Karnataka Strike: ಜೂಲೈ 27 ಕರ್ನಾಟಕದಲ್ಲಿ ಈ ಎಲ್ಲಾ ಸೇವೆಗಳು ಬಂದ್, ಫ್ರೀ ಕೊಟ್ಟ ಸರ್ಕಾರ ಸಂಕಷ್ಟದಲ್ಲಿ.
ಸರ್ಕಾರದ ವಿರುದ್ಧ ಪ್ರತಿಭಟನೆ ನೆಡೆಸಲು ಮುಂದಾದ ಖಾಸಗಿ ಸಂಸ್ಥೆಗಳು.
July 27 Karnataka Bandh: ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಉಚಿತ ಪ್ರಯಾಣವನ್ನು (Free Travel) ಜಾರಿಗೊಳಿಸಿದೆ. ಜೂನ್ 11 ರಿಂದ ರಾಜ್ಯದ ಮಹಿಳೆಯರು ಶಕ್ತಿ ಯೋಜನೆಯ (Shakti Scheme) ಲಾಭ ಪಡೆಯುತ್ತಿದ್ದಾರೆ. ಪ್ರತಿನಿತ್ಯ ಲಕ್ಷಾಂತರ ಮಹಿಳೆಯರು ಉಚಿತ ಪ್ರಯಾಣ ನಡೆಸುತ್ತಿದ್ದಾರೆ.
ಇನ್ನು ಉಚಿತ ಪ್ರಯಾಣದಿಂದಾಗಿ ಆಟೋ, ಕ್ಯಾಬ್ ಚಾಲಕರಿಗೆ ಬಾರಿ ನಷ್ಟ ಎದುರಾಗುತ್ತಿದೆ. ಇದೀಗ ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ವಿರುದ್ಧ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿದೆ.
ಉಚಿತ ಬಸ್ ಪ್ರಯಾಣದಿಂದ ಸಂಕಷ್ಟದಲ್ಲಿ ಆಟೋ ಚಾಲಕರು
ಉಚಿತ ಬಸ್ ಪ್ರಯಾಣದಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಬಾರಿ ಹೊರೆ ಬೀಳುತ್ತಿದೆ. ಇನ್ನು ಮಹಿಳೆಯರು ಉಚಿತ ಪ್ರಯಾಣ ಇರುವ ಕಾರಣ ಎಲ್ಲೆಡೆ ಪ್ರಯಾಣಿಸುತ್ತಿದ್ದಾರೆ. ಇನ್ನು ಉಚಿತ ಪ್ರಯಾಣ ಜಾರಿಯಾಗುವ ಮೊದಲು ಹೆಚ್ಚಾಗಿ ಆಟೋಗಳಲ್ಲಿ ಸಂಚರಿಸುತ್ತಿದ್ದರು.
ಇದೀಗ ಉಚಿತ ಪ್ರಯಾಣ ಆಗಿರುವ ಕಾರಣ ಆಟೋ ಚಾಲಕರು ನಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರದ ಶಕ್ತಿ ಯೋಜನೆ ಆಟೋ, ಕ್ಯಾಬ್ ಚಾಲಕರಿಗೆ ಸಂಕಷ್ಟವನ್ನು ತಂದಿದೆ. ಚಾಲಕರು ಶಕ್ತಿ ಯೋಜನೆಯ ಕುರಿತಾಗಿ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ.
ಜುಲೈ 27 ರಂದು ರಾಜ್ಯದಾದ್ಯಂತ ಬಂದ್ ಗೆ ಕರೆ
ಖಾಸಗಿ ಬಸ್ ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಲಾಗಿದೆ. ಉಚಿತ ಬಸ್ ಪ್ರಯಾಣದಿಂದಾಗಿ ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಚಾಲಕರಿಗೆ ಸಂಕಷ್ಟ ಎದುರಾಗುತ್ತಿದೆ. ನಷ್ಟದಲ್ಲಿರುವವರಿಗೆ ಪರಿಹಾರ ನೀಡಬೇಕು ಎಂದು ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ.
ಸರ್ಕಾರದ ವಿರುದ್ದ ರೊಚ್ಚಿಗೆದ್ದ ಖಾಸಗಿ ಸಂಸ್ಥೆಗಳು
ನಷ್ಟದಲ್ಲಿರುವ ಚಾಲಕರಿಗೆ ಸರ್ಕಾರ ಪ್ರತಿ ತಿಂಗಳು 10 ಸಾವಿರ ರೂ. ಪರಿಹಾರ ನೀಡಬೇಕು ಎಂದು ಬೆಂಗಳೂರು ಆಟೋ ರಿಕ್ಷಾ ಚಾಲಕರ ಸಂಘ ಸರ್ಕಾರಕ್ಕೆ ಒತ್ತಾಯಿಸಿದೆ. ಉಚಿತ ಪ್ರಯಾಣದಿಂದಾಗಿ ಆಟೋ ಚಾಲಕರು ನಷ್ಟ ಅನುಭವಿಸುತ್ತಿದ್ದಾರೆ.
ಸರ್ಕಾರ ಭರವಸೆ ನೀಡಿರುವ ಹಾಗೆ ರ್ಯಾಪಿಡ್ ಬೈಕ್ ಟ್ಯಾಕ್ಸಿ ನಿಷೇಧಿಸಬೇಕು, ಅಸಂಘಟಿತ ವಾಣಿಜ್ಯ ಚಾಲಕರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು. ಹೀಗೆ ಹಲವು ಬೇಡಿಕೆಯನ್ನ ಸರ್ಕಾರದ ಮುಂದೆ ಇಟ್ಟಿದ್ದು ಜೂಲೈ 27 ಕ್ಕೆ ಬಂಧ್ ಕರೆ ನೀಡಲಾಗಿದೆ.