Janaspandana Program: ಇನ್ಮುಂದೆ ಸರ್ಕಾರವೇ ನಿಮ್ಮ ಮನೆ ಬಾಗಿಲಿಗೆ ಬರಲಿದೆ, ಜನ ಸಮಾಷೆ ಬಗೆಹರಿಸಲು ಹೋದೆ ಯೋಜನೆ

ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್, ನಿಮ್ಮ ಸಮಸ್ಯೆಗಳಿಗೆ ʻಮನೆ ಬಾಗಿಲಲ್ಲೇ ಸಿಗಲಿದೆ ಪರಿಹಾರʼ

Janaspandana Program In Karnataka: ರಾಜ್ಯ ಸರ್ಕಾರವು ಜನರ ಸಮಸ್ಯೆಗಳನ್ನು ಶೀಘ್ರದಲ್ಲಿ ಪರಿಹರಿಸುವ ಸಲುವಾಗಿ ಹೊಸ ಕಾರ್ಯಕ್ರಮವೊಂದನ್ನು ಆಯೋಜಿಸಿದೆ. ಸರ್ಕಾರದ ಬಳಿ ಜನ ಸಾಮಾನ್ಯರು ಬರುವುದಲ್ಲ, ಸರಕಾರವೇ ಜನ ಸಾಮಾನ್ಯರನ್ನು ತಲುಪಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (D.K Shivakumar) ತಿಳಿಸಿದ್ದಾರೆ. ಜನರ ಸಮಸ್ಯೆಗಳಿಗೆ ಮನೆ ಬಾಗಿಲಲ್ಲೇ ಪರಿಹಾರ ನೀಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇನ್ನುಮುಂದೆ ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ಓಡಾಡುವ ಅಗತ್ಯ ಇರುವುದಿಲ್ಲ.

Janaspandana Program In Karnataka
Image Credit: Hindustantimes

ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ

ಜನರ ಸಮಸ್ಯೆಗಳನ್ನು ಮನೆ ಬಾಗಿಲಲ್ಲೇ ಪರಿಹರಿಸಲು ಹಮ್ಮಿಕೊಂಡಿರುವ ಜನಸ್ಪಂದನ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಭೆ ನಡೆಸಿದರು. ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬುದು ಈ ಬಾರಿಯ ಜನಸ್ಪಂದನ ಕಾರ್ಯಕ್ರಮದ ಘೋಷ ವಾಖ್ಯ. ತಮ್ಮ ಸಮಸ್ಯೆಗಳನ್ನು ಪರಿಹರಿಸುವಂತೆ ಜನ ಅರ್ಜಿ ಹಿಡಿದು ಸುತ್ತುವುದನ್ನು ತಪ್ಪಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

CM Siddaramaiah Janaspandana Program
Image Credit: Thehansindia

ಜನರ ಬಳಿಗೇ ಸರ್ಕಾರ ಹೋಗಲಿದ್ದು, ಜನರ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ

ಈ ಜನಸ್ಪಂದನ ಕಾರ್ಯಕ್ರಮವನ್ನು ವಿಧಾನಸಭಾ ಕ್ಷೇತ್ರಗಳನ್ನು ವಿಭಾಗಿಸಿ ಆಯಾ ವಲಯದಲ್ಲಿ ಒಂದೊಂದು ದಿನ ಮೀಸಲಿಡಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳಗಳನ್ನು ನಿಗದಿ ಮಾಡಲಾಗಿದ್ದು, ಅದರ ಮಾಹಿತಿಯನ್ನು ಜಾಹೀರಾತುಗಳ ಮೂಲಕ ಪ್ರಕಟಿಸಲಾಗುವುದು ಎಂದು ತಿಳಿಸಿದರು.

Join Nadunudi News WhatsApp Group

ಸಾರ್ವಜನಿಕರು ನನ್ನ ಬಳಿ, ಮುಖ್ಯಮಂತ್ರಿಗಳು ಹಾಗೂ ಇತರ ಸಚಿವರುಗಳ ಬಳಿ ಪ್ರತಿನಿತ್ಯ ನೂರಾರು ಅರ್ಜಿಗಳನ್ನು ತರುತ್ತಾರೆ. ಇದನ್ನು ಕಡಿಮೆ ಮಾಡುವ ಉದ್ದೇಶದಿಂದ ಜನರ ಬಳಿಗೇ ಸರ್ಕಾರ ಹೋಗಲಿದ್ದು, ಜನರ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಜನರ ಅಹವಾಲು ಸ್ವೀಕಾರ ಮಾಡಲು ಜನಸ್ಪಂದನ ಕಾರ್ಯಕ್ರಮ ನಡೆಸುವಂತೆ ಸರ್ಕಾರ ಸಚಿವರುಗಳಿಗೆ ಆದೇಶ ನೀಡಿದೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಲು ಸರಕಾರಕ್ಕೆ ಸುಲಭ ಆಗಲಿದೆ ಎನ್ನಬಹುದು.

Join Nadunudi News WhatsApp Group