KASS: ಕರ್ನಾಟಕದ ಎಲ್ಲಾ ಸರ್ಕಾರಿ ನೌಕರರಿಗೆ ಐತಿಹಾಸಿಕ ಕೊಡುಗೆ, ಕಾಂಗ್ರೆಸ್ ಸರ್ಕಾರದ ನಿರ್ಧಾರ
ಕರ್ನಾಟಕ ಸರ್ಕಾರ ಸರ್ಕಾರೀ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿ ಯೋಜನೆ ಘೋಷಣೆ ಮಾಡಿದೆ.
Karnataka Arogya Sanjiveeni Scheme: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramayya) ಅವರು ರಾಜ್ಯದಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಇತ್ತೀಚಿಗೆ ಸರ್ಕಾರೀ ನೌಕರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಹಿ ಸುದ್ದಿ ನೀಡುತ್ತಿದ್ದಾರೆ.
ಇನ್ನು ಸರ್ಕಾರೀ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಹಾಗೂ ಹಳೆಯ ಪಿಂಚಣಿ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೊಳಿಸುವುದಾಗಿ ಸಿದ್ದರಾಮಯ್ಯ ಅವರು ಘೋಷಣೆ ಹೊರಡಿಸಿದ್ದಾರೆ. ಇದೀಗ ಸರ್ಕಾರೀ ನೌಕರರಿಗೆ ಹೊಸ ಯೋಜನೆ ಜಾರಿಗೊಳಿಸುವ ಕುರಿತು ಘೋಷಣೆ ಹೊರಡಿಸಿದ್ದಾರೆ.
ಸರ್ಕಾರೀ ನೌಕರರಿಗಾಗಿ ಆರೋಗ್ಯ ಸಂಜೀವಿನಿ ಯೋಜನಾ
ರಾಜ್ಯ ಸರ್ಕಾರವು ಈಗಾಗಲೇ ಸರ್ಕಾರೀ ನೌಕರರಿಗಾಗಿ ವಿವಿಧ ಸೌಲಭ್ಯವನ್ನು ಜಾರಿಗೊಳಿಸಿದೆ. ಕರ್ನಾಟಕ ಸರ್ಕಾರ ಸರ್ಕಾರೀ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿ ಯೋಜನೆ (KASS) ಘೋಷಣೆ ಮಾಡಿದೆ. ಈ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ ನಲ್ಲಿ ಮಾಹಿತಿ ನೀಡಿದ್ದಾರೆ. ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿ ಅವರು ಸ್ಪಷ್ಟನೆ ನೀಡಿದ್ದಾರೆ.
ನಗದು ರಹಿತ ಆರೋಗ್ಯ ಸಂಜೀವಿನಿ ಯೋಜನಾ
ಕರ್ನಾಟಕ ರಾಜ್ಯ ಸರಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ರಾಜ್ಯ ಸರ್ಕಾರವು ರೂಪಿಸಿರುವ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕರ್ನಾಟಕ ಸರ್ಕಾರ ನೌಕರರ ನಿಯಮಗಳು 1963 ರ ಭಾಗವಾಗಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗುತ್ತದೆ. ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆಗಸ್ಟ್ 17 2021 ರ ಸರ್ಕಾರೀ ಆದೇಶದಂತೆ ಮಾರ್ಗಸೂಚಿಯನ್ನು ಹೊರಡಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.
ಆರೋಗ್ಯ ಸಂಜೀವಿನಿ ಯೋಜನಾ ಜಾರಿ ಯಾವಾಗ
ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಸೇವೆಯನ್ನು ಜಾರಿಗೆ ತರಲು ಖಾಸಗಿ ಆಸ್ಪತ್ರೆಗಳ ಜೊತೆ ನೂತನವಾಗಿ ಒಪ್ಪಂದ ಮಾಡಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾರ್ಯವು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಶಾಟ್ಸ್) ಪ್ರಗತಿಯಲ್ಲಿರುತ್ತದೆ.
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕಾರ್ಯಗತಗೊಳಿಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಲ್ಲಿ ಒಂದು ವಿಶೇಷ ಕೋಶವನ್ನು ಸ್ರಜಿಸಿದ್ದು, ಈ ಯೋಜನೆಯನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸುವ ಕಾರ್ಯ ಪ್ರತಗತಿಯಲ್ಲಿದೆ ಎಂದು ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ.