Bus Ticket Price: KSRTC ಬಸ್ಸಿನಲ್ಲಿ ಹೋಗುವ ಎಲ್ಲಾ ಪುರುಷರಿಗೆ ಬೇಸರದ ಸುದ್ದಿ, ಟಿಕೆಟ್ ದರ ಇಷ್ಟು ಹೆಚ್ಚಳ

ಶೀಘ್ರದಲ್ಲೇ KSRTC ಬಸ್ ಟಿಕೆಟ್ ದರ ಏರಿಕೆ

KSRTC Bus Ticket Price Hiked: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚಿಸಿದೆ. ಪೆಟ್ರೋಲ್- ಡೀಸೆಲ್ ಬೆಲೆ ಹೆಚ್ಚಳದ ಕುರಿತು ಜನಸಾಮಾನ್ಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ಸಮಯದಿಂದ ರಾಜ್ಯದಲ್ಲಿ ವಸ್ತುಗಳ ಬೆಲೆ ಒಂದೊಂದೇ ಏರಿಕೆಯಾಗುತ್ತಿದೆ. ದಿಢೀರ್ ಬೆಲೆ ಏರಿಕೆ ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ ಎನ್ನಬಹುದು. ಸದ್ಯ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯು ಬಸ್ ನಲ್ಲಿ ಪ್ರಯಾಣ ಮಾಡುವವರ ಮೇಲು ನೇರ ಪರಿಣಾಮ ಬೀರುತ್ತಿದೆ.

KSRTC Ticket Price Hike
Image Credit: The new Indian Express

ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಬಿಗ್ ಶಾಕ್
ರಾಜ್ಯದಲ್ಲಿ ದಿಢೀರ್ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಹೌದು, ಪೆಟ್ರೋಲ್ ಬೆಲೆ 3 ರೂಪಾಯಿ ಮತ್ತು ಡೀಸೆಲ್ ಬೆಲೆ 3.5 ರೂಪಾಯಿ ಏರಿಕೆಯಾಗಿದೆ. ಸರ್ಕಾರದ ಈ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ರಾಜ್ಯ ಸರ್ಕಾರ ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚಿಸಿದ ಬೆನ್ನಲ್ಲೇ ರಸ್ತೆ ಸಾರಿಗೆ ನಿಗಮ ಬಸ್ ಟಿಕೆಟ್ ದರದ ಹೆಚ್ಚಳಕ್ಕೆ ನಿರ್ಧರಿಸಿದೆ. ಇಂಧನ ಬೆಲೆಗಳ ಹೆಚ್ಚಳವು ಬಸ್ ಗಳನ್ನು ಓಡಿಸುವ ಕಾರ್ಯಾಚರಣೆಯ ವೆಚ್ಚದ ಮೇಲು ಪರಿಣಾಮ ಬೀರುತ್ತದೆ.

ಕರ್ನಾಟಕ ಸರ್ಕಾರ ಡೀಸೆಲ್ ಬೆಲೆಯನ್ನು ಹೆಚ್ಚಿಸಿದರೆ ಬಸ್ ಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಡೀಸೆಲ್ ಬೇಕಾಗಿರುವುದರಿಂದ KSRTC ಬಸ್ ಗಳ ಟಿಕೆಟ್ ದರವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಕರ್ನಾಟಕ ರಸ್ತೆ ಸಾರಿಗೆ ನಿಗಮ ಶೀಘ್ರದಲ್ಲೇ ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಇನ್ನು ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇರುವ ಕಾರಣ ಬಸ್ ಟಿಕೆಟ್ ದರಗಳು ಹೆಚ್ಚಾದರೆ ಇದರ ನೇರ ಪರಿಣಾಮ ಪುರುಷರ ಮೇಲೆ ಬೀರಲಿದೆ. ರಾಜ್ಯ ಸರ್ಕಾರ ಪೆಟ್ರೋಲ್- ಡೀಸೆಲ್ ಬೆಲೆ ಹೆಚ್ಚಿಸಿರುವುದರಿಂದ ಜನತೆಗೆ ಅನೇಕ ಸಮಸ್ಯೆಗಳು ಉಂಟಾಗುತ್ತಿದೆ ಎನ್ನಬಹುದು.

KSRTC Bus Ticket Price Hiked
Image Credit: Star Of Mysore

ಶೀಘ್ರದಲ್ಲೇ KSRTC ಬಸ್ ಟಿಕೆಟ್ ದರ ಏರಿಕೆ
ಲೋಕಸಭಾ ಚುನಾವಣೆಯ ಬೆನ್ನಲ್ಲೇ ರಾಜ್ಯ ಸಾರಿಗೆ ಸಂಸ್ಥೆ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದೆ. ಸದ್ಯದಲ್ಲೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಶೇ.10ರಿಂದ 15 ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಡೀಸೆಲ್, ಸಿಬ್ಬಂದಿ ವೇತನ ಹೆಚ್ಚಳ, ಬಿಡಿಭಾಗಗಳ ಬೆಲೆ ಏರಿಕೆ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬಸ್ ಟಿಕೆಟ್ ದರ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡುವ ಸಾಧ್ಯತೆ ಇದೆ. ಸಾರಿಗೆ ಬಸ್ ದರ ಏರಿಕೆ ಬಗ್ಗೆ ಚರ್ಚೆ ಆರಂಭವಾಗಿದ್ದು, ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ನಡೆಸುವ ಚಿಂತನೆಯೂ ನಡೆದಿದೆ ಎನ್ನಲಾಗುತ್ತಿದೆ.

Join Nadunudi News WhatsApp Group

KSRTC Ticket Price Update
Image Credit: News9 Live

Join Nadunudi News WhatsApp Group