Gruha Lakshmi: ಗೃಹಲಕ್ಷ್ಮಿ ಯೋಜನೆಯ ಇನ್ನೊಂದು ಬಿಗ್ ಅಪ್ಡೇಟ್, ಸರ್ಕಾರದ ಹಣ ಸಿಗದ ಮಹಿಳೆಗೆ ಗುಡ್ ನ್ಯೂಸ್

ಗೃಹಲಕ್ಷ್ಮಿ ಯೋಜನೆಯ ಹಣ ಸಿಗದ ಮಹಿಳೆಯರಿಗೆ ಸರ್ಕಾರದಿಂದ ಶುಭ ಸುದ್ದಿ, ಈ ತಿಂಗಳು ನಿಮ್ಮ ಖಾತೆ ಸೇರಲಿದೆ 6000 ರೂಪಾಯಿ ಹಣ

Karnataka Gruha Lakshmi Scheme 2023: ರಾಜ್ಯದಲ್ಲಿ ಈಗ ಹಲವು ಮಹಿಳೆಯರ ಚಿಂತೆ ಏನೆಂದರೆ ನನಗಿನ್ನೂ ಗೃಹಲಕ್ಷ್ಮಿಹಣ ಬಂದಿಲ್ಲ ಎನ್ನುವುದು. ಮಹಿಳೆಯರು ಸಿಕ್ಕ ಸಿಕ್ಕವರ ಬಳಿ ನಿನಗೆ ಹಣ ಬಂದಿದೀಯ, ನನಗಿನ್ನೂ ಹಣ ಬಂದಿಲ್ಲ ಎಂದು ತಮ್ಮ ಕಷ್ಟವನ್ನು ಹಂಚಿಕೊಳ್ಳುತ್ತಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಪ್ರಾರಂಭ ಆಗಿ ಮೂರೂ ತಿಂಗಳು ಕಳೆದರು ಹಲವು ಮಹಿಳೆಯರಿಗೆ ಇನ್ನು ಗೃಹಲಕ್ಷ್ಮಿಯ ಒಂದು ಕಂತಿನ ಹಣ ಕೂಡ ಬ್ಯಾಂಕ್ ಖಾತೆಗೆ ಜಮೆ ಆಗಿಲ್ಲ, ಆ ನಿಟ್ಟಿನಲ್ಲಿ ಎಲ್ಲಾ ಮಹಿಳೆಯರು ಸರ್ಕಾರವನ್ನು ದೊಷಿಸುತ್ತಿದ್ದಾರೆ.

ಆದರೆ ಮಹಿಳೆಯರೇ ನೀವು ಇನ್ನು ಚಿಂತಿಸುವ ಅವಶ್ಯಕೆತೆ ಇಲ್ಲ ಈ ತಿಂಗಳು ಖಂಡಿತವಾಗಿ ನಿಮ್ಮ ಖಾತೆಗೆ ಮೂರೂ ತಿಂಗಳ ಹಣ ಜಮೆ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ .

Karnataka Gruha Lakshmi Scheme 2023
Image Credit: Hindustantimes

ಗೃಹಲಕ್ಷ್ಮಿ ಯೋಜನೆಯ ಹಣವನ್ನು ಅರ್ಹ ಮಹಿಳೆಯರಿಗೆ ತಲುಪಿಸುವ ಕಾರ್ಯ ನೆಡೆಯುತ್ತಿದೆ
ಮೂರೂ ತಿಂಗಳಿನಿಂದ ಒಂದು ಕಂತಿನ ಹಣ ದೊರೆಯದ ಮಹಿಳೆಯರಿಗೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಪಿಡಿಒ ನೆರವು ಪಡೆದು ಎಲ್ಲಾ ಅರ್ಹ ಪಲಾನುಭವಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ.

ಗ್ರಾಮ ಅದಾಲತ್ ಮೂಲಕ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಯಾರ ಖಾತೆಗೆ ಹಣ ವರ್ಗಾವಣೆ ಆಗಿಲ್ಲವೋ ಅಂತವರ ಹೆಸರುಗಳನ್ನು ಸಂಗ್ರಹಿಸಬೇಕು, ಆ ಲಿಸ್ಟ್ ಅನ್ನು ಸರ್ಕಾರಕ್ಕೆ ಕಳುಹಿಸಬೇಕು. ರೇಷನ್ ಕಾರ್ಡ್ ಆಧಾರದ ಮೇಲೆ ಮನೆಯ ಹಿರಿಯ ವ್ಯಕ್ತಿ ಯಾರೆಂದು ಗುರುತಿಸಿ ಅವರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಇನ್ನುಮುಂದೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮನೆ ಮನೆಗೆ ಬಂದು ಮಹಿಳೆಯರ ಖಾತೆಯಲ್ಲಿ ಇರುವ ಸಮಸ್ಯೆಗಳನ್ನು ಪರಿಹರಿಸಿ ಹಣ ಹಾಕುತ್ತಾರೆ.

Join Nadunudi News WhatsApp Group

Gruha Lakshmi Amount
Image Credit: Original Source

ಗೃಹಲಕ್ಷ್ಮಿ ಯೋಜನೆಯ ಹಣ ಬಾರದೆ ಇರುವ ಕುರಿತು ಸಮಸ್ಯೆಗಳನ್ನು ಬಗೆಹರಿಸಲಾಗುವುದು

ಗೃಹಲಕ್ಷ್ಮಿ ಯೋಜನೆಯ ಹಣ ಕೆಲವರಿಗೆ ಜಮೆ ಆಗದೆ ಇರಲು ಹಲವು ಕಾರಣಗಳಿದ್ದು ಇವುಗಳನ್ನು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಮತ್ತು ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್ ಖಾತೆ ಆಧಾರ್ ಲಿಂಕ್ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಸಿದ ಎಲ್ಲಾ ಯಜಮಾನಿಯರ ಖಾತೆಗೆ ಹಣ ಹಾಕುವ ನಿಟ್ಟಿನಲ್ಲಿ ಸರ್ಕಾರ ತೊಡಗಿದ್ದು, ಡಿಸೆಂಬರ್ ತಿಂಗಳೊಳಗೆ ಸರ್ಕಾರ ಹಣ ಜಮಾ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಗಾಗಿ ಮಹಿಳೆಯರು ತಮ್ಮ ದಾಖಲೆಗಳನ್ನು ಸರಿಪಡಿಸಿಕೊಳ್ಳಲು ನಿಮ್ಮ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಪಿಡಿಒ ಅನ್ನು ಸಂಪರ್ಕಿಸಿ.

Join Nadunudi News WhatsApp Group