Today Rain Alert: ಈ 7 ಜಿಲ್ಲೆಗಳಲ್ಲಿ ಇಂದಿನಿಂದ ಭರ್ಜರಿ ಮಳೆ, ಯಲ್ಲೋ ಅಲರ್ಟ್ ಘೋಷಣೆ.

ಇಂದಿನಿಂದ ಈ 7 ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ

Karnataka Rain Alert: ಸದ್ಯ ಕರ್ನಾಟಕದಲ್ಲಿ ಜೂನ್ ನಿಂದ ಮಾನ್ಸೂನ್ ಆರಂಭವಾಗಿದೆ. ಜೂನ್ ನಿಂದ ಮುಂಗಾರು ಮಳೆಯ ಆರ್ಭಟ ಜೋರಾಗಿರುತ್ತದೆ. ಇನ್ನು ಜೂನ್ ಮೊದಲ ವಾರವೇ ಕೆಲ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿದಿದೆ. ಕೆಲವೊಂದು ಪ್ರದೇಶದಲ್ಲಿ ಸಾಧಾರಣ ಮಳೆ ಬಿದ್ದಿದೆ. ಜೂನ್ ನಲ್ಲಿ ವರುಣ ಆಗಮನವಾಗಿದ್ದು, ಮಳೆಗಾಗಿ ಕಾಯುತ್ತಿದವರಿಗೆ ಖುಷಿ ನೀಡಿದೆ ಎನ್ನಬಹುದು.

ಇನ್ನು ಜೂನ್ ನಲ್ಲಿ ಯಾವ ಯಾವ ದಿನದಲ್ಲಿ ಮಳೆ ಆಗಲಿದೆ ಎನ್ನುವ ಬಗ್ಗೆ ಹವಾಮಾನ ಇಲಾಖೆಯು ಇದೀಗ ಅಪ್ಡೇಟ್ ನೀಡಿದೆ. ಈ 7 ಜಿಲ್ಲೆಗಳಲ್ಲಿ ಇಂದಿನಿಂದ ಭರ್ಜರಿ ಮಳೆಯಾಗಲಿರುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಯಾವೆಲ್ಲ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

Karnataka Rain Alert Latest Update
Image Credit: India Today

ರಾಜ್ಯದಲ್ಲಿ ಯಲ್ಲೋ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 12 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಈ 7 ಜಿಲ್ಲೆಗಳಲ್ಲಿ ಇಂದಿನಿಂದ ಭರ್ಜರಿ ಮಳೆ
•ಕರಾವಳಿಯ ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

•ದಕ್ಷಿಣ ಕನ್ನಡ, ಗದಗ, ರಾಯಚೂರು, ಯಾದಗಿರಿ, ಕಲಬುರಗಿ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಸೇರಿದಂತೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Join Nadunudi News WhatsApp Group

Today Rain Alert
Image Credit: Hindustantimes

Join Nadunudi News WhatsApp Group