Gruha Arogya: ರಾಜ್ಯದ ಜನತೆಗೆ ಮತ್ತೊಂದು ಭಾಗ್ಯ, ಇನ್ನುಮುಂದೆ ಮನೆ ಬಾಗಿಲಿಗೆ ಉಚಿತವಾಗಿ ಬರಲಿದೆ.
ರಾಜ್ಯದ ಜನರಿಗೆ ಇನ್ನೊಂದು ಘಾಜಿಯಾ ಘೋಷಣೆ ಮಾಡಿದ ಸಿದ್ದರಾಮಯ್ಯ.
Karnataka Govt. Gruha Arogya Scheme: ರಾಜ್ಯ ಸರ್ಕಾರ ರಾಜ್ಯದ ಜನರಿಗಾಗಿ ವಿವಿಧ ಯೋಜನೆಯನ್ನು ಪರಿಚಯಿಸುತ್ತಿದೆ. ರಾಜ್ಯ ಸರ್ಕಾರ ಜನರಿಗೆ ಆರ್ಥಿಕವಾಗಿ ನೆರವಾಗಲು ಒಂದೊಂದೇ ಹೆಜ್ಜೆ ಇಡುತ್ತಿದೆ. ರಾಜ್ಯದ ಬಡ ಜನರಿಗಾಗಿ ಸರ್ಕಾರೀ ವಿವಿಧ ಯೋಜನೆಗಳ ಜೊತೆಗೆ ಇತರ ಸೌಲಭ್ಯವನ್ನು ನೀಡುತ್ತಿದೆ.
ಉಚಿತ ಯೋಜನೆಗಳ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ. ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ, ಅನ್ನ ಭಾಗ್ಯ, ಗೃಹ ಜ್ಯೋತಿ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳು ಪಡೆಯುತ್ತಿದ್ದಾರೆ. ಐದು ಗ್ಯಾರಂಟಿ ಯೋಜನೆಗಳ ಜಾರಿಯಾಗಿದ್ದು, ಸರ್ಕಾರ ಘೋಸಿರುವ ಉದ್ಯೋಗ ಭತ್ಯೆ ಯೋಜನೆಯಾಗಿರುವ ಯುವ ನಿಧಿ ಸದ್ಯದಲ್ಲೇ ಘೋಷಣೆಯಾಗಲಿದೆ.
ಸರ್ಕಾರದ ಉಚಿತ ಯೋಜನೆಗಳ ಲಾಭ ಪಡೆಯುತ್ತಿರುವ ಜನತೆಗೆ ರಾಜ್ಯ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರ ಈ ನೂತನ ಯೋಜನೆ ಮಹಿಳೆಯರಿಗೆ ಮಾತ್ರ ಸೀಮಿತವಾಗಿಲ್ಲ. ಈ ಯೋಜನೆಯಡಿ ರಾಜ್ಯದ ಕೋಟ್ಯಂತರ ಜನರು ಲಾಭ ಪಡೆದುಕೊಳ್ಳಬಹುದಾಗಿದೆ.
ರಾಜ್ಯದ ಜನತೆಗೆ ಮತ್ತೊಂದು ಭಾಗ್ಯ
ಜನರಲ್ಲಿ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳಿಗೆ ಉಚಿತ ಔಷಧಿಯನ್ನು ಒದಗಿಸುವ ‘Gruha Arogya’ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಯೋಜನೆ ರೂಪಿಸಲು ಚಿಂತನೆ ನಡೆಸಿದೆ. ಈ ಯೋಜನೆಯಡಿ ಆರೋಗ್ಯ ಸಿಬ್ಬಂಧಿ ಎಲ್ಲ ಮನೆಗಳಿಗೆ ಭೇಟಿ ನೀಡಿ ಎಲ್ಲಾ ಕುಟುಂಬದ ಸದ್ಯಸ್ಯರನ್ನು ತಪಾಸಣೆ ನಡೆಸಲಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಈ Gruha Arogya ಯೋಜನೆ ಜಾರಿ ತರಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸುತ್ತಿದೆ.
ಇನ್ನುಮುಂದೆ ಮನೆ ಬಾಗಿಲಿಗೆ ಉಚಿತವಾಗಿ ಬರಲಿದೆ ಚಿಕೆತ್ಸೆ
ಬಿಪಿ, ಮಧುಮೇಹ ಸೇರಿದಂತೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಸ್ಥಳದಲ್ಲೇ ಔಷಧ ನೀಡಲಿದ್ದು, ಸಂಕೀರ್ಣ ಕಾಯಿಲೆಯನ್ನು ಪತ್ತೆ ಹಚ್ಚಿ ಗಂಭೀರ ಸಮಸ್ಯೆ ಇದ್ದವರನ್ನು ಗುರುತಿಸಿ ಸೂಕ್ತ ಚಿಕೆತ್ಸೆಗೆ ಶಿಫಾರಸ್ಸು ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.
ಇನ್ನುಮುಂದೆ ರಾಜ್ಯದ ಜನತೆಗೆ ಸರ್ಕಾರ ಐದು ಉಚಿತ ಯೋಜನೆಗಳ ಜೊತೆಗೆ ಗೃಹ ಆರೋಗ್ಯ ಯೋಜನೆಯ ಲಾಭವನ್ನು ಕೂಡ ಪಡೆಯಬಹುದಾಗಿದೆ. ಸದ್ಯದಲ್ಲೇ ಈ ಯೋಜನೆಯ ಬಗ್ಗೆ ಅಧಿಕೃತ ಘೋಷಣೆ ಹೊರಡಿಸಲಾಗುತ್ತದೆ. ರಾಜ್ಯದ ಜನತೆಗೆ ಈ ಯೋಜನೆಯ ಲಾಭ ಪಡೆಯಲು ರಾಜ್ಯ ಸರ್ಕಾರ ಪ್ರತ್ಯೇಕ ಸಿಬ್ಬಂದಿ ಮತ್ತು ವೈದ್ಯರ ನೇಮಕಾತಿ ಪ್ರಕ್ರಿಯೆ ಆರಂಭಗೊಳಿಸಿದೆ. ಸದ್ಯದಲ್ಲೇ ಮನೆ ಮನೆಯ ಬಳಿ ಉಚಿತ ಚಿಕಿತ್ಸೆ ತಲುಪಲಿದೆ.