Ads By Google

Kodi Mutt: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ, ಕೊಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

Kodi Mutt Sri About C.M Siddaramaiah

Image Credit: Original Source

Ads By Google

Kodi Mutt Sri About Siddaramaiah: ಕೋಡಿಮಠದ ಡಾ.ಶಿವಾನಂದ ಶಿವಯೋಗಿ ಸ್ವಾಮೀಜಿಗಳು ಕರ್ನಾಟಕದ ರಾಜಕಾರಣದ ಭವಿಷ್ಯದ ಕುರಿತು ಆಗಾಗ ಮಾಹಿತಿ ನೀಡುತ್ತಿರುತ್ತಾರೆ. ಅದರಂತೆ ಈ ಬಾರಿ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಾಗೂ ಮಳೆ, ಬೆಳೆ ಬಗ್ಗೆ ಸ್ಫೋಟಕ ಭವಿಷ್ಯವನ್ನು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ನುಡಿದಿದ್ದಾರೆ.

ಲೋಕಸಭಾ ಚುನಾವಣೆಯ ಸಮಯದಲ್ಲಿ ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯವಾಣಿ ನುಡಿದಿದ್ದರು . ಶ್ರಾವಣದಲ್ಲಿ ಸಿದ್ದರಾಮಯ್ಯ ಅವರ ಅಧಿಕಾರಾವಧಿಯ ಬಗ್ಗೆ ಹೇಳುತ್ತೇನೆ ಎಂದಿದ್ದರು. ಇದೀಗ ಬೆಳಗಾವಿಯಲ್ಲಿ ಮಾತನಾಡಿದ ಕೊಡಿ ಮಠದ ಶ್ರೀಗಳು ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಭವಿಷ್ಯವಾಣಿ ನುಡಿದಿದ್ದಾರೆ. ಅದೇನು ಎನ್ನುವ ಬಗ್ಗೆ ಮಹತಿ ಇಲ್ಲಿದೆ.

Image Credit: Vistaranews

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ…!
ಕೆಲವು ವಾರಗಳ ಹಿಂದೆ ಶ್ರೀಗಳು ದೇಶದಲ್ಲಿ ದೊಡ್ಡ ಅವಾಂತರ ಆಗಲಿದೆ ಎಂದು ಹೇಳಿದ್ದರು. ಅದರಂತೆ ಕೇರಳದಲ್ಲಿ ಭೂಕುಸಿತ ಸಂಭವಿಸಿರುವುದನ್ನು ಪ್ರಸ್ತಾಪಿಸಿರುವ ಅವರು ರಾಜ್ಯದ ರಾಜಕೀಯದ ಬಗ್ಗೆಯೂ ಭವಿಷ್ಯ ನುಡಿದಿದ್ದಾರೆ. ಈ ನಿರೀಕ್ಷೆ ಕೆಲವರಿಗೆ ಸಂತಸವನ್ನು ತಂದರೆ ಇನ್ನೊಂದು ಬಣಕ್ಕೆ ಕಿರಿಕಿರಿಯಾಗುವುದು ಖಚಿತ. ಈ ಬಾರಿ ಶ್ರೀಗಳು ರಾಜ್ಯದಲ್ಲಿನ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಅಚ್ಚರಿಯ ಭವಿಷ್ಯವಾಣಿ ನುಡಿದ್ದಾರೆ. ಶ್ರೀಗಳ ಭವಿಷ್ಯವಾಣಿ ಏನು ಎನ್ನುವ ಬಗ್ಗೆ ತಿಳಿಯಲು ಈ ಲೇಖನವನ್ನು ಓದಿ.

ಮುಖ್ಯಮಂತ್ರಿ ಬದಲಾವಣೆಯಾ ಬಗ್ಗೆ ಶ್ರೀಗಳ ಭವಿಷ್ಯವಾಣಿ ಏನು…?
ರಾಜ್ಯ ರಾಜಕಾರಣದ ಬಗ್ಗೆ ಮಾತನಾಡಿದ ಶ್ರೀಗಳು, ಒಬ್ಬ ಸನ್ಯಾಸಿ ತಪಸ್ಸಿಗೆ ಕುಳಿತಿದ್ದನಂತೆ. ಅದೇ ವೇಳೆ ಒಬ್ಬ ಬೇಡ ಒಂದು ಜಿಂಕೆಯನ್ನು ಅಟ್ಟಿಸಿಕೊಂಡು ಬಂದನಂತೆ. ಸನ್ಯಾಸಿ ಬಳಿ ಬಂದು ಬೇಡ, ಏನು ಸ್ವಾಮಿ ಇಲ್ಲಿ ಜಿಂಕೆ ಓಡಿಹೋಯಿತೆ..? ಎಂದು ಪ್ರಶ್ನಿಸಿದನಂತೆ. ಈ ವೇಳೆ ಸನ್ಯಾಸಿ ಉಭಯ ಸಂಕಟಕ್ಕೆ ಸಿಲುಕಿದ. ಹೌದು ಎಂದರೆ ಜಿಂಕೆಯನ್ನು ಕೊಳ್ಳುವಂತೆ ಮಾಡಿದ ಪಾಪ ಬರುತ್ತದೆ, ಇಲ್ಲ ಎಂದರೆ ಸುಳ್ಳಾಡಿದ ಪಾಪ ಬರುತ್ತದೆ.

Image Credit: Oneindia

ಈ ಸಂದಿಗ್ದ ಪರಿಸ್ಥಿತಿಯಲ್ಲಿ ಸಂಸ್ಯಾಸಿಯು ಯಾವುದು ನೋಡಿತು ಅದು ಮಾತನಾಡಲ್ಲ, ಯಾವುದು ಮಾತನಾಡುತ್ತದೆಯೋ ಅದು ನೋಡಿಲ್ಲ ಎಂದು ಹೇಳಿದಂತೆ, ಎಂದು ಕೊಡಿ ಮಠದ ಶ್ರೀಗಳು ಮಾರ್ಮಿಕವಾಗಿ ಉತ್ತರಿಸಿದರು. ಈ ವೇಳೆ ಶ್ರೀಗಳು, ಕಣ್ಣು ನೋಡುತ್ತದೆ ಆದರೆ ಮಾತನಾಡಲ್ಲ, ಬಾಯಿ ಮಾತನಾಡುತ್ತದೆ ಆದರೆ ನೋಡಲ್ಲ ಎಂದಿದ್ದಾರೆ. ಈ ಮೂಲಕ ಪರೋಕ್ಷವಾಗಿ ರಾಜ್ಯದಲ್ಲಿ ಸಿಎಂ ಬದಲಾವಣೆ ಸದ್ಯಕ್ಕಿಲ್ಲ ಎಂದು ಉತ್ತರಿಸಿದ್ದಾರೆ.

Image Credit: Vistaranews
Ads By Google
Pushpalatha Poojari: Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in