Joe Root: ಕ್ರಿಕೆಟ್ ದೇವರ ದಾಖಲೆ ಮುರಿದ ಜಾಯ್ ರೂಟ್, ಇದು ನಿಜವಾದ ಸಾಧನೆ ಅಂದ ಕ್ರಿಕೆಟ್ ಫ್ಯಾನ್ಸ್

ಸಚಿನ್ ದಾಖಲೆ ಮುರಿದ ಇಂಗ್ಲೆಂಡ್ ಆಟಗಾರ ಜೋ ರೂಟ್

Joe Root Break Sachin Tendulkar Record: ಹೈದರಾಬಾದ್ ನ ರಾಜೀವ್ ಗಾಂಧಿ (Rajiva Gandhi Stadium) ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಗುರುವಾರ, ಜನವರಿ 25 ರಿಂದ ಆರಂಭವಾಗಿರುವ ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್‌ನ ಅನುಭವಿ ಬ್ಯಾಟರ್ ಹೊಸ ಸಾಧನೆ ಮಾಡುವುದರ ಮೂಲಕ ಸಚಿನ್ ಅವರನ್ನು ಹಿಂದಿಕ್ಕಿದ್ದಾರೆ.

ಸ್ಟಾರ್ ಬ್ಯಾಟರ್ ಜಾಯ್ ರೂಟ್ (Joe Root) ಅವರು ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿಯಲು ಇಂಗ್ಲೆಂಡ್‌ನ ಮಾಜಿ ನಾಯಕ ಜಾಯ್ ರೂಟ್ಅ ವರಿಗೆ ಕೇವಲ 10 ರನ್‌ ಗಳ ಅಗತ್ಯವಿತ್ತು. ಇಂಗ್ಲೆಂಡ್‌ನ ಮೊದಲ ಇನ್ನಿಂಗ್ಸ್‌ನ 21 ನೇ ಓವರ್‌ನಲ್ಲಿ ಅಕ್ಷರ್ ಪಟೇಲ್ ಅವರ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಜಾಯ್ ರೂಟ್ ನೂತನ ದಾಖಲೆ ನಿರ್ಮಿಸಿದರು.

Joe Root New Record
Image Credit: Independent

ಉತ್ತಮ ಪ್ರದರ್ಶನ ಗೈದ ಆಟಗಾರರು

ಭಾರತ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡರು. ಆರಂಭದಲ್ಲಿ ಅವರ ನಿರ್ಧಾರ ಉತ್ತಮವಾಗಿದ್ದರೂ ಆಟ ಮುಂದುವರೆದಂತೆ ಭಾರತೀಯ ಸ್ಪಿನ್ನರ್‌ಗಳು ಅವರ ನಿರ್ಧಾರವನ್ನು ತಲೆಕೆಳಗಾಗುವಂತೆ ಮಾಡಿದರು. ಇಂಗ್ಲೆಂಡ್ ಮೊದಲ ದಿನ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 64.3 ಓವರ್‌ಗಳಲ್ಲಿ 246 ರನ್‌ಗಳಿಗೆ ಸರ್ವಪತನ ಕಂಡಿತು.

ನಾಯಕ ಬೆನ್ ಸ್ಟೋಕ್ಸ್ 70 ರನ್ ಗಳಿಸಿ ತಮ್ಮ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ನಂತರ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡ ಮೊದಲ ದಿನದಾಟದಂತ್ಯಕ್ಕೆ 23 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 119 ರನ್ ಕಲೆಹಾಕಿದ್ದು, ಮುನ್ನಡೆ ಸಾಧಿಸಲು ಇನ್ನು 127 ರನ್ ಗಳಿಸಬೇಕಿದೆ.ಈ ಸರಣಿಯ ಆರಂಭಕ್ಕೂ ಮುನ್ನ ಜಾಯ್ ರೂಟ್ ಭಾರತ ತಂಡದ ವಿರುದ್ಧ 25 ಟೆಸ್ಟ್ ಪಂದ್ಯಗಳಲ್ಲಿ 63.15ರ ಪ್ರಭಾವಶಾಲಿ ಸರಾಸರಿಯಲ್ಲಿ 2,526 ರನ್ ಗಳಿಸಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು.

Join Nadunudi News WhatsApp Group

Joe Root Break Sachin Tendulkar Record
Image Credit: Cricketaddictor

4000 ರನ್‌ಗಳ ಗಡಿ ದಾಟಿದ ಮೊದಲ ಬ್ಯಾಟರ್ ಜಾಯ್ ರೂಟ್

ಭಾರತದ ಮಾಜಿ ಕ್ರಿಕೆಟಿಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಈ ಹಿಂದೆ ಇಂಗ್ಲೆಂಡ್ ವಿರುದ್ಧ 32 ಪಂದ್ಯಗಳಲ್ಲಿ 51.73ರ ಸರಾಸರಿಯಲ್ಲಿ 2,535 ರನ್ ಗಳಿಸಿ ದಾಖಲೆ ಹೊಂದಿದ್ದರು. ಸಚಿನ್ ತೆಂಡೂಲ್ಕರ್ ಅವರ ಗಮನಾರ್ಹ ದಾಖಲೆಯಲ್ಲಿ ಏಳು ಶತಕಗಳು ಮತ್ತು 13 ಅರ್ಧ ಶತಕಗಳನ್ನು ಒಳಗೊಂಡಿದೆ.

ಹಾಲಿ ಕ್ರಿಕೆಟಿಗ ಜಾಯ್ ರೂಟ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಇತಿಹಾಸದಲ್ಲಿ 4000 ರನ್‌ಗಳ ಗಡಿ ದಾಟಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇಂಗ್ಲೆಂಡ್ ತಂಡದ ಮಾಜಿ ನಾಯಕ ಇದೀಗ 48 ಟೆಸ್ಟ್‌ಗಳಿಂದ 4005 ರನ್ ಗಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಭಾರತ ತಂಡದ ವಿರುದ್ಧ ರಿಕಿ ಪಾಂಟಿಂಗ್ ಅವರ 29 ಟೆಸ್ಟ್‌ಗಳಲ್ಲಿ 2555 ರನ್‌ಗಳ ದಾಖಲೆಯನ್ನು ಹಿಂದಿಕ್ಕುವ ಗುರಿಯನ್ನು ಇಂಗ್ಲೆಂಡ್ ಸ್ಟಾರ್ ಬ್ಯಾಟರ್ ಹೊಂದಿದ್ದು, ಭಾರತೀಯ ತಂಡದ ವಿರುದ್ಧ ಟೆಸ್ಟ್‌ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸುವ ಗುರಿಯನ್ನು ಹೊಂದಿದ್ದಾರೆ.

Join Nadunudi News WhatsApp Group