Interest Cancel: ಸಿದ್ದರಾಮಯ್ಯ ಇನ್ನೊಂದು ಘೋಷಣೆ, ಇಂತಹ ಜನರ ಸಾಲಗಳ ಸಂಪೂರ್ಣ ಬಡ್ಡಿ ಮನ್ನಾ

ರಾಜ್ಯ ಸರ್ಕಾರ ರೈತರಿಗೆ ಸಾಲದ ಅಸಲು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ ಮಾಡುವುದಾಗಿ ಘೋಷಣೆ ಹೊರಡಿಸಿದೆ.

Interest Waived Update 2024: ಸದ್ಯ ರಾಜ್ಯ ಸರ್ಕಾರ ಈಗಾಗಲೇ ಸಾಕಷ್ಟು ಸೌಲಭ್ಯವನ್ನು ಒದಗಿಸುತ್ತಿದೆ. ಈಗಾಗಲೇ ರಾಜ್ಯದ ಕಾಂಗ್ರೆಸ್ ಸರ್ಕಾರದ (Congress Government) ಉಚಿತ ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವಾರು ಯೋಜನೆಗಳನ್ನು ಸರಕಾರ ಘೋಷಿಸಿದೆ. ಅದರಲ್ಲೂ ಮುಖ್ಯವಾಗಿ ಸರ್ಕಾರ ರೈತರಿಗೆ ಹೆಚ್ಚಿನ ಯೋಜನೆಯನ್ನು ಪರಿಚಯಿಸಿದೆ.

ಈ ಬಾರಿ ರಾಜ್ಯದಲ್ಲಿ ಮಳೆ ಕೈಕೊಟ್ಟ ಕಾರಣಕ್ಕೆ ಅನ್ನದಾತರು ಹೆಚ್ಚಿನ ನಷ್ಟವನ್ನು ಅನುಭವಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಅನ್ನದಾತರ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ವಿವಿಧ ಯೋಜನೆಯನ್ನು ಪರಿಚಯಿಸಿದೆ. ಸದ್ಯ ರಾಜ್ಯ ಸರ್ಕಾರ ರೈತರಿಗೆ ಬಡ್ಡಿ ಮನ್ನಾ ಮಾಡುವುದಾಗಿ ಘೋಷಣೆ ಹೊರಡಿಸಿದೆ.

Karnataka Crop Loan Interest Waiver Scheme
Image Credit: India

ಸಾಲದ ಅಸಲು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ
ರಾಜ್ಯದ ರೈತರು ಸಹಕಾರಿ ಬ್ಯಾಂಕ್ ಗಳಲ್ಲಿ ಮಾಡಿರುವಂತ ಸಾಲದ ಅಸಲು ಕಟ್ಟಿದರೆ ಅದರ ಮೇಲಿನ ಬಡ್ಡಿ ಸಂಪೂರ್ಣ ಮನ್ನಾ ಮಾಡುದಾಗಿ ರಾಜ್ಯ ಸರ್ಕಾರ ಈಗಾಗಲೇ ಘೋಷಣೆ ಹೊರಡಿಸಿದೆ. ಸರ್ಕಾರದ ಆದೇಶದಲ್ಲಿ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ.

ರಾಜ್ಯದಲ್ಲಿ ಆಗಿರುವಂತಹ ಅನಾವೃಷ್ಟಿಗಳ ಹಿನ್ನೆಲೆಯಲ್ಲಿ ರಾಜ್ಯದ ರೈತರು ಸಹಕಾರಿ ಸಂಸ್ಥೆಗಳಿಂದ ಪಡೆದ ಮಧ್ಯಮಾವಧಿ ಮತ್ತು ಧೀರ್ಘವದಿ ಸಾಲ ಮರುಪಾವತಿಸಲು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ. ಸಾಲ ಪಡೆದು ಡಿಸೆಂಬರ್ 31 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ಧೀರ್ಘವದಿ ಸಾಲದ ಅಸಲನ್ನು ಫೆಬ್ರವರಿ 29 ರೊಳಗೆ ಮರುಪಾವತಿಸಿದಲ್ಲಿ ಈ ಮೊತ್ತಕ್ಕೆ ಬಾಕಿ ಇರುವ ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ.

Interest Waived Update
Image Credit: Thehansindia

ಇಂತಹ ಸಾಲಗಳಿಗೆ ಮಾತ್ರ ಬಡ್ಡಿ ಮನ್ನಾ ಅನ್ವಯವಾಗಲಿದೆ
ಈ ಸೌಲಭ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಗಳಿಂದ ಸಾಲ ಪಡೆದು ಡಿಸೆಂಬರ್ 31 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ಧೀರ್ಘವದಿ ಕೃಷಿ ಮತ್ತು ಕೃಷಿ ಸಂಬಂದಿತ ಸಾಲಗಳಿಗೆ ಮಾತ್ರ ಅನ್ವಹಿಸುತ್ತದೆ.

Join Nadunudi News WhatsApp Group

ಕೃಷಿಯೇತರ ಸಾಲಗಳಿಗೆ ಈ ಸೌಲಭ್ಯ ಅನ್ವಯವಾಗುದಿಲ್ಲ. ಏಪ್ರಿಲ್ 1 2004 ರ ನಂತರದ ಸಾಲಗಳಿಗೆ ಆಯಾ ವರ್ಷದಲ್ಲಿ ರೈತರು ಪಾವತಿಸಬೇಕಾದ ಬಡ್ಡಿ, ಸರ್ಕಾರ ಪಾವತಿಸಬೇಕಾದ ಬಡ್ಡಿ, ಮತ್ತು ಸಹಾಯಧನದ ಒಟ್ಟು ಬಡ್ಡಿ ಅನ್ನು ಸಂಬಂಧಿಸಿದ ಸಹಕಾರ ಸಂಸ್ಥೆಗಳಿಗೆ ಸರ್ಕಾರದಿಂದ ಭರಿಸಲಾಗುವುದು.

Join Nadunudi News WhatsApp Group