iQOO: ಎಷ್ಟೇ ದೂರ ಇದ್ದರು ಹತ್ತಿರ ಇದ್ದಂತೆ ಫೋಟೋ ತೆಗೆಯಬಹುದು, 5000 mAh ಬ್ಯಾಟರಿ ಇರುವ ಇನ್ನೊಂದು ಮೊಬೈಲ್ ಲಾಂಚ್

ಆಕರ್ಷಕ ಕ್ಯಾಮೆರಾ ಮತ್ತು ಬ್ಯಾಟರಿ ಬ್ಯಾಕ್ ಅಪ್ ಇರುವ ಇನ್ನೊಂದು ಮೊಬೈಲ್ ಲಾಂಚ್

iQOO 12 Smart Phone Feature: ಭಾರತದಲ್ಲಿ ಇದೀಗ ಯುವ ಪೀಳಿಗೆಯ ಆಕರ್ಷಕ ಸ್ಮಾರ್ಟ್ ಫೋನ್ ಗ್ರಾಂಡ್ ಎಂಟ್ರಿ ಯನ್ನು ಪಡೆದಿದೆ. ಅಧಿಕ ನಿರೀಕ್ಷೆಯನ್ನು ಹೊಂದಿದ ಐಕ್ಯೂ 12 ಸ್ಮಾರ್ಟ್‌ಫೋನ್‌ ಭಾರತೀಯ ಮಾರುಕಟ್ಟೆಯಲ್ಲಿ ಮಿಂಚುತಿದೆ. ಈ ಫೋನ್ ಫೋಟೋಗ್ರಾಪಿ ಫೋನ್ ಆಗಿದ್ದು, ಕ್ಯಾಮೆರಾ ಫೀಚರ್ಸ್ ನೋಡಿದರೆ ತಿಳಿಯುತ್ತದೆ.

ಐಕ್ಯೂ 12 (iQOO 12) ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ ಡ್ರಾಗನ್‌ 8 Gen 3 SoC ಪ್ರೊಸೆಸರ್ ಹೊಂದಿರುವ ಭಾರತದ ಮೊದಲ ಫೋನ್‌ ಎನಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್‌ 14 ನಲ್ಲಿ ಕಾರ್ಯನಿರ್ವಹಿಸಲಿದ್ದು, FuntouchOS 14 ನಲ್ಲಿ ಚಾಲನೆಯಲ್ಲಿದೆ.

iQOO 12 Smart Phone Price
Image Credit: Mashable

ಐಕ್ಯೂ 12 ಸ್ಮಾರ್ಟ್‌ಫೋನ್‌ನ ಡಿಸ್‌ಪ್ಲೇ ರಚನೆ ಹಾಗು ಪ್ರೊಸೆಸರ್‌ ಕುರಿತು ಮಾಹಿತಿ

ಐಕ್ಯೂ 12 ಸ್ಮಾರ್ಟ್‌ಫೋನ್‌ 6.78 ಇಂಚಿನ 1.5K LTPO OLED ಡಿಸ್‌ಪ್ಲೇಯನ್ನು ಹೊಂದಿದು, ಈ ಡಿಸ್‌ಪ್ಲೇ 2800 x 1260 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಡಿಸ್‌ಪ್ಲೇ 3000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ. 2160Hz PWM ಡಿಮ್ಮಿಂಗ್‌ ಅನ್ನು ಬೆಂಬಲಿಸಲಿದ್ದು, ಕಣ್ಣಿಗೆ ಸುರಕ್ಷತೆಯನ್ನು ನೀಡಲಿದೆ.

ಐಕ್ಯೂ 12 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 3 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 14 ನಲ್ಲಿ ಕಾರ್ಯನಿರ್ವಹಿಸಲಿದ್ದು, FuntouchOS 14 ನಲ್ಲಿ ಚಾಲನೆಯಲ್ಲಿದೆ. ಜೊತೆಗೆ ಗೇಮಿಂಗ್ ಅನುಭವಗಳನ್ನು ಹೆಚ್ಚಿಸಲು ಮತ್ತು ಫ್ರೇಮ್ ದರಗಳನ್ನು ಆಪ್ಟಿಮೈಜ್ ಮಾಡಲು, ಮೀಸಲಾದ Q1 ಚಿಪ್‌ಸೆಟ್ ಅನ್ನು ಡಿವೈಸ್‌ನ ಆರ್ಕಿಟೆಕ್ಚರ್‌ ಗೆ ಸಂಯೋಜಿಸಲಾಗಿದೆ. ಹಾಗೆಯೇ 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ.

Join Nadunudi News WhatsApp Group

iQOO 12 Smart Phone
Image Credit: Beebom

ಐಕ್ಯೂ 12 ಸ್ಮಾರ್ಟ್‌ಫೋನ್‌ ಬ್ಯಾಟರಿ ಪವರ್

ಐಕ್ಯೂ 12 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವರೆಗಿನ ವೇಗದ ಚಾರ್ಜಿಂಗ್ ಸಾಮರ್ಥ್ಯಗಳನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ. ಇದಲ್ಲದೆ ಇನ್-ಸ್ಕ್ರೀನ್ ಫಿಂಗರ್‌ಪ್ರಿಂಟ್ ಸೆನ್ಸಾರ್‌, ತಲ್ಲೀನಗೊಳಿಸುವ ಆಡಿಯೊ ಅನುಭವಕ್ಕಾಗಿ ಸ್ಟೀರಿಯೋ ಸ್ಪೀಕರ್‌ಗಳು ಮತ್ತು ಹೈ-ರೆಸ್ ಆಡಿಯೊಗೆ ಬೆಂಬಲವನ್ನು ನೀಡಲಿದೆ.

ಐಕ್ಯೂ 12 ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌ ಹೀಗಿದೆ

ಐಕ್ಯೂ 12 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪೆರಿಸ್ಕೋಪ್ ಟೆಲಿಫೋಟೋ ಲೆನ್ಸ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಅಷ್ಟೇ ಅಲ್ಲದೇ ಈ ಸ್ಮಾರ್ಟ್ ಫೋನ್ ಕ್ಯಾಮೆರಾ ಫೀಚರ್ಸ್ ನಿಂದಲೇ ಹೆಸರುವಾಸಿ ಆಗಿದೆ.

iQOO 12 Smart Phone Feature
Image Credit: Businessinsider

ಐಕ್ಯೂ 12 ಸ್ಮಾರ್ಟ್‌ಫೋನ್‌ ಬೆಲೆ ಹಾಗು ಆಫರ್

ಐಕ್ಯೂ 12 ಸ್ಮಾರ್ಟ್‌ಫೋನ್‌ ಭಾರತದಲ್ಲಿ 12GB+256GB ವೇರಿಯಂಟ್ 57,999 ರೂ.ಬೆಲೆಯನ್ನು ಹೊಂದಿದೆ. ಇದರ 16GB+256GB ವೇರಿಯಂಟ್ ಬೆಲೆ 52,999 ರೂ ಆಗಿದೆ. ಈ ಫೋನ್ ಡಿಸೆಂಬರ್ 13 ರಿಂದ ತನ್ನ ಮೊದಲ ಮಾರಾಟವನ್ನು ಪ್ರಾರಂಭಿಸುತ್ತದೆ. ಐಕ್ಯೂ 12 ಸ್ಮಾರ್ಟ್‌ಫೋನ್‌ ಅನ್ನು HDFC ಅಥವಾ ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್‌ ಮೂಲಕ ಖರೀದಿಸಿದರೆ 3,000 ರೂ ಹೆಚ್ಚುವರಿ ರಿಯಾಯಿತಿಯನ್ನು ಪಡೆಯಬಹುದು.ಈ ಫೋನ್‌ ಬಿಳಿ ಮತ್ತು ಕಪ್ಪು ಬಣ್ಣದ ರೂಪಾಂತರದಲ್ಲಿ ಲಭ್ಯವಿದೆ.

Join Nadunudi News WhatsApp Group