SSLC Result: SSLC ಪರೀಕ್ಷೆ ಬರೆದ ಮಕ್ಕಳಿಗೆ ವಿಶೇಷ ಸೂಚನೆ, ಫಲಿತಾಂಶ ದಿನಾಂಕ ಪ್ರಕಟ.
ಮೇ ತಿಂಗಳ ಮೊದಲ ವಾರದಲ್ಲಿ SSLC ಫಲಿತಾಂಶ ವೆಬ್ಸೈಟ್ ನಲ್ಲಿ ಪ್ರಕಟವಾಗಲಿದೆ.
Karnataka SSLC Board Exam Result: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ನಡೆದು ಹೋಗಿ ಫಲಿತಾಂಶ ಸಹ ನಿನ್ನೆ ಪ್ರಕಟವಾಗಿದೆ.ಸಾಕಷ್ಟು ದಿನಗಳಿಂದ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶಕ್ಕಾಗಿ ಕಾಯುತ್ತಿದ್ದು.
ರಾಜ್ಯಾದ್ಯಂತ ನಿನ್ನೆ 2022-23 ನೇ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ರಿಸಲ್ಟ್ ಪಡೆದಿದ್ದಾರೆ.
ನಿನ್ನೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ನಿನ್ನೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸುದ್ದಿಗೋಷ್ಠಿ ಮಾಡಿದ್ದಾರೆ. ವಿದ್ಯಾರ್ಥಿಗಳು www.karresults.nic.in ವೆಬ್ ಸೈಟ್ ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಿದ್ದಾರೆ.
ಮೇ ಮೊದಲ ವಾರದಲ್ಲಿ SSLC ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ನಮ್ಮ ರಿಸಲ್ಟ್ ಯಾವಾಗ ಎಂದು ಎದುರು ನೋಡುತ್ತಿದ್ದಾರೆ. ಮೇ ಮೊದಲ ವಾರದಲ್ಲೇ SSLC ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
SSLC ಫಲಿತಾಂಶವನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ ಗಳಲ್ಲಿ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
SSLC ಪರೀಕ್ಷಾ ಫಲಿತಾಂಶ ನೋಡುವುದು ಹೇಗೆ
ಅಧಿಕೃತ ವೆಬ್ ಸೈಟ್ karresults.nic.in ಗೆ ಹೋಗಿ, ಮುಖಪುಟದಲ್ಲಿ, ಕರ್ನಾಟಕ SSLC 2023 ಫಲಿತಾಂಶ ಲಿಂಕ್ ಅನ್ನು ತೆರೆದರೆ ಹೊಸ ಲಾಗಿನ್ ಪುಟ ತೆರೆಯುತ್ತದೆ, ನಂತರ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಿದರೆ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ.