Kishore About Chetan: ಚೇತನ್ ಅಹಿಂಸಾ ವಿವಾದಕ್ಕೆ ಎಂಟ್ರಿ ಕೊಟ್ಟ ಕಿಶೋರ್, ಚೇತನ್ ಪರ ಮಾತನಾಡಿದ ಕಿಶೋರ್.
ನಟ ಚೇತನ್ ಅಹಿಂಸೆ ಅವರ ವೀಸಾ ರದ್ದು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ನಟ ಕಿಶೋರ್
Actor Kishore About Chetan Ahimsa Visa Cancel: ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ (Chetan Ahimsa) ಇದೀಗ ಸುದ್ದಿಯಲ್ಲಿದ್ದಾರೆ. ನಟ ಚೇತನ್ ಅಹಿಂಸಾ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಡುವ ಪೋಸ್ಟ್ ಗಳ ಮೂಲಕ ಸಾಕಷ್ಟು ವಿವಾದಗಳಿಗೆ ಗುರಿಯಾಗಿದ್ದರು.
ಈ ಹಿಂದೆ ನಟ ಹಿಂದುತ್ವದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕಾರಣ ಚೇತನ್ ಅವರನ್ನು ಬಂಧಿಸಲಾಗಿತ್ತು. ಇದೀಗ ಚೇತನ್ ಅವರ ವೀಸಾ ಮತ್ತು ಒಸಿಐ ರದ್ದು ಮಾಡವುವಂತೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ನಟ ಕಿಶೋರ್ ಅವರು ಪೋಸ್ಟ್ ಮಾಡಿದ್ದಾರೆ.
ನಟ ಚೇತನ್ ಪರ ಪೋಸ್ಟ್ ಮಾಡಿದ ಕಿಶೋರ್
ನಟ ಚೇತನ್ ಅವರ ವೀಸಾ ಹಾಗೂ OCI ರದ್ದು ಮಾಡುವಂತೆ ನೋಟಿಸ್ ನೀಡಲಾಗಿದೆ. ಚೇತನ್ ಅವರಿಗೆ ನೀಡಿದ ನೋಟಿಸ್ ನ ವಿರುದ್ಧ ಇನ್ಸ್ಟಾಗ್ರಾಮ್ ಅಲ್ಲಿ ನಟ ಕಿಶೋರ್ (Kishore) ಅವರು ಪೋಸ್ಟ್ ಮಾಡಿದ್ದಾರೆ.
“ಹಿಂದುತ್ವ ಅನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ, ಸಕಲರನ್ನು ಒಳಗೊಂಡ ವಸುದೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನೋಸ್ಥಿತಿ. ಆದರೆ ಹಿಂದುತ್ವ ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಹೊಡೆಡಯುವ, ಪರದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿದೆ ಅಷ್ಟೇ.
View this post on Instagram
ಹಾಗಾಗಿ ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದುಗಳಿಗೆಲ್ಲರಿಗೂ ಅಪಮಾನವಾಯಿತ್ತೆನ್ನುವುದು ಎಷ್ಟು ಉಚಿತ? ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪ್ರಶ್ಯತೆ, ಲಿಂಗ ಭೇದ ಇವುಗಳಿಂದಲ್ಲವೇ? ಆ ನಿಟ್ಟಿನಲ್ಲಿ ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗು ಮಾದರಿಯಾಗಿಸಬೇಕಲ್ಲವೇ?.
ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವುದು, ಆರೋಪಿಸುವುದು, ಜೈಲಿಗೆ ಹಾಕುವ ಅಥವಾ ಗಡಿಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು?” ಎಂದು ನಟ ಕಿಶೋರ್ ಪ್ರಶ್ನಿಸಿದ್ದಾರೆ. ನಟ ಕಿಶೋರ್ ಅವರ ಪೋಸ್ಟ್ ಗೆ ಚೇತನ್ ಅಹಿಂಸಾ ಧನ್ಯವಾದ ತಿಳಿಸಿದ್ದಾರೆ. ಕಿಶೋರ್ ಅವರ ಪೋಸ್ಟ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧದ ಚರ್ಚೆಯನ್ನು ಹುಟ್ಟುಹಾಕಿದೆ.