PUC Result: ದ್ವಿತೀಯ PUC ವಿದ್ಯಾರ್ಥಿಗಳ ಗಮನಕ್ಕೆ, PUC ಫಲಿತಾಂಶ ದಿನಾಂಕ ಪ್ರಕಟ.

ಏಪ್ರಿಲ್ ಅಂತ್ಯಕ್ಕೆ PUC ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ಆಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

2nd PUC Examination Result: ಈಗಾಗಲೇ 2022 -23 ನೇ ಸಾಲಿನ ಪಿಯುಸಿ ಪರೀಕ್ಷೆ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶ ಪ್ರಕಟಣೆಯಾಗಿ ಕಾಯುತ್ತಿದ್ದಾರೆ. ಇದೆ ಏಪ್ರಿಲ್ 5 ರಂದು ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಶುರುವಾಗಿದೆ. ಏಪ್ರಿಲ್ ಅಂತ್ಯದ ವೇಳೆ ಪರೀಕ್ಷೆಯ ಫಲಿತಾಂಶ ಪ್ರಕವಾಗಲಿದೆ.

2nd PUC Examination Result
Image Source: Oneindia

ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಹೊಸ ಸುದ್ದಿ
ರಾಜ್ಯಾದ್ಯಂತ ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದೆ. ಏಪ್ರಿಲ್ 5 ರಿಂದ 65 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ಶುರುವಾಗಿದೆ. ಮೌಲ್ಯಮಾಪನ ಕಾರ್ಯಕ್ಕೆ 25 ಸಾವಿರ ಉಪನ್ಯಾಸಕರನ್ನು ನಿಯೋಜನೆ ಮಾಡಲಾಗಿದೆ.

ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು 37 ವಿಷಯಗಳಿಗೆ ಪರೀಕ್ಷೆ ಬರೆದಿದ್ದು, 45 ಲಕ್ಷ ಉತ್ತರ ಪತ್ರಿಕೆಗಳನ್ನು ಮೊಲ್ಯಮಾಪನ ಮಾಡಲಾಗಿದೆ.

2nd PUC Examination Result
Image Source: Zee News

ಏಪ್ರಿಲ್ ಅಂತ್ಯಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ದ್ವಿತೀಯ ಪಿಯುಸಿ ಫಲಿತಾಂಶವನ್ನು ಏಪ್ರಿಲ್ ತಿಂಗಳ ಮೂರನೇ ವಾರದಲ್ಲಿ ಪ್ರಕಟಿಸಿರುವ ಉದ್ದೇಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೊಂದಿದೆ.

ಮೇ 5 ರಿಂದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2023 ಆರಂಭವಾಗಲಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮುಂದಿನ ಐದಾರು ದಿನಗಳಲ್ಲಿ ಮೌಲ್ಯಮಾಪನ ಕಾರ್ಯ ಮುಗಿಸಿ, ಏಪ್ರಿಲ್ ಅಂತ್ಯಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ನಡೆಸಿದೆ. ವಿದ್ಯಾರ್ಥಿಗಳು ಫಲಿತಾಂಶ ಪ್ರಕಟಣೆಗಾಗಿ ಕಾಯುತ್ತಿದ್ದಾರೆ.

Join Nadunudi News WhatsApp Group

2nd PUC Examination Result
Image Source: Zee News

Join Nadunudi News WhatsApp Group