Siddaramaiah: ಕರ್ನಾಟಕದ ಮುಖ್ಯ ಮಂತ್ರಿಯಾದ ಸಿದ್ದರಾಮಯ್ಯ, ಕೆ.ಸಿ ವೇಣುಗೋಪಾಲ್ ಅಧಿಕೃತ ಘೋಷಣೆ.

ಕರ್ನಾಟಕದ ನೂತನ ಮುಖ್ಯ ಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದಾರೆ.

Siddaramaiah Chief Minister Of Karnataka: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಇದೀಗ ಕಾಂಗ್ರೆಸ್ (Congress) ಸರ್ಕಾರ ಅಧಿಕಾರವನ್ನು ಪಡೆದಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಮೇ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿ ಸರ್ಕಾರದ ಅಧಿಕಾರವನ್ನು ಕಿತ್ತುಕೊಂಡಿದೆ.

ಈ ಹಿಂದೆ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯ ಸ್ಥಾನದಲ್ಲಿದ್ದರು. ಇನ್ನು ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ಹೊಸ ಮುಖ್ಯಮಂತ್ರಿಯ ಆಯ್ಕೆಯಾಗಿದೆ.

Siddaramaiah Chief Minister Of Karnataka
Image Credit: indianexpress

ಕರ್ನಾಟಕದ ಮುಖ್ಯ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ
ಪ್ರಸ್ತುತ ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರು ಆಯ್ಕೆಯಾಗಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಜನತೆ ಮುಖ್ಯಮಂತ್ರಿಯ ಆಯ್ಕೆಯ ಕುತೂಹಲದಲ್ಲಿದ್ದರು. ಇದೀಗ ಇಂದು ಜನರ ಕುತೂಹಲಕ್ಕೆ ತೆರೆಬಿದ್ದಿದೆ. ಎರಡನೇ ಬಾರಿ ಮತ್ತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನವನ್ನು ಪಡೆದಿದ್ದಾರೆ. ಇನ್ನು ಲೋಕಸಭಾ ಚುನಾವಣೆವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಮುಂದುವರಿಯಲ್ಲಿದ್ದಾರೆ.

Siddaramaiah has been elected as the new Chief Minister of Karnataka.
Image Credit: freepressjournal

ನೂತನ ಮುಖ್ಯಮಂತ್ರಿಯ ಅಧಿಕೃತ ಘೋಷಣೆ ಹೊರಡಿಸಿದ ಕೆ.ಸಿ ವೇಣುಗೋಪಾಲ್
ಕಾಂಗ್ರೆಸ್ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಅವರು ಹಾಗೂ ಉಪ ಮುಖಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ (D.K Shivakumar) ಅವರು ಆಯ್ಕೆ ಆಗಿದ್ದಾರ. ಕಾಂಗ್ರೆಸ್ ಹೈಕಮಾಂಡ್ ಗುರುವಾರ (ಮೇ 19 ) ರಂದು ಅಧಿಕೃತ ಘೋಷಣೆ ಹೊರಡಿಸಲಿದೆ.

ಕೆ.ಸಿ ವೇಣುಗೋಪಾಲ್ ಅವರು ನೂತನ ಮುಖ್ಯಮಂತ್ರಿಯ ಅಧಿಕೃತ ಘೋಷಣೆ ಹೊರಡಿಸಿದ್ದಾರೆ. ಮೇ 20 ರಂದು ನೂತನ ಮುಖ್ಯಮಂತ್ರಿ ಹಾಗು ಉಪ ಮುಖ್ಯಮಂತ್ರಿ ಅವರು 12 :30 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Join Nadunudi News WhatsApp Group

Join Nadunudi News WhatsApp Group