IPL 2024: RCB ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್, ಈ ಸಲ ಪಕ್ಕಾ ಕಪ್ ನಮ್ಮದೇ

RCB ಅಭಿಮಾನಿಗಳಿಗೆ ಗುಡ್ ನ್ಯೂಸ್, ವಿರಾಟ್ ಕಡೆಯಿಂದ ಬಂತು ಗುಡ್ ನ್ಯೂಸ್

IPL 2024 RCB Team Captain Virat Kohli: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 2024ರ ಪಂದ್ಯಾವಳಿ ಆರಂಭಕ್ಕೆ ಸಕಲ ಸಿದ್ಧತೆಗಳಾಗಿದೆ. 2024ರ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ಮಾರ್ಚ್ 22ರಂದು 17ನೇ ಆವೃತ್ತಿಗೆ ಚಾಲನೆ ಸಿಗುವ ಸಾಧ್ಯತೆ ಇದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಚೊಚ್ಚಲ ಬಾರಿಗೆ ಟ್ರೋಫಿ ಎತ್ತಿ ಹಿಡಿಯಲು ಪ್ರಯತ್ನಿಸುತ್ತಿದೆ. ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಈ ಬಾರಿ ಪ್ರಶಸ್ತಿ ಗೆಲ್ಲುವ ಮೂಲಕ ಅಭಿಮಾನಿಗಳಿಗೆ ದೊಡ್ಡ ಗಿಫ್ಟ್ ನೀಡಲು ಸಜ್ಜಾಗಿದೆ.

IPL 2024 RCB Team Captain Virat Kohli
Image Credit: Cricreads

ಆರ್‌ಸಿಬಿ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ

ಈ ಆವೃತ್ತಿಯಲ್ಲಿ ತಮ್ಮ ಚೊಚ್ಚಲ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲುವ ಸಲುವಾಗಿ ಬೆಂಗಳೂರು ತಂಡವನ್ನು ಮುನ್ನಡೆಸಲು ಅನುಭವಿ ಹಾಗೂ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಿಂದಿರುಗುವ ಬಗ್ಗೆ ಕೆಲ ವರದಿಗಳು ಸುಳಿವು ನೀಡಿವೆ. ಅಭಿಮಾನಿಗಳು ತಮ್ಮ ಮೆಚ್ಚಿನ ತಂಡದ ಬೆಂಬಲಕ್ಕೆ ನಿಲ್ಲುತ್ತಿದ್ದಂತೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕತ್ವವನ್ನು ವಿರಾಟ್ ಕೊಹ್ಲಿ ಮರಳಿ ಪಡೆಯುವ ನಿರೀಕ್ಷೆಯು ಕುತೂಹಲವನ್ನು ಹೆಚ್ಚಿಸಿದೆ. ಇದು ಆರ್‌ಸಿಬಿ ಅಭಿಮಾನಿಗಳಿಗೆ ಅತ್ಯಂತ ಖುಷಿಯ ವಿಚಾರವೆನಿಸಿದರೂ, ವಿರಾಟ್ ಕೊಹ್ಲಿ ಮತ್ತೆ ನಾಯಕತ್ವ ಒಪ್ಪಿಕೊಳ್ಳುತ್ತಾರೆಯೇ ಎಂಬುದು ಸದ್ಯದ ಪ್ರಶ್ನೆಯಾಗಿ ಉಳಿದಿದೆ.

ನಾಯಕನಾಗಿ ವಿರಾಟ್ ಕೊಹ್ಲಿ ಸಾಧನೆ

Join Nadunudi News WhatsApp Group

ಉದ್ಘಾಟನಾ ಆವೃತ್ತಿಯಿಂದಲೂ ಆರ್‌ಸಿಬಿ ತಂಡದ ಪರ ಆಡುತ್ತಿರುವ 35 ವರ್ಷದ ಕ್ರಿಕೆಟ್ ಸೆನ್ಸೇಷನ್ ವಿರಾಟ್ ಕೊಹ್ಲಿ ಅವರನ್ನು ನಾಯಕನಾಗಿ ಮರುಸ್ಥಾಪಿಸಲು ಆರ್‌ಸಿಬಿ ಮ್ಯಾನೇಜ್‌ಮೆಂಟ್ ಚಿಂತಿಸುತ್ತಿದೆ ಎಂದು ಹೇಳಲಾಗುತ್ತಿದೆ. ದಕ್ಷಿಣ ಆಫ್ರಿಕಾ ಬ್ಯಾಟರ್ ಫಾಫ್ ಡು ಪ್ಲೆಸಿಸ್ ಪ್ರಸ್ತುತ ಆರ್‌ಸಿಬಿ ನಾಯಕತ್ವವನ್ನು ಹೊಂದಿದ್ದಾರೆ.

2022 ರ ಐಪಿಎಲ್ ನಂತರ, ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್‌ನ ಮೇಲೆ ಮಾತ್ರ ಕೇಂದ್ರೀಕರಿಸಲು ನಿರ್ಧರಿಸಿದಾಗ ಫಾಫ್ ಡು ಪ್ಲೆಸಿಸ್ ನಾಯಕತ್ವದ ಜವಾಬ್ದಾರಿ ವಹಿಸಿಕೊಂಡರು. 2023ರ ಐಪಿಎಲ್ ಋತುವಿನಲ್ಲಿ ವಿರಾಟ್ ಕೊಹ್ಲಿ 14 ಇನ್ನಿಂಗ್ಸ್‌ಗಳಿಂದ 53.25ರ ಸರಾಸರಿಯಲ್ಲಿ 139ರ ಸ್ಟ್ರೈಕ್ ರೇಟ್‌ನೊಂದಿಗೆ 639 ರನ್ ಗಳಿಸುವ ಮೂಲಕ ನಾಲ್ಕನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದರು.

IPL 2024 RCB Team
Image Credit: India

2024ರ ಐಪಿಎಲ್‌ಗಾಗಿ ಆರ್‌ಸಿಬಿ ಪೂರ್ಣ ತಂಡ ಹೀಗಿದೆ

2024ರ ಐಪಿಎಲ್‌ ನಲ್ಲಿ ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ಡಾಗರ್, ವಿಜಯ್‌ ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರ್ರಾನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್ ಆಡಲಿದ್ದಾರೆ.

Join Nadunudi News WhatsApp Group