Lok Sabha Election: ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷ ವಿನ್ ಆಗಲಿದೆ, ಸ್ಪೋಟಕ ಭವಿಷ್ಯ ನುಡಿದ ಕೊಡಿ ಶ್ರೀಗಳು.

ಲೋಕಸಭಾ ಚುನಾವಣೆಯ ಬಗ್ಗೆ ಕೊಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ

Kodi Mutt Swamiji About Loka Sabha Election: ಕೊಡಿ ಮಠದ ಶಿವಯೋಗಿ ಶಿವಾನಂದ ರಾಜೇಂದ್ರ (Shivayogi Shivananda Rajendra) ಸ್ವಾಮೀಜಿಯವರ ಭವಿಷ್ಯವಾಣಿ ಇತ್ತೀಚಿಗೆ ಬಾರಿ ವೈರಲ್ ಆಗುತ್ತಿದೆ. ಕೊಡಿ ಮಠದ ಶ್ರೀಗಳು ಈ ಹಿಂದೆ ಸಾಕಷ್ಟು ವಿಚಾರಗಳ ಬಗ್ಗೆ ಭವಿಷ್ಯವನ್ನು ನುಡಿದಿದ್ದರು. ಶ್ರೀಗಳ ಭವಿಷ್ಯವಾಣಿಯಂತೆ ಕೆಲವು ಘಟನೆಗಳು ಸಂಭವಿಸಿದೆ.

ಹೀಗಾಗಿ ಶ್ರೀಗಳ ಭವಿಷ್ಯವಾಣಿಯ ಬಗ್ಗೆ ಜನರು ಹೆಚ್ಚಿನ ಕುತೂಹಲ ತೋರಿಸುತ್ತಾರೆ. ಕೊಡಿ ಮಠದ ಶ್ರೀಗಳ ಭವಿಷ್ಯವಾಣಿ ಎಲ್ಲರಲ್ಲೂ ಒಂದು ರೀತಿ ಅಚ್ಚರಿ ಮೂಡಿಸುತ್ತದೆ. ಶ್ರೀಗಳು ನೇರವಾಗಿ ಮುಂದೆ ಉತ್ಗುವ ಅಪಾಯದ ಬಗ್ಗೆ ಹೇಳದಿದ್ದರೂ ಪರೋಕ್ಷವಾಗಿ ಮುಂದೆ ಸಂಭವಿಸಲಿರುವ ಘಟನೆಗಳ ಬಗ್ಗೆ ಸೂಚನೆ ನೀಡುತ್ತಾರೆ.

The swamis of Kodi Math have predicted the future of the Lok Sabha elections
Image Credit: udayavani

ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷ ವಿನ್ ಆಗಲಿದೆ
ಇನ್ನು ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನೆರವೇರಿತ್ತು. ವಿಧಾನಸಭಾ ಚುನಾವಣೆಯ ವೇಳೆ ಶ್ರೀಗಳು ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎನ್ನುವ ಬಗ್ಗೆ ಮಾಹಿತಿ ನೀಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಒಂದೇ ಪಕ್ಷ ಅಧುಲಿಕಾರಕ್ಕೆ ಬರಲಿದೆ ಎಂದು ಭವಿಷ್ಯವಾಣಿ ನುಡಿದಿದ್ದರು.

ಇದೀಗ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಜನರು ಲೋಕಸಭಾ ಚುನಾವಣೆಯ (Lok Sabha Election) ಬಗ್ಗೆ ಶ್ರೀಗಳ ಭವಿಷ್ಯವಾಣಿಗಾಗಿ ಕಾಯುತ್ತಿದ್ದಾರೆ. ಇದೀಗ ಕೊಡಿ ಮಠದ ಶ್ರೀಗಳು ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷ ಗೆಲುವು ಸಧಿಸಲಿದೆ ಎನ್ನುವ ಬಗ್ಗೆ ಭವಿಷ್ಯವಾಣಿ ನುಡಿದಿದ್ದಾರೆ.

ಲೋಕಸಭಾ ಚುನಾವಣೆಯ ಬಗ್ಗೆ ಶ್ರೀಗಳ ಭವಿಷ್ಯವಾಣಿ
ದಾವಣಗೆರೆಯ ಹೊನ್ನಾಳಿಯಲ್ಲಿ ಕೊಡಿ ಮಠದ ಶಿವಯೋಗಿ ಶಿವಾನಂದ ರಾಜೇಂದ್ರ ಶ್ರೀಗಳು ಲೋಕಸಭಾ ಚುನಾವಣೆಯ ಬಗ್ಗೆ ಹೇಳಿಕೆ ನೀಡಿದ್ದಾರೆ. “ವಿಧಾನಸಭಾ ಚುನಾವಣೆಯಲ್ಲಿ ಒಂದೇ ಪಕ್ಷವೂ ಅಧಿಕಾರಕ್ಕೆ ಬರಲಿದೆ ಎಂದಿದ್ದೆ. ಅದರಂತೆ ಆಗಿದೆ. ಲೋಕಸಭಾ ಚುನಾವಣೆಯಲ್ಲೂ ಪಾಕ್ಷಂತರ ಹೆಚ್ಚಾದ್ರೂ, ಒಂದೇ ಪಕ್ಷವೂ ದೇಶದಲ್ಲಿ ಅಧಿಕಾರಕ್ಕೆ ಬರಲಿದೆ” ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಇನ್ನು ಶ್ರೀಗಳು ಹೇಳಿದಂತೆ ಲೋಕಸಭಾ ಚುನಾವಣೆಯಲ್ಲಿ ಒಂದೇ ಪಕ್ಷ ಅಧಿಕಾರ ಗಿಟ್ಟಿಸಿಕೊಳುತ್ತದಾ ಎನ್ನುವುದನ್ನು ಕಾದು ನೋಡಬೇಕಿದೆ.

Join Nadunudi News WhatsApp Group

In front of the media, Mr. Kodi Math made predictions about the Lok Sabha elections
Image Credit: indiatoday

ಸರ್ಕಾರದ ಬಗ್ಗೆ ಶ್ರೀಗಳ ಹೇಳಿಕೆ
ಶಿವಯೋಗಿ ಶಿವಾನಂದ ರಾಜೇಂದ್ರ ಸ್ವಾಮೀಜಿಯವರು ರಾಜ್ಯ ಹಾಗೂ ರಾಷ್ಟ್ರ ರಾಜಕೀಯದ ಬಗ್ಗೆ ಭವಿಷ್ಯವಾಣಿ ನುಡಿದಿದ್ದಾರೆ. ರಾಜ್ಯ ಹಾಗೂ ರಾಷ್ಟ್ರಾ ರಾಜಕೀಯದಲ್ಲಿ ಮಹತ್ವದ ಅಸ್ಥಿರತೆ ಉಂಟಾಗಲಿದೆ. ಯುಗಾದಿಯ ನಂತರ ಏನಾಗುತ್ತದೆ ಎಂದು ಕಾದು ನೋಡಿ ಎಂಬುದಾಗಿ ತಿಳಿಸಿದ್ದಾರೆ. ಕೊಡಿ ಮಠದ ಶ್ರೀಗಳು ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ಯುಗಾದಿ ವೇಳೆಗೆ ಅಸ್ಥಿರತೆ ಕಾಡಲಿದೆ ಎಂದು ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.

Join Nadunudi News WhatsApp Group