Shilpa Iyer Wedding: ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶಿಲ್ಪಾ ಅಯ್ಯರ್, ಫೋಟೋಗಳು ವೈರಲ್
Actress Shilpa Iyer Marriage: ಚಿತ್ರರಂಗ ಹಾಗು ಕಿರುತೆರೆಯಲ್ಲಿ ನಟ ನಟಿಯರ ಮದುವೆ ಸಾಲು ಸಾಲಾಗಿ ನಡೆಯುತ್ತಿದೆ. ಇದೀಗ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಶಿಲ್ಪಾ ಅಯ್ಯರ್ (Shilpa Iyer) ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.
ನಟಿ ಶಿಲ್ಪಾ ಅಯ್ಯರ್ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಟಿಸಿ ಬಹಳಷ್ಟು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ಇದೀಗ ಈ ನಟಿ ತಮ್ಮ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.
ನಟಿ ಶಿಲ್ಪಾ ಅಯ್ಯರ್ ಮದುವೆಗೆ ಸಾಕಷ್ಟು ಗಣ್ಯರು, ಕಲಾವಿದರು ಪಾಲ್ಗೊಂಡಿದ್ದು ಈ ಜೋಡಿಗೆ ಶುಭ ಹಾರೈಸಿದ್ದಾರೆ. ಇದೀಗ ನಟಿ ಶಿಲ್ಪಾ ಅಯ್ಯರ್ ಅವರ ಮದುವೆಯ ಫೋಟೋಗಳು ವೈರಲ್ ಆಗಿದೆ.
ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಶಿಲ್ಪಾ ಅಯ್ಯರ್
ನಾಗಮಂಡಲ, ಕಸ್ತೂರಿ ನಿವಾಸ, ಜೊತೆ ಜೊತಯಲಿ, ಒಲವಿನ ನಿಲ್ದಾಣ ಸೇರಿದಂತೆ ಸಾಕಷ್ಟು ಸೀರಿಯಲ್ ನಲ್ಲಿ ಬಣ್ಣ ಹಚ್ಚಿರುವ ನಟಿ ಶಿಲ್ಪಾ ಅಯ್ಯರ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಪ್ರೇಮಿಗಳ ದಿನಾಚರಣೆಯಂದು ಎಂಗೇಜ್ ಆಗಿರುವ ಸುದ್ದಿಯನ್ನು ನಟಿ ಸೋಶಿಯಲ್ ಮೀಡಿಯಾ ಮುಖಾಂತರ ತಿಳಿಸಿದರು. ಭಾವಿ ಪತಿ ಜೊತೆಗಿನ ಫೋಟೋ ಶೇರ್ ಮಾಡಿ ಅಚ್ಚರಿ ಮೂಡಿಸಿದ್ದರು. ಈಗ ಸೈಲೆಂಟ್ ಆಗಿ ಮದುವೆಯಾಗಿದ್ದಾರೆ.
ನವ ಜೋಡಿಗೆ ಶುಭ ಹಾರೈಸಿದ ಅಭಿಮಾನಿಗಳು
ಸಚಿನ್ ವಿಶ್ವನಾಥ್ ಅವರು ಲಾಯರ್ ಆಗಿದ್ದು, ಮನೆಯವರೇ ನೋಡಿ ನಿಶ್ಚಯಿಸಿರುವ ಮದುವೆಯಾಗಿದೆ. ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಜೋಡಿ ಹಸೆಮಣೆ ಏರಿದ್ದಾರೆ. ಈ ಜೋಡಿಯ ಮದುವೆಗೆ ಸಾಕಷ್ಟು ಅಭಿಮಾನಿಗಳು ಶುಭ ಹಾರೈಸಿದರು.
ಶಿಲ್ಪಾ ಅಯ್ಯರ್ ಸಚಿನ್ ಮದುವೆಗೆ ಜೊತೆ ಜೊತೆಯಲಿ ಧಾರಾವಾಹಿ ಟೀಂ ಮತ್ತು ಹಲವು ನಟ ನಟಿಯರು ಭಾಗಿಯಾಗಿದ್ದರು. ನವಜೋಡಿಗೆ ಕಲಾವಿದರು ಅಭಿಮಾನಿಗಳು ಶುಭಹಾರೈಸಿದ್ದಾರೆ.