CM Change: ಕರ್ನಾಟಕದ ಮುಖ್ಯಮಂತ್ರಿ ಚೇಂಜ್, ಶೀಘ್ರದಲ್ಲೇ ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ.

ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆ, ಹೊಸ ಮುಖ್ಯಮಂತ್ರಿ ಆಯ್ಕೆ

Karnataka CM Change: ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಸಮಯದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಯಾರು ಪಡೆಯಬೇಕು ಎನ್ನುವ ಬಗ್ಗೆ ನಿರ್ಧರಿಸಲು ಸಾಕಷ್ಟು ಚರ್ಚೆ ಆರಂಭವಾಗಿತ್ತು. ನಂತರ ರಾಜಕೀಯ ಮುಖಂಡರು ಚರ್ಚಿಸಿ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಅಧಿಕಾರವನ್ನು ಪಡೆದುಕೊಂಡಿದ್ದರು.

ಸಿದ್ದರಾಮಯ್ಯ ಅವರು ಮೇ 20 , 2023 ರಿಂದ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಒಂದು ವರ್ಷ ಕಳೆಯುತ್ತಿದ್ದಂತೆ CM ಸ್ಥಾನ ಬದಲಾವಣೆಯ ಬಗ್ಗೆ ಚರ್ಚೆ ಆರಂಭವಾಗಿದೆ. ಶೀಘ್ರದಲ್ಲೇ ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ ಬರಲಿದ್ದಾರೆ ಎನ್ನುವ ಬಗ್ಗೆ ಮಾತುಗಳು ಕೇಳಿಬರುತ್ತಿದೆ.

new cm in karnataka
Image Credit: Original Source

ಕರ್ನಾಟಕದ ಮುಖ್ಯಮಂತ್ರಿ ಚೇಂಜ್
ಆಡಳಿತಾರೂಢ ಕಾಂಗ್ರೆಸ್‌ ನಲ್ಲಿ ನಡೆಯುತ್ತಿರುವ ರಾಜಕೀಯ ಕಲಹದ ನಡುವೆಯೇ ನಾಯಕತ್ವ ಬದಲಾವಣೆಯ ಸಾಧ್ಯತೆಯನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಪ್ರಸ್ತಾಪಿಸಿದ್ದಾರೆ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಅವಕಾಶ ಮಾಡಿಕೊಡುವಂತೆ ಒಕ್ಕಲಿಗ ಶ್ರೀಗಳು ಸಾರ್ವಜನಿಕವಾಗಿ ಮನವಿ ಮಾಡಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ಇದು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ. ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದರಂತೆ ನಡೆದುಕೊಳ್ಳುತ್ತೇವೆ. ಸ್ವಾಮೀಜಿ ಹೇಳಿದ್ದಕ್ಕೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಹೈಕಮಾಂಡ್ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

new cm in karnataka
Image Credit: Original Source

ಶೀಘ್ರದಲ್ಲೇ ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ
ಲಿಂಗಾಯತ, ಎಸ್‌ಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತ ಸಮುದಾಯದ ಮುಖಂಡರಿಗೆ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ರಚಿಸುವಂತೆ ಹಲವು ಸಚಿವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಇದೇ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಕರ್ನಾಟಕದಲ್ಲಿ ಕಾಂಗ್ರೆಸ್ ಬಹುತೇಕ ನಿರ್ಣಾಮವಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ಕಳೆದ ವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ಕಳೆದ ವಾರ ವಿಶ್ವವೊಕ್ಕಲಿಗ ಮಹಾಸಮಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂದು ಆಗ್ರಹಿಸಿದ್ದರು. ಆ ಬಳಿಕ ಸಿಎಂ ಬದಲಾವಣೆ ಚರ್ಚೆ ಶುರುವಾಗಿದೆ. ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆ ಮೇಲಿದ್ದ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದಾರೆ.

Join Nadunudi News WhatsApp Group

chief minsiter of karnataka is change
Image Credit: Original Source

Join Nadunudi News WhatsApp Group