Kodi Mutt: ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೊಡಿ ಮಠದ ಸ್ವಾಮಿಗಳು, ನಿಜವಾಗುತ್ತಾ ಭವಿಷ್ಯ.

ಕಾಂಗ್ರೆಸ್ ಸರ್ಕಾರದ ಬಗ್ಗೆ ಕೊಡಿ ಮಠದ ಸ್ವಾಮಿಗಳು ಭವಿಷ್ಯವನ್ನ ನುಡಿದಿದ್ದಾರೆ.

Kodi Mutt Swamiji About Siddaramaiah: ಕೋಡಿಮಠದ ಶ್ರೀಗಳು ಈಗಾಗಲೇ ಹೇಳಿದಂತೆ ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದಿದೆ. ಈಗ ಮತ್ತೊಮ್ಮೆ ಕೋಡಿಮಠದ ಸ್ವಾಮೀಜಿಗಳು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.

ಕೋಡಿಮಠದ ಶ್ರೀಗಳ ಭವಿಷ್ಯ
ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕೋಡಿಮಠದ ಸ್ವಾಮೀಜಿ ನುಡಿದಿದ್ದ ಭವಿಷ್ಯ ನಿಜವಾಗಿದೆ. ಯಾವುದೇ ಪಕ್ಷಗಳು ಒಟ್ಟಾಗಿ ಹೋಗುವುದಿಲ್ಲ. ಪಕ್ಷಾಂತರಗಳು ಹೆಚ್ಚಲಿವೆ. ಆದರೆ ಒಂದೇ ಪಕ್ಷ ಅದಿಕಾರವನ್ನು ಹಿಡಿಯಲಿದೆ ಎಂದು ಹೇಳಿದ್ದರು. ಅದರಂತೆ ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಅಧಿಕಾರಕ್ಕೆ ಬಂದಿದೆ. ಇದರ ಮದ್ಯೆ ಇದೀಗ ಕೋಡಿಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಆಘಾತಕರ ಭವಿಷ್ಯ ನುಡಿದಿದ್ದಾರೆ.

Kodi Mutt Swamiji About Siddaramaiah
Image Source: Zee News

ಆಘಾತಕಾರಿ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಇಂದು ಜೂನ್ 8 ರಂದು ಕೋಲಾರ ತಾಲೂಕಿನ ಸಾಹತೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಕೋಡಿಮಠದ ಶ್ರೀ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ.

ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತೆ ಎಂದು ಹೇಳಿದ್ದೆ ಅದರಂತೆ ರೈಲು ದುರಂತ ನಡೆದಿದೆ. ಇನ್ನು ಒಂದು ಗಂಡಾಂತರ ದೇಶಕ್ಕೆ ಕಾದಿದೆ. ಈ ವರ್ಷ ಅಚಾನಕ್ಕಾಗಿ ಗುಡುಗು ಮಿಂಚು ಬರಲಿದೆ. ಎರಡು ಮೂರೂ ರಾಷ್ಟ್ರಗಳು ನೀರಿನಲ್ಲಿ ಮುಳುಗಡೆಯಾಗಲಿದೆ. ಎಲ್ಲೊ ನಡೆದ ಬಾಂಬ್ ದಾಳಿಯಿಂದ ಸಾಕಷ್ಟು ನಮಗೆ ಅನಾಹುತ ಸಂಭವಿಸಲಿದೆ ಎಂದು ಆಘಾತಕಾರಿ ಭವಿಷ್ಯ ನುಡಿದರು.

Kodi Mutt Swamiji About Siddaramaiah
Image Source: India Today

ಗಿಡ, ಮರ, ದೈವದ ಆರಾದ್ಯದ ಸಂಕೇತ ಮತ್ತೆ ಕೈವಾರ ತಾತನ್ಯನವರು ಹುಟ್ಟಿ ಬರುವ ಸಂಕೇತ ಇದೆ. ಅಂತಹ ಸೂಚನೆ ಈಗಾಗಲೇ ಸಿಕ್ಕಿದೆ. ಅದರಂತೆ ಬೆಟ್ಟದಲ್ಲಿ ಮುನ್ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ ಆಧ್ಯಾತ್ಮಿಕವಾಗಿ ಅವರು ನಡೆಯುತ್ತಿದ್ದಾರೆ. ಹಾಗಾಗಿ ಅವರಿಗೆ ಒಳ್ಳೆಯದಾಗಲಿ. ಆದ್ಯಾತ್ಮ ಬಿಟ್ಟು ಹೋದರೆ ಅವರಿಗೆ ದೈವವೇ ಉತ್ತರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಬಗ್ಗೆ ಅಭಿಪ್ರಾಯ ತಿಳಿಸಿದರು.

Join Nadunudi News WhatsApp Group

Join Nadunudi News WhatsApp Group