Congress Govt: ಕಾಂಗ್ರೆಸ್ ಸರ್ಕಾರದ ಬಗ್ಗೆ ಇನ್ನೊಂದು ಸ್ಪೋಟಕ ಭವಿಷ್ಯ ನುಡಿದ ಕೊಡಿ ಮಠದ ಶ್ರೀಗಳು.
ಕಾಂಗ್ರೆಸ್ ಸರ್ಕಾರದ ಬಗ್ಗೆ ಕೊಡಿ ಮಠದ ಸ್ವಾಮಿಗಳು ಭವಿಷ್ಯವನ್ನ ನುಡಿದಿದ್ದಾರೆ.
Kodi Mutt Swamiji Prediction About Congress Government: ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರದಲ್ಲಿದೆ. ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದಾರೆ. ಈ ಹಿಂದೆ ವಿಧಾನಸಭಾ ಚುನಾವಣಾ ಸಮಯದಲ್ಲಿ ಕೊಡಿ ಮಠದ ಶ್ರೀಗಳು ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನುವ ಬಗ್ಗೆ ಭವಿಷ್ಯ ನುಡಿದ್ದರು.
ಇದೀಗ ಕೊಡಿ ಮಠದ ಶ್ರೀಗಳು ಕಾಂಗ್ರೆಸ್ ಸರ್ಕಾರದ ಬಗ್ಗೆ ಇನ್ನೊಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಶ್ರೀಗಳು ಕಾಂಗ್ರೆಸ್ ಸರ್ಕಾರದ ಬಗ್ಗೆ ಯಾವ ಭವಿಷ್ಯ ನುಡಿದಿದ್ದಾರೆ ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.
ಕಾಂಗ್ರೆಸ್ ಸರ್ಕಾರದ ಬಗ್ಗೆ ಇನ್ನೊಂದು ಸ್ಪೋಟಕ ಭವಿಷ್ಯ ನುಡಿದ ಕೊಡಿ ಮಠದ ಶ್ರೀಗಳು
ಮಂಡ್ಯ ಜಿಲ್ಲೆಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಕೊಡಿ ಮಠದ ಶ್ರೀಗಳಾದ ಡಾ. ಸದಾಶಿವ ಶಿವಯೋಗಿ ರಾಜೇಂದ್ರ (Sadashiva Shivayogi Rajendra) ಮಹಾಸ್ವಾಮಿಗಳು ಭಾಗವಹಿಸಿದ್ದರು. ಈ ವೇಳೆ ಶ್ರೀಗಳು ಕಾಂಗ್ರೆಸ್ ಸರ್ಕಾರದ ಬಗ್ಗೆ ಕುತೂಹಲಕಾರಿ ಭವಿಷ್ಯ ನುಡಿದಿದ್ದಾರೆ.
“ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವು ಜನತೆಯ ಭಾವನೆಗಳಿಗೆ ಪೂರಕವಾಗಿ ಸ್ಪಂದಿಸಿ ಕೆಲಸ ಮಾಡುವ ಮೂಲಕ ಜನಾದೇಶದ ತೀರ್ಪಿಗೆ ಅನುಗುಣವಾಗಿ 5 ವರ್ಷಗಳನ್ನು ಪೂರ್ಣಗೊಳಿಸಲಿದೆ” ಎಂದು ಶ್ರೀಗಳು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರಕ್ಕೆ ಮುಂದೆ ಕಂಟಕ ಎದುರಾಗಲಿದೆ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯಲು ಡಿ. ಕೆ ಶಿವಕುಮಾರ್ ಕೊಡುಗೆಯು ಅಪಾರವಿದೆ. ಮಂತ್ರಿ ಮಂಡಳ ವಿಸ್ತರಣೆಯಲ್ಲಿ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡದೆ ಪ್ರಾದೇಶಿಕವಾರು, ಜಿಲ್ಲಾವಾರು ಸೂಕ್ತ ಪ್ರಾತಿನಿಧ್ಯ ನೀಡಿ ಸಂಪುಟ ವಿಸ್ತರಣೆ ಮಾಡಬೇಕು ಎಂದು ಶ್ರೀಗಳು ಸಲಹೆ ನೀಡಿದ್ದಾರೆ.
ಸದ್ಯಕ್ಕೆ ರಾಜ್ಯ ಸರ್ಕಾರಕ್ಕೆ ಕಂಟಕವಿಲ್ಲ. ಲೋಕಸಭಾ ಚುನಾವಣೆಯ ನಂತರ ಸಣ್ಣ ಕಂಟಕ ಉಂಟಾಗಲಿದೆ ಎಂದು ಹೇಳಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕಂಟಕ ಎದುರಾಗಲಿದೆ ಎಂದು ಸೂಚನೆ ನೀಡಿದ್ದಾರೆ.