್ಥಿರತೆ ಕಾಪಾಡಲು ಸರ್ಕಾರ ಸಹಾಯವಾಗುತ್ತಿದೆ ಎನ್ನಬಹುದು. ಸದ್ಯ ರಾಜ್ಯ ಸರ್ಕಾರ ಮಹಿಳೆಯರಿಗಾಗಿ ವಿಶೇಷ ಸೌಲಭ್ಯ ನೀಡಲು ಮುಂದಾಗಿದೆ.

Interest free loan For Women's
Image Credit: Livemint

ನವರಾತ್ರಿ ವಿಶೇಷಕ್ಕೆ ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್
ಈಗಾಗಲೇ ರಾಜ್ಯದಲ್ಲಿ ಮಹಿಳೆಯರಿಗಾಗಿ ಶಕ್ತಿ ಯೋಜನೆ & ಗೃಹ ಲಕ್ಷ್ಮಿ ಯೋಜನೆಯನ್ನು ನೀಡುತ್ತಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ ಎನ್ನಬಹುದು.

ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಇದೀಗ ರಾಜ್ಯ ಸರ್ಕಾರ ಮತ್ತೊಂದು ಸಾಲ ಸೌಲಭ್ಯವನ್ನು ವಿಶೇಷವಾಗಿ ಮಹಿಳೆಯರಿಗೆ ರೂಪಿಸಲು ನಿರ್ಧರಿಸಿದೆ. ಮಹಿಳಾ ಸಬಲೀಕರಣ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ನೀಡುವುದಾಗಿ ಮಹಿಳಾ ಮತ್ತು ಕಲ್ಯಾಣ ಸಚಿವೆ Lakshmi Hebbalakar ಘೋಷಣೆ ಹೊರಡಿಸಿದ್ದಾರೆ.

Lakshmi Hebbalakar Latest News
Image Credit: ETV Bharat

ಮಹಿಳೆಯರಿಗಾಗಿ 2 ಲಕ್ಷ ರೂ. ಬಡ್ಡಿರಹಿತ ಸಾಲ
ಸ್ತ್ರೀಶಕ್ತಿ ಸಂಘಗಳ ಮೂಲಕ ಮಹಿಳಾ ಸಬಲೀಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಒಟ್ಟು 1 ಲಕ್ಷ 65 ಸಾವಿರ ಸ್ತ್ರೀ ಶಕ್ತಿ ಗುಂಪುಗಳಿಗೆ ತಲಾ ರೂ. 25000 ಆವರ್ತ ನಿಧಿ ನೀಡಲು ಸರ್ಕಾರ ನಿರ್ಧರಿಸಿದೆ. ಇದಲ್ಲದೆ ಸ್ತ್ರೀ ಶಕ್ತಿ ಸಂಘಟನೆಗಳಿಗೆ ರೂ. 2 ಲಕ್ಷದವರೆಗೆ ಬಡ್ಡಿರಹಿತ ಸಾಲ ಸೌಲಭ್ಯವನ್ನು ನೀಡಲು ಯೋಜನೆ ಹೂಡಲಾಗಿದೆ.

“ಮಹಿಳೆಯರ ಸ್ವಾಲಂಬಿ ಬದುಕಿಗೆ ನಮ್ಮ ಸರ್ಕಾರವು ಬೆಂಬಲವಾಗಿ ನಿಂತಿದ್ದು, ಸ್ತ್ರೀ ಶಕ್ತಿ ಸಂಘಗಳ ಮೂಲಕ ನೆರವು ಪಡೆದ ಮಹಿಳೆಯರು ಗುಡಿ ಕೈಗಾರಿಕೆ, ಕಸೂತಿ, ಚಿಕ್ಕಪುಟ್ಟ ವ್ಯಾಪಾರ ವಹಿವಾಟು ಸೇರಿದಂತೆ ಇನ್ನಿತರ ಆದಾಯ ಬರುವ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು, ಕೌಟುಂಬಿಕ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

Join Nadunudi News WhatsApp Group

Interest free loan
Image Credit: Zeebiz

ಸ್ತ್ರೀಶಕ್ತಿ ಆರಾಧನೆಯ ಈ ನವರಾತ್ರಿ ಶುಭ ಸಂದರ್ಭದಲ್ಲಿ ನಮ್ಮ ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಬದ್ದವಾಗಿದ್ದು, ಮಹಿಳೆಯರ ಏಳಿಗೆಗಾಗಿ ಹಗಲಿರುಳು ಶ್ರಮಿಸುತ್ತಿದೆ” ಎಂದು ಮಹಿಳಾ ಮತ್ತು ಕಲ್ಯಾಣ ಸಚಿವೆ Lakshmi Hebbalakar ಹೇಳಿದ್ದಾರೆ.

Join Nadunudi News WhatsApp Group