ನಮ್ಮ ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿರುವ ಬಸವರಾಜ್ ಬೊಮ್ಮಾಯಿ ಅವರು ದಿನದಿಂದ ದಿನಕ್ಕೆ ಹೊಸಹೊಸ ಯೋಜನೆಯನ್ನ ಜಾರಿಗೆ ತರುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ರಾಜ್ಯದ ಜನರ ಹಿತದೃಷ್ಟಿಯಿಂದ ರಾಜ್ಯದಲ್ಲಿ ಹೊಸಹೊಸ ಯೋಜನೆಯನ್ನ ಮುಖ್ಯ ಮಂತ್ರಿಗಳು ಜಾರಿಗೆ ತರುತ್ತಿದ್ದು ಇದು ಜನರ ಅನುಕೂಲಕ್ಕೆ ಕಾರಣವಾಗುತ್ತಿದೆ ಎಂದು ಹೇಳಬಹುದು. ಇನ್ನು ವಿಷಯಕ್ಕೆ ಬರುವುದಾದರೆ, ಇಂದು ಕನ್ನಡ ರಾಜ್ಯೋತ್ಸವ ಸಲುವಾಗಿ ಜನರು ಮುಖ್ಯ ಮತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಜನರಿಗೆ ಗುಡ್ ನ್ಯೂಸ್ ನೀಡಿದ್ದು ಹೊಸ ಯೋಜನೆಗೆ ಚಾಲನೆಯನ್ನ ನೀಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.
ಇನ್ನುಮುಂದೆ ಬಹುತೇಕ ಎಲ್ಲಾ ಸೇವೆಗಳು ಜನರ ಮನೆಯ ಬಾಗಿಲಗೆ ಬರಲಿದ್ದು ಜನರು ಇನ್ನುಮುಂದೆ ಯಾವುದೇ ಕಚೇರಿಗೆ ಹೋಗುವ ಅವಶ್ಯಕತೆ ಇರುವುದಿಲ್ಲ ಎಂದು ಹೇಳಬಹುದು. ಹಾಗಾದರೆ ಏನದು ಹೊಸ ಯೋಜನೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ನಾಗರಿಕರ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದ್ದಾರೆ.
ಜನರ ಸೇವಕ ಯೋಜನೆಯನ್ನ ನೂತನ ಮುಖ್ಯ ಮಂತ್ರಿಗಳು ಜಾರಿಗೆ ತಂದಿದ್ದು ಈ ಯೋಜನೆಯ ಅಡಿಯಲ್ಲಿ ಪ್ರತಿಯೊಂದು ಸೇವೆಗಳು ಜನರ ಮನೆ ಬಾಗಿಲಿಗೆ ಬರಲಿದೆ ಎಂದು ಹೇಳಿದ್ದಾರೆ ರಾಜ್ಯದ ಮುಖ್ಯ ಮಂತ್ರಿಗಳು. ಸಹಾಯವಾಣಿ 1902 ಮುಖಾಂತರ ಜನರ ಬಹುತೇಕ ಎಲ್ಲಾ ಸೇವೆಗಳನ್ನ ತಮ್ಮ ಬಾಗಿಲಿಗೆ ತರಿಸಿಕೊಳ್ಳಬಹುದಾಗಿದೆ. ಇನ್ನಿ ಈ ಜನಸೇವಕ ಯೋಜನೆಯ ಅಡಿಯಲ್ಲಿ ಜನರು ಸರ್ಕಾರಿ ಕಚೇರಿಗೆ ಅನಗತ್ಯವಾಗಿ ತಿರುಗಾಡುವ ಅವಶ್ಯಕತೆ ಇಲ್ಲ ಮತ್ತು ಸೇವೆಗಳನ್ನು ಪಡೆಯಲು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ. ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿಗೆ ಸರ್ಕಾರದಿಂದ ಸೇವೆ ಪಡೆಯಲು ಈ ಯೋಜನೆ ಬಹಳ ಅನುಕೂಲವಾಗಲಿದೆ ಎಂದು ಹೇಳಬಹುದು.
ಆಧಾರ್ ಕಾರ್ಡ್, ಆರೋಗ್ಯ ಕಾರ್ಡ್, ಕಾರ್ಮಿಕ ಕಾರ್ಡ್, ಎಪಿಎಲ್ ಪಡಿತರ ಚೀಟಿ, ಹಿರಿಯ ನಾಗರೀಕ ಕಾರ್ಡಮ್ ಬಿಬಿಎಂಪಿ ಖಾತಾ ಸೇವೆಗೆಳು, ಪೊಲೀಸ್ ಪರಿಶೀಲನಾ ಪ್ರಮಾಣಪತ್ರ, ವೃದ್ದಾಪ್ಯ ವೇತನ, ವಿಧವಾ ವೇತನ, ಆದಾಯ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ ಹೀಗೆ 50 ಕ್ಕೂ ಅಧಿಕ ಸೇವೆಗಳು ಇನ್ನುಮುಂದೆ ಜನರ ಮನೆಯ ಬಾಗಿಲಿಗೆ ಬರಲಿದ್ದು ಜನರು ಸರ್ಕಾರೀ ಕಚೇರಿಗಳಿಗೆ ಅಲೆದಾಡುವ ಅವಶ್ಯಕತೆ ಇರುವುದಿಲ್ಲ. ಸದ್ಯ ಆರಂಭಿಕವಾಗಿ ಈ ಯೋಜನೆ ಬೆಂಗಳೂರಿನಲ್ಲಿ ಜಾರಿಗೆ ಬಂದಿದ್ದು ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ಜಾರಿಗೆ ಬರಲಿದೆ ಮುಖ್ಯ ಮಂತ್ರಿಗಳು ಹೇಳಿದ್ದಾರೆ. ಈ ಯೋಜನೆಗೆ ಬಡವರಿಗೆ ಬಹಳ ಸಹಕಾರಿ ಆಗಲಿದೆ ಎಂದು ಹೇಳಿದರೆ ತಪ್ಪಾಗಲ್ಲ. ಸ್ನೇಹಿತರೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಈ ಹೊಸ ಯೋಜನೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.