Karnataka Rural OC Exemption Rules: ನೀವು ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸಲು ಯೋಚನೆ ಮಾಡುತಿದ್ದರೆ ಈ ಮಾಹಿತಿ ನಿಮಗೆ ಉಪಯುಕ್ತವಾಗಲಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ಈಗ OC ಮತ್ತು CC ದಾಖಲೆ ಇಲ್ಲದೆ ಇದ್ದರೆ ಯಾವುದೇ ಮನೆ ಅಥವಾ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಮತ್ತು ಒಳಚರಂಡಿ ಸಂಪರ್ಕ ನೀಡದೆ ಇರಲು ಆದೇಶ ಹೊರಡಿಸಿತ್ತು. ಸುಪ್ರೀಂ ಕೋರ್ಟ್ ಹೊರಡಿಸಿರುವ ಈ ಆದೇಶ ಸಾಕಷ್ಟು ಜನರಿಗೆ ದೊಡ್ಡ ಸಮಸ್ಯೆ ಉಂಟುಮಾಡಿದೆ.ಆದರೆ ಈಗ ಇನ್ನುಮುಂದೆ ರಾಜ್ಯದ ಗ್ರಾಮೀಣ ಭಾಗದಲ್ಲಿ ಮನೆ ಕಟ್ಟಿಕೊಂಡವರಿಗೆ OC (ಸ್ವಾಧೀನಾನುಭವ ಪ್ರಮಾಣ ಪತ್ರ) ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಗ್ರಾಮೀಣ ಭಾಗದ ಜನರಿಗೆ OC ವಿನಾಯಿತಿ
ಈ ಹಿಂದೆ ಸುಪ್ರೀಂ ಕೋರ್ಟ್ OC ಮತ್ತು CC ದಾಖಲೆ ಇಲ್ಲದೆ ಇದ್ದರೆ ಯಾವುದೇ ಮನೆ ಅಥವಾ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಮತ್ತು ಒಳಚರಂಡಿ ಸಂಪರ್ಕ ನೀಡದೆ ಇರಲು ಆದೇಶ ಹೊರಡಿಸಿತ್ತು. ಆದರೆ ಈಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರಾಜ್ಯದ ಗ್ರಾಮೀಣ ಭಾಗದಲ್ಲಿ ಮನೆ ಕಟ್ಟಿಕೊಂಡವರಿಗೆ OC (ಸ್ವಾಧೀನಾನುಭವ ಪ್ರಮಾಣ ಪತ್ರ) ಕಡ್ಡಾಯವಲ್ಲ ಎಂದು ಆದೇಶವನ್ನು ಹೊರಡಿಸಿದೆ. ಈ ಆದೇಶದಿಂದ ಇದರಿಂದ ಲಕ್ಷಾಂತರ ಗ್ರಾಮೀಣ ಭಾಗದ ಕುಟುಂಬಗಳಿಗೆ ಅನುಕೂಲವಾಗಲಿದೆ.
ಯಾವ ಕಟ್ಟಡಕ್ಕೆ ವಿನಾಯಿತಿ ನೀಡಲಾಗುತ್ತದೆ?
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 30×40 ಅಡಿ (ಸುಮಾರು 1,200 ಚದರ ಅಡಿ) ಸೈಟ್ ಗಳಲ್ಲಿ ನಿರ್ಮಿಸಿದ ವಸತಿ ಮನೆಗಳು ಅಂದರೆ, ನೆಲ ಮಳಿಗೆ + 2 ಅಂತಸ್ತು (G+2) ಅಥವಾ ಸ್ಟಿಲ್ಟ್ + 3 ಅಂತಸ್ತುಗಳ ತನಕದ ಕಟ್ಟಡಗಳಿಗೆ ಅನುಮತಿ ನೀಡಲಾಗಿದೆ. ಜನರಿಗೆ ತ್ವರಿತ ಸೇವೆ ನೀಡುವ ಉದ್ದೇಶದಿಂದ ಈ ವಿನಾಯಿತಿ ನೀಡಿದೆ. ಕೇವಲ ವಸತಿ ಕಟ್ಟಡಗಳಿಗೆ ಮಾತ್ರ ಈ ವಿನಾಯಿತಿ ನೀಡಲಾಗಿದೆ. ವಾಣಿಜ್ಯ ಅಥವಾ ದೊಡ್ಡ ಕಟ್ಟಡಗಳಿಗೆ ಅನ್ವಯವಿಲ್ಲ.
ಯಾರು ಲಾಭ ಪಡೆದುಕೊಳ್ಳಬಹುದು
ಗ್ರಾಮೀಣ ಭಾಗದಲ್ಲಿ ಸಣ್ಣ ಮನೆ ಕಟ್ಟಿಕೊಂಡ, ರೈತರು, ಕಾರ್ಮಿಕರು ಸುಲಭವಾಗಿ ಮೂಲಸೌಕರ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. 2025 ರ ಕೊನೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಪಂಚಾಯತಿ ಕಚೇರಿಗೆ ಭೇಟಿ ನೀಡಿ.
Disclaimer: This information is provided for awareness purposes only. For personalised legal advice, consult a qualified professional and refer to official government notifications.

