7th Pay Update : ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರೀ ನೌಕರರಿಗೆ ಬೇಸರದ ಸುದ್ದಿ, ಸರ್ಕಾರದ ನಿರ್ಧಾರಕ್ಕೆ ತೀವ್ರ ಆಕ್ರೋಶ.
ತುಟ್ಟಿಭತ್ಯೆ ಹೆಚ್ಚಳದ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ.
7th Pay Commission Karnataka: ಕೇಂದ್ರ ಸರ್ಕಾರ ಸರ್ಕಾರೀ ನೌಕರರ ಬಹುದಿನದ ಬೇಡಿಕೆಯನ್ನು ಇದೀಗ ನೆರೆವೇರಿಸುವ ಮೂಲಕ ಸರ್ಕಾರೀ ನೌಕರರಿಗೆ ಸಿಹಿಸುದ್ದಿ ನೀಡಿತ್ತು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ತುಟ್ಟಿಭತ್ಯೆ ಹೆಚ್ಚಳವನ್ನು ರಾಜ್ಯ ನೌಕರರಿಗೂ ಸಿದ್ದರಾಮಯ್ಯ (Siddaramaiah) ಸರ್ಕಾರ ಘೋಷಿಸಿತ್ತು.
ರಾಜ್ಯದ ಸರ್ಕಾರೀ ನೌಕರರ ತುಟ್ಟಿಭತ್ಯೆ ಹೆಚ್ಚಳದ ಖುಷಿಯಲ್ಲಿದ್ದರು ದೀಪಾವಳಿಯ ಹಬ್ಬದ ಸಮಯದಲ್ಲಿ 7 ನೇ ವೇತನದ ಅಡಿಯಲ್ಲಿ ತುಟ್ಟಿಭತ್ಯೆ ಹೆಚ್ಚಳ ಆಗುತ್ತದೆ ಎನ್ನುವ ನಿರೀಕ್ಷೆಯಲ್ಲಿ ನೌಕರರು ಕಾಯುತ್ತಿದ್ದರು.
ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರೀ ನೌಕರರಿಗೆ ಬೇಸರದ ಸುದ್ದಿ
ಇನ್ನು 7 ನೇ ವೇತನದಡಿ ಶೇ. 42 ಕ್ಕೆ ತಲುಪಿರುವ ತುಟ್ಟಿಭತ್ಯೆ November ನಲ್ಲಿ 46% ತಲುಪಲಿದೆ ಎನ್ನುವ ಬಗ್ಗೆ ವರದಿಯಾಗಿತ್ತು. ನೌಕರರ ಮೂಲ ವೇತನದ ಆಧಾರದ ಮೇಲೆ ತುಟ್ಟಿಭತ್ಯೆಯ ಲೆಕ್ಕಾಚಾರವನ್ನು ಲೆಕ್ಕ ಹಾಕಲಾಗುತ್ತದೆ. October 18 ರಂದು ತುಟ್ಟಿಭಹತ್ಯೆ 4 % ಹೆಚ್ಚಿಸಲು ಕೇಂದ್ರ ಸರ್ಕಾರ ಅನುಮೋದನೆ ನಡೆಸಿದೆ. November ತಿಂಗಳಿನಿಂದ ನೌಕರರು ಹೆಚ್ಚಿನ ವೇತನವನ್ನು ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ರಾಜ್ಯ ಸರ್ಕಾರ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರೀ ನೌಕರರಿಗೆ ಬೇಸರದ ಸುದ್ದಿ ನೀಡಿದೆ.
ತುಟ್ಟಿಭತ್ಯೆ ಹೆಚ್ಚಳದ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಲಾಗಿದ್ದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗದ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ನೌಕರರ ವೇತನ ಆಯೋಗದ ಅವಧಿಯನ್ನು ಮಾರ್ಚ್ 15, 2024 ರ ವರೆಗೆ ವಿಸ್ತರಿಸಲಾಗಿದೆ. ಹಿಂದಿನ ಬಿಜೆಪಿ ಸರ್ಕಾರವು ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರ ಅಧ್ಯಕ್ಷತೆಯಲ್ಲಿ 2022 ರ ನವೆಂಬರ್ 19 ರಂದು ವೇತನ ಆಯೋಗವನ್ನು ರಚಿಸಿತ್ತು. ಇನ್ನು ವರದಿ ಸಲ್ಲಿಸಲು ಆರು ತಿಂಗಳ ಗಡುವು ನೀಡಲಾಗಿತ್ತು.
ಬಿಜೆಪಿ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಮತ್ತೆ ಆರು ತಿಂಗಳು ಅವಧಿಯನ್ನು ವಿಸ್ತರಿಸಿತ್ತು. ಇನ್ನು November 18 ರಂದು ಈ ವಿಸ್ತರಣೆಯ ಅವಧಿ ಮುಕ್ತಾಯಗೊಳ್ಳಲಿದೆ. ಇದೀಗ ವಿಸ್ತರಣೆಯ ಅವಧಿ ಮುಕ್ತಾಯದ ಹಂತ ತಲುಪುತ್ತಿದ್ದರೆ ಮತ್ತೆ ಸರ್ಕಾರಕ್ಕೆ ವರದಿ ಸಲ್ಲಿಸಲು ಅನುಕೂಲವಾಗುವಂತೆ ಆರು ತಿಂಗಳು ವಿಸ್ತರಿಸಲಾಗಿದೆ. ಸರ್ಕಾರದ ಈ ನಡೆಗೆ ಸರ್ಕಾರೀ ನೌಕರರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.