Pragati App: ಉಚಿತ ಯೋಜನೆಯ ಲಾಭ ಪಡೆಯುತ್ತಿರುವವರು ತಕ್ಷಣ ಈ App ಡೌನ್ಲೋಡ್ ಮಾಡಿ, ಸರ್ಕಾರದ ಆದೇಶ

ಪ್ರಗತಿ ಮೊಬೈಲ್ ಅಪ್ಲಿಕೇಶನ್ ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ.

Pragati Mobile Application: ಈಗಾಗಲೇ ರಾಜ್ಯದ ಅರ್ಹ ಫಲಾನುಭವಿಗಳು ರಾಜ್ಯ ಸರ್ಕಾರದ ಶಕ್ತಿ ಯೋಜನೆ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಐದು ಯೋಜನೆಗಳು ರಾಜ್ಯದಲ್ಲಿ ಅರ್ಹರಿಗೆ ತಲುಪುತ್ತಿದೆ.

ಇನ್ನು ರಾಜ್ಯ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳಿಂದ ಯಾರು ಕೂಡ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ವಿವಿಧ ಕ್ರಮ ಕೈಗೊಳ್ಳುತ್ತಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಅನುಷ್ಠಾನಕ್ಕೆ ಮುಖ್ಯಮಂತ್ರಿ Siddaramaiah ಅವರು ಹೊಸ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ.

Karnataka Govt Launches Pragati Mobile Application
Image Credit: Gizbot

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಗುಡ್ ನ್ಯೂಸ್
ಸದ್ಯ ರಾಜ್ಯ ಸರ್ಕಾರ ಸರ್ಕಾರದ ಉಚಿತ ಗ್ಯಾರಂಟಿ ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದೆ. ಈಗಾಗಲೇ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೊಳಿಸಿರುವ ಉಚಿತ ಗ್ಯಾರಂಟಿ ಯೋಜನೆಗಳು ಪ್ರಯೋಜನವನ್ನು ಪ್ರತಿ ಅರ್ಹರಿಗೆ ತಲುಪಿಸುವ ಕಾರಣದಿಂದ ಜನರಲ್ಲಿ ಗ್ಯಾರಂಟಿ ಯೋಜನೆಗಳ ಅರಿವು ಮೂಡಿಸಲು ಸಮಾವೇಶವನೇ ನಡೆಸಿದೆ.

ಈ ಕಾರಣಕ್ಕೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ “ಗ್ಯಾರಂಟಿ ಫಲಾನುಭವಿಗಳ ಸಮಾವೇಶ” ವನ್ನು ಕರ್ನಾಟಕ ಸರ್ಕಾರ ಆಯೋಜಿಸಿದೆ. ಈ ಸಮಾವೇಶದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಉಚಿತ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಗ್ಯಾರಂಟಿ ಅನುಷ್ಠಾನಕ್ಕೆ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ.

Pragati Mobile Application
Image Credit: Gizbot

ಗ್ಯಾರಂಟಿ ಅನುಷ್ಠಾನಕ್ಕಾಗಿ “ಪ್ರಗತಿ ಮೊಬೈಲ್ ಅಪ್ಲಿಕೇಶನ್” ಬಿಡುಗಡೆ
ಸದ್ಯ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇದಕ್ಕಾಗಿ “ಪ್ರಗತಿ ಮೊಬೈಲ್ ಅಪ್ಲಿಕೇಶನ್” ಅನ್ನು ಸಿಎಂ Siddaramiaha ಬಿಡುಗಡೆ ಮಾಡಿದ್ದಾರೆ. ಪ್ರಗತಿ ಮೊಬೈಲ್ ಅಪ್ಲಿಕೇಶನ್ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಸಹಾಯ ಮಾಡುತ್ತದೆ ಮತ್ತು ಅಧಿಕಾರಿಗಳು ವೇಳಾಪಟ್ಟಿಯ ಪ್ರಕಾರ ಸಂಸ್ಥೆಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ.

Join Nadunudi News WhatsApp Group

Join Nadunudi News WhatsApp Group