KSET Exam: KSET ಪರೀಕ್ಷೆ ಬರೆಯುವ ಎಲ್ಲಾ ಅಭ್ಯರ್ಥಿಗಳಿಗೆ ಕಠಿಣ ನಿಯಮ, ಪಾಲಿಸದಿದ್ದರೆ ಪರೀಕ್ಷೆ ಬರೆಯುವಂತಿಲ್ಲ

KSET ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕಠಿಣ ನಿಯಮ ಜಾರಿ, ನಿಯಮ ಪಾಲಿಸದಿದ್ದರೆ ಪರೀಕ್ಷೆ ಬರೆಯುವಂತಿಲ್ಲ

KSET Exam Rules 2024: ಕರ್ನಾಟಕ ರಾಜ್ಯದಲ್ಲಿ ಕೆ-ಸೆಟ್ (KSET) ಪರೀಕ್ಷೆಯನ್ನು ಜನವರಿ 13 ರ ಶನಿವಾರದಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲು ರಾಜ್ಯ ಸರ್ಕಾರದಿಂದ ಆದೇಶಿಸಲಾಗಿರುವುದರಿಂದ ಪರೀಕ್ಷೆ ನಡೆಸಲಾಗುತ್ತಿದೆ.

ಅಂದು ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಮೊದಲ ಪ್ರಶ್ನೆ ಪತ್ರಿಕೆ ಪರೀಕ್ಷೆ ಇರಲಿದ್ದು, ಮಧ್ಯಾಹ್ನ 12 ರಿಂದ 2 ಗಂಟೆವರೆಗೆ ಎರಡನೇ ಪ್ರಶ್ನೆಪತ್ರಿಕೆಯ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಹಾಜರಾಗುವವರಿಗೆ ಅನೇಕ ಕಠಿಣ ಕ್ರಮಗಳನ್ನು ಹಾಗು ನಿಯಮಗಳನ್ನು ಸೂಚಿಸಲಾಗಿದೆ ಮತ್ತು ಇವುಗಳಿಗೆ ಅಭ್ಯರ್ಥಿಗಳು ಸಿದ್ದವಾಗಿರಬೇಕಾಗಿದೆ.

KSET Exam New Rules
Image Credit: Telegraphindia

ಪುರುಷ ಅಭ್ಯರ್ಥಿಗಳು ಈ ರೀತಿಯ ವಸ್ತ್ರ ಗಳನ್ನೂ ಮಾತ್ರ ಧರಿಸಿ ಪರೀಕ್ಷೆಗೆ ಹಾಜರಾಗತಕ್ಕದ್ದು

ಪುರುಷ ಅಭ್ಯರ್ಥಿಗಳು ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ ಅಥವಾ ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.

ಈ ರೀತಿಯ ವಸ್ತ್ರ ಧರಿಸಿದರೆ ಪರೀಕ್ಷೆಗೆ ಹಾಜರಾಗುವ ಅವಕಾಶ ಇರುವುದಿಲ್ಲ

Join Nadunudi News WhatsApp Group

ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

KSET Exam Rules
Image Credit: News9live

ಮಹಿಳಾ ಅಭ್ಯರ್ಥಿಗಳು ಈ ರೀತಿಯ ವಸ್ತ್ರ ಗಳನ್ನೂ ಮಾತ್ರ ಧರಿಸಿ ಪರೀಕ್ಷೆಗೆ ಹಾಜರಾಗತಕ್ಕದ್ದು

ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು ಅಥವಾ ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.

ಎತ್ತರವಾದ ಹಿಮ್ಮಡಿಯ ಶೂಗಳನ್ನು ಅಥವಾ ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ ಅಥವಾ ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳನ್ನು ಬಳಸಬಹುದು. ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೂರತುಪಡಿಸಿ).

ನಿಷೇಧಿತ ವಸ್ತುಗಳನ್ನೂ ಕೊಂಡೊಯುವಂತಿಲ್ಲ

ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ, ಕೆಳಗೆ ಪಟ್ಟಿ ಮಾಡಲಾದ ಯಾವುದೇ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‌ಗಳು, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.

KSET Exam Latest Update
Image Credit: The Indian Express

ಪರೀಕ್ಷೆಯ ದಿನದಂದು ಇವುಗಳು ಕಡ್ಡಾಯವಾಗಿದೆ

ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ತರುವುದು. ಇತ್ತೀಚಿನ ಎರಡು ಪಾಸ್ ಪೋರ್ಟ್ ಅಳತೆಯ ಫೋಟೋವನ್ನು ತರುವುದು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಕಡ್ಡಾಯಗೊಳಿಸಲಾಗಿದೆ. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ. ಮೇಲೆ ಹೇಳಲಾಗಿರುವ ಕೆ.ಇ.ಎ ನಿಯಮಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು. ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕ್ರಮವನ್ನು ಜರುಗಿಸಲಾಗುವುದು

Join Nadunudi News WhatsApp Group