Rain Alert: ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಯಂಕರ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ.

ಇಂದು ಮತ್ತು ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಆಗಲಿದೆ ಭರ್ಜರಿ ಮಳೆ

Karnataka Rain Alert: ಸದ್ಯ ಕರ್ನಾಟಕದಲ್ಲಿ ಮಾನ್ಸೂನ್ ಆರಂಭವಾಗಿದೆ. ಜೂನ್ ನಿಂದ ಮುಂಗಾರು ಮಳೆಯ ಆರ್ಭಟ ಜೋರಾಗಿರುತ್ತದೆ. ಇನ್ನು ಜೂನ್ ಮೊದಲ ವಾರವೇ ಕೆಲ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿದಿದೆ. ಕೆಲವೊಂದು ಪ್ರದೇಶದಲ್ಲಿ ಸಾಧಾರಣ ಮಳೆ ಬಿದ್ದಿದೆ. ಜೂನ್ ನಲ್ಲಿ ವರುಣ ಆಗಮನವಾಗಿದ್ದು, ಮಳೆಗಾಗಿ ಕಾಯುತ್ತಿದವರಿಗೆ ಖುಷಿ ನೀಡಿದೆ ಎನ್ನಬಹುದು.

ಇನ್ನು ಜೂನ್ ನಲ್ಲಿ ಯಾವ ಯಾವ ದಿನದಲ್ಲಿ ಮಳೆ ಆಗಲಿದೆ ಎನ್ನುವ ಬಗ್ಗೆ ಹವಾಮಾನ ಇಲಾಖೆಯು ಇದೀಗ ಅಪ್ಡೇಟ್ ನೀಡಿದೆ. ಇಂದು ಮತ್ತು ನಾಳೆ ಈ ಎಲ್ಲ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

karnataka rain update
Image Credit: Original Source

ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಯಂಕರ ಮಳೆ
ರಾಜ್ಯದಲ್ಲಿ ಜೂನ್ 6 ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜೂನ್ 7 ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದ್ದು, ಬೀದರ್, ಧಾರವಾಡ, ಗದಗ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

rain flow in karnataka 2024
Image Credit: Original Source

ಹವಾಮಾನ ಇಲಾಖೆ ಎಚ್ಚರಿಕೆ
ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರಿನ ಸುತ್ತಮುತ್ತ ಹೆಚ್ಚಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 °C ಮತ್ತು 23 °C ಆಗಿರಬಹುದು. ಜೂನ್ 5 ರಿಂದ ಜೂನ್ 13 ರ ವರೆಗೆ ಕಾವೇರಿ ಜಲಾನಯನ ಪ್ರದೇಶ ಮತ್ತು ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಸಾಧಾರಣ ಮಳೆಯಾಗಲಿದೆ. ಜೂನ್ 6 ರಿಂದ 11 ರ ವರೆಗೆ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join Nadunudi News WhatsApp Group

Join Nadunudi News WhatsApp Group