ಈಗಿನ ಕಾಲದಲ್ಲಿ ಜನರು ಎಲ್ಲದಕ್ಕೂ ಕಷ್ಟಪಡುತ್ತಿದ್ದಾರೆ ಎಂದು ಹೇಳಬಹುದು. ಕೇಂದ್ರ ಮತ್ತ್ತು ರಾಜ್ಯ ಸರ್ಕಾರ ಜನರ ಅನುಕೂಲದ ದೃಷ್ಟಿಯಿಂದ ಅದೆಷ್ಟೋ ಯೋಜನೆಯನ್ನ ಜಾರಿಗೆ ತಂದರು ಕೂಡ ಅದರ ಲಾಭ ಜನರಿಗೆ ಸಿಗುತ್ತಿಲ್ಲ ಅನ್ನುವುದು ಬಹಳ ಬೇಸರದ ಸಂಗತಿ ಆಗಿದೆ ಎಂದು ಹೇಳಬಹುದು. ಇನ್ನು ಬೇಸಿಗೆ ಬಂದರೆ ಕೆಲವು ಹಳ್ಳಿಯ ಜನರು ಗ್ರಾಮೀಣ ಪ್ರದೇಶದ ಜನರು ನೀರಿಗಾಗಿ ಪರದಾಡುತ್ತಾರೆ ಎಂದು ಹೇಳಬಹುದು. ಇನ್ನು ಕೆಲವು ಗ್ರಾಮೀಣ ಪ್ರದೇಶದಲ್ಲಿ ಕುಡಿಯಲು ನೀರು ಕೂಡ ಸರಿಯಾಗಿ ಸಿಗುವುದಿಲ್ಲ ಅನ್ನುವುದು ಬಹಳ ಬೇಸರದ ಸಂಗತಿ ಆಗಿದೆ ಎಂದು ಹೇಳಬಹುದು. ಇನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಜನರಿಗೆ ನೀರನ್ನ ಒದಗಿಸಲು ಎಷ್ಟೇ ಪ್ರಯತ್ನ ಮಾಡಿದರು ಕೂಡ ಅವರಿಂದ ಜನರಿಗೆ ಸರಿಯಾದ ರೀತಿಯಲ್ಲಿ ನೀರನ್ನ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಬಹುದು.
ಇನ್ನು ಈಗ ಗ್ರಾಮೀಣ ಪ್ರದೇಶದಲ್ಲಿ ನೀರಿನ ಸಮಸ್ಯೆ ಅನುಭವಿಸುತ್ತಿರುವ ಜನರಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆಯನ್ನ ನೀಡಿದ್ದು ಇದು ಜನರ ಖುಷಿಗೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ರಾಜ್ಯದಲ್ಲಿ ಹೊಸ ಯೋಜನೆ ಜಾರಿಗೆ ಬಂದಿದ್ದು ಇದು ಲಕ್ಷಾಂತರ ಜನರ ಅನುಕೂಲಕ್ಕೆ ಕಾರಣವಾಗಲಿದೆ ಎಂದು ಹೇಳಬಹುದು. ಹಾಗಾದರೆ ಏನದು ಹೊಸ ಯೋಜನೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಯೋಜನೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಸ್ನೇಹಿತರೆ ನಿಮಗೆಲ್ಲ ಜಲಜೀವನ್ ಮಿಷನ್ ಯೋಜನೆಯ ಬಗ್ಗೆ ತಿಳಿದಿರಬಹುದು ಎಂದು ಹೇಳಬಹುದು, ಈ ಯೋಜನೆಯ ಲಾಭವನ್ನ ಈಗಾಗಲೇ ಬಹಳಷ್ಟು ಜನರು ಪಡೆದುಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈಗ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಈ ಯೋಜನೆಯ ಅಡಿಯಲ್ಲಿ ಕುಡಿಯುವ ನೀರನ್ನ ಒದಗಿಸುವ ಕ್ರಮ ವಹಿಸಬೇಕು ಎಂದು ರಾಜ್ಯದ ಮುಖ್ಯ ಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರು ಅಧಿಕಾರಿಗಳಿಗೆ ಸೂಚನೆಯನ್ನ ನೀಡಿದ್ದಾರೆ. ರಾಜ್ಯದಲ್ಲಿ 92 ಲಕ್ಷ ಗ್ರಾಮೀಣ ಕುಟುಂಬಗಳು ಇದ್ದು ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕ್ರಿಯಾತ್ಮಕ ನಳಗಳ ಸಂಪರ್ಕ ಒದಗಿಸಲಾಗಿದೆ ಮತ್ತು ಪ್ರಸ್ತುತ ವರ್ಷದಲ್ಲಿ 25 ಲಕ್ಷ ಮನೆಗಳಿಗೆ ಸಂಪರ್ಕ ಒದಗಿಸುವ ಗುರಿಯನ್ನ ಹೊಂದಲಾಗಿದೆ ಎಂದು ಅವರು ಹೇಳಿದರು.
ಈ ಯೋಜನೆ ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷೆಯ ಯೋಜನೆ ಆಗಿದ್ದು ನಿಗದಿತ ಕಾಲಮಿತಿಯ ಒಳಗೆ ಇದನ್ನ ಅನುಷ್ಠಾನ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಇನ್ನು ಇದರ ಕುರಿತು ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸುವುದಾಗಿ ಮುಖ್ಯ ಮಂತ್ರಿಗಳು ತಿಳಿಸಿದರು. ಏನೇ ಆಗಲಿ ಈ ಯೋಜನೆಯ ಅಡಿಯಲ್ಲಿ ಸುಮಾರು 25 ಲಕ್ಷ ಕುಟುಂಬಗಳಿಗೆ ನೀರಿನ ಸಂಪರ್ಕ ಸಿಗಲಿದೆ ಎಂದು ಹೇಳಬಹುದು. ಸ್ನೇಹಿತರೆ ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ.